ಮುಗ್ಧಮ್ ಕಾಲೋನಿಯ ಅರಣ್ಯ ಪ್ರದೇಶದಲ್ಲಿ ಭಾನುವಾರ ಜಾನುವಾರಗಳ ಮೂಳೆಗಳು ದೊಡ್ಡ ಪ್ರಮಾಣದಲ್ಲಿ ಪತ್ತೆಯಾಗಿವೆ. ಇದನ್ನು ಕಂಡು ಸ್ಥಳೀಯರು ಪ್ರತಿಭಟನೆ ಆರಂಭಿಸಿ, ಅಧಿಕಾರಿಗಳಿಂದ ತಕ್ಷಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸುತ್ತಿದ್ದಾರೆ.
ಸ್ಥಳೀಯರು ಕಳೆದ ಕೆಲವು ದಿನಗಳಿಂದ ಬೆಟ್ಟದ ಪ್ರದೇಶದಲ್ಲಿ ಮೂಳೆಗಳು ಮತ್ತು ರಕ್ತದ ಚಿಹ್ನೆಗಳು ಹರಡಿರುವುದನ್ನು ಗಮನಿಸಿದ್ದಾರೆ. ಈ ಸ್ಥಳವು ಅಕ್ರಮವಾಗಿ ಜಾನುವಾರಗಳ ಹತ್ಯೆಗೆ ಬಳಸಲ್ಪಡುತ್ತಿರಬಹುದು ಎಂದು ಶಂಕೆ ವ್ಯಕ್ತವಾಗಿದೆ. ಈ ಘಟನೆ ತಿಳಿದು ಹಿಂತಿರುವ ನಂತರ ಹಿಂದೂ ಸಂಘಟನೆ ಸದಸ್ಯರು ಮತ್ತು ಸ್ಥಳೀಯ ಮುಖಂಡರು ಸ್ಥಳಕ್ಕೆ ಆಗಮಿಸಿದ್ದಾರೆ.
ನಂತರ ಮಹಾನಗರ ಪಾಲಿಕೆಯ ನೌಕರರು ಈ ಅವಶೇಷಗಳನ್ನು ಸಂಗ್ರಹಿಸಿ ವಿಲೇವಾರಿ ಮಾಡಿದ್ದಾರೆ ಎಂದು ಆರೋಪಗಳು ಎದುರಾಗಿದೆ. ದೊಡ್ಡ ಪ್ರಮಾಣದ ಮೂಳೆಗಳನ್ನು ನೋಡಿದಾಗ, ಸಂಘಟಿತ ತಂಡ ಜಾನುವಾರ ಹತ್ಯೆಯಲ್ಲಿ ಭಾಗಿಯಾಗಿರುವುದಾಗಿ ಅನುಮಾನ ವ್ಯಕ್ತವಾಗಿದೆ.
ಹಿಂದೂ ಸಂಘಟನೆಗಳು ಈ ಪ್ರದೇಶದಲ್ಲಿ ನಡೆಯುತ್ತಿರುವ ಜಾನುವಾರ ಹತ್ಯೆಯನ್ನು ತಕ್ಷಣ ನಿಲ್ಲಿಸುವಂತೆ ಒತ್ತಾಯಿಸಿವೆ. ಈಗಾಗಲೇ ಪೊಲೀಸರು ಕಾರ್ಯಾಚರಣೆ ನಡೆಸಿ ಕೆಲವರನ್ನು ಬಂಧಿಸಿ, ನಾಕಾಬಂದಿ ಮಾಡಿದ್ದರೂ ಜಾನುವಾರಗಳ ಪೂರೈಕೆ ಮತ್ತು ಹತ್ಯೆ ಮುಂದುವರಿದಿದೆ ಎಂದು ಸಂಘಟನೆಗಳು ತಿಳಿಸಿದ್ದಾರೆ.
ಹಿಂದೂ ಸಂಘಟನೆಗಳ ಕಾರ್ಯಕರ್ತರು ಈ ಪ್ರದೇಶದಲ್ಲಿ ಗೋಮಾಂಸದ ಅಕ್ರಮ ಕಳ್ಳಸಾಗಣೆ ನಡೆಯುತ್ತಿದೆ ಎಂದು ವರದಿ ಮಾಡಿದ್ದಾರೆ. ಅವರು ತಿಳಿಸಿದಂತೆ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿಯೂ ಹಾಗೂ ಗೋವಾ ರಾಜ್ಯದಲ್ಲಿ ಗೋಮಾಂಸ ಸಾಗಿಸುತ್ತಿದ್ದ ವಾಹನಗಳನ್ನು ಹಲವಾರು ಬಾರಿ ಹಿಂದೂ ಕಾರ್ಯಕರ್ತರು ಹಿಂಬಾಲಿಸಿದ್ದರು. ಕೆಲವು ಸಂದರ್ಭಗಳಲ್ಲಿ ದುಬಾರಿ ಕಾರುಗಳಲ್ಲಿ ಗೋಮಾಂಸ ಸಾಗಿಸಲಾಗುತ್ತಿತ್ತು ಎಂದು ಅವರು ತಿಳಿಸಿದ್ದಾರೆ.
ಈ ಘಟನೆಯಿಂದ ಭಟ್ಕಳ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ತೀವ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಗೋಹತ್ಯೆ ನಿಷೇಧ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಮತ್ತು ಪೊಲೀಸ್ ಆಡಳಿತ ಜಾಗರೂಕರಾಗಿರಬೇಕು ಎಂದು ನಾಗರಿಕರು ಒತ್ತಾಯಿಸಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಈ ಪ್ರದೇಶದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಈ ಬಗ್ಗೆ ಕಠಿಣ ಕ್ರಮಕ್ಕೆ ಆಗ್ರಹಿಸಿ ಶೀಘ್ರದಲ್ಲಿಯೇ ಸ್ಥಳೀಯ ಮುಖಂಡರು ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಲಿದ್ದಾರೆ.
ಈ ಘಟನೆಗೆ ಪ್ರತಿಕ್ರಿಯಿಸಿದ ಹಿಂದೂ ಜನಜಾಗೃತಿ ಸಮಿತಿಯ ಬೆಂಗಳೂರು ವಕ್ತಾರ ಶ್ರೀ. ಮೋಹನ ಗೌಡ ಇವರು, “ಸ್ಥಳೀಯ ಶಾಸಕರು ಮತ್ತು ಆಡಳಿತ ಈ ಅಕ್ರಮ ಚಟುವಟಿಕೆಗಳ ಕಡೆಗೆ ಹೇಗೆ ಕಣ್ಮುಚ್ಚಿ ಕುಳಿತುಕೊಳ್ಳಬಹುದು? ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯಿದೆ ಇನ್ನೂ ಜಾರಿಯಲ್ಲಿದೆ. ಪೊಲೀಸ್, ಜಿಲ್ಲಾಡಳಿತ ಮತ್ತು ಸ್ಥಳೀಯ ನಾಗರಿಕ ಸಂಸ್ಥೆಗಳು ಈ ಬಗ್ಗೆ ಕ್ರಮ ಕೈಗೊಳ್ಳಬೇಕು” ಎಂದು ಹೇಳಿದ್ದಾರೆ.
ಈ ಘಟನೆಯು ಜಾನುವಾರಗಳ ಅಕ್ರಮ ವ್ಯಾಪಾರ ಮಾಡುವ ದೊಡ್ಡ ಗ್ಯಾಂಗ್ ಭಾಗವಾಗಿದೆಯೇ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಜಿಲ್ಲಾಡಳಿತ ಈ ಬಗ್ಗೆ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.






