---Advertisement---

ಬೀದರ್ ತಾಲೂಕಿನ ಜನವಾಡ ಗ್ರಾಮದಲ್ಲಿ 5 ಕೋಟಿ ವೆಚ್ಚದಲ್ಲಿ ಸರ್ಕಾರಿ ಆಸ್ಪತ್ರೆ: ರಹೀಂ ಖಾನ್

On: July 21, 2025 3:13 PM
Follow Us:
---Advertisement---

01/07/2025 ಜನವಾಡ ನಾಡ ಕಚೇರಿ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಪೊಲೀಸ್ ಇಲಾಖೆಯ ಸಹಯೋಗದಲ್ಲಿ ನಡೆದ ತಾಲೂಕಾ ಮಟ್ಟದ ಜನಸ್ಪಂದನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದ ರಹೀಂ ಖಾನ್.

ಸ್ಥಳದಲ್ಲಿಯೇ ಜನರ ಸಮಸ್ಯೆಗಳನ್ನು ಬಗೆಹರಿಸುವ ರಾಜ್ಯ ಸರ್ಕಾರದ ಜನಪ್ರಿಯ ಕಾರ್ಯಕ್ರಮ ಜನಸ್ಪಂದನ ಆಗಿದೆ. ಜನವಾಡ ಭಾಗದಲ್ಲಿ ಏನೇ ಸಮಸ್ಯೆಯಾಗಿರಲಿ ಜಿಲ್ಲೆಯ ಎಲ್ ಇಲಾಖೆಯ ಅಧಿಕಾರಿಗಳು ನೇರವಾಗಿ ಭೇಟಿ ಮಾಡಿ ಸಮಸ್ಯೆ ಬಗೆಹರಿಸಲಿದ್ದಾರೆ. ಈ ವಿಭಾಗದಲ್ಲಿ ಅನೇಕ ರಸ್ತೆಗಳ ನಿರ್ಮಾ ಕಾರ್ಯ ಪ್ರಗತಿಯಲ್ಲಿವೆ’ ಎಂದರು.

ಪಂಚಾಯಿತಿ ಮಟ್ಟದಲ್ಲಿ ಆಸ್ತಿಯ ಎ ಮತ್ತು ಬಿ ಖಾತಾ ಸೇವೆಗಳು

ಆಸ್ತಿಯ ಎ ಮತ್ತು ಬಿ ಖಾತಾ ಸೇವೆಗಳು ಪಂಚಾಯಿತಿ ಮಟ್ಟದಲ್ಲಿ ಕೂಡ ಶೀಘ್ರದಲ್ಲೇ ಆರಂಭವಾಗಲಿದೆ. ಯಾವುದೇ ಮಧ್ಯವರ್ತಿಗಳ ಹಾವಳಿ ಇಲ್ಲದೆ ಫಲಾನುಭವಿಗಳಿಗೆ ನೇರವಾಗಿ ಸೌಲಭ್ಯ ಒದಗಿಸುವ ಪಂಚ ಗ್ಯಾರಂಟಿಗಳು ಜನರ ಜೀವನ ಮಟ್ಟ ಸುಧಾರಿಸುತ್ತಿವೆ’ ಎಂದರು.

ಜನಸ್ಪಂದನ ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಮಾತನಾಡಿ, ‘ಜನಸ್ಪಂದನ ಕಾರ್ಯಕ್ರಮವು ಜನರಿಗೆ ಅತ್ಯಂತ ಉಪಯುಕ್ತವಾದ ಕಾರ್ಯಕ್ರಮವಾಗಿದೆ, ಇದರಿಂದ ಜನರು ನೇರವಾಗಿ ಸ್ಥಳದಲ್ಲಿಯೇ ಪರಿಹಾರ ಪಡೆದುಕೊಳ್ಳಬಹುದು’ ಎಂದರು. ಜಿಲ್ಲಾ ಪಂಚಾಯಿತಿ ಸಿಇಒ ಡಾ.ಗಿರೀಶ್ ಬದೋಲೆ ಮಾತನಾಡಿ ತಮ್ಮವ್ಯಾಪ್ತಿಯಲ್ಲಿ ಬರುವ ಸಮಸ್ಯೆಗಳು ಈಗಾಗಲೇ ಕೆಲವು ಇತ್ಯಾರ್ಥಗೊಳಿಸಲಾಗಿದ್ದು, ಇನ್ನುಳಿದವು ಶೀಘ್ರವಾಗಿ ಪರಿಹರಿ ಈ ಕಾರ್ಯಕ್ರಮವನ್ನು ಅರ್ಥಪೂರ್ಣವಾಗುವಂತೆ ಮಾಡುವುದಾಗಿ ತಿಳಿಸಿದರು.

ಜನಸ್ಪಂದನ ಕಾರ್ಯಕ್ರಮದಲ್ಲಿ ಒಟ್ಟು 253 ಅರ್ಜಿಗಳು ಬಂದವು. ಅದರಲ್ಲಿ ರಸ್ತೆ, ಮನೆ, ನೀರು, ಸಾರಿಗೆ, ವಿದ್ಯುತ್, ಜಮೀನು, ಒಳಚರಂಡಿ, ಸ್ವಚ್ಛತೆ, ಪಿಂಚಣಿ, ರೇಷನ್ ಕಾರ್ಡ್, ಗಂಗಾ ಕಲ್ಯಾಣ ಯೋಜನೆಯಡಿ ಬೋರವೆಲ್, ದೈಹಿಕ ಅಂಗವಿಕಲತೆ ಪ್ರಮಾಣ ಪತ್ರ ಸಮಸ್ಯೆ ಮತ್ತು ಜನವಾಡ ಮು ರಸ್ತೆಯಲ್ಲಿರುವ ಮದ್ಯ ಅಂಗಡಿ ಸ್ಥಳಾಂತರಿಸುವ ಕುರಿತು ಅರ್ಜಿಗಳು ಸ್ವೀಕರಿಸಿದರು. ಹಲವು ಅರ್ಜಿಗಳನ್ನು ಸ್ಥಳದಲ್ಲಿಯೇ
ಪರಿಹರಿಸಲಾಯಿತು. ಉಳಿದ ಅರ್ಜಿಗಳು 7 ದಿನದ ಒಳಗಾಗಿ ಇತ್ಯರ್ಥಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

Join WhatsApp

Join Now

RELATED POSTS

1 thought on “ಬೀದರ್ ತಾಲೂಕಿನ ಜನವಾಡ ಗ್ರಾಮದಲ್ಲಿ 5 ಕೋಟಿ ವೆಚ್ಚದಲ್ಲಿ ಸರ್ಕಾರಿ ಆಸ್ಪತ್ರೆ: ರಹೀಂ ಖಾನ್”

Leave a Comment