ರಾಜ್ಯದ ಹಣವನ್ನು ದುರುಪಯೋಗ ಮಾಡಿಕೊಂಡ ಈ ಅಧಿಕಾರಿಯ ವಿರುದ್ಧ ಧಾರವಾಡ ಜಿಲ್ಲಾಡಳಿತವು ತಕ್ಷಣ ಕ್ರಮ ಕೈಗೊಂಡಿದ್ದು, ಅವರನ್ನು ಅಮಾನತುಗೊಳಿಸುವ ಆದೇಶ ಹೊರಡಿಸಿದೆ. ಅಧಿಕಾರಿಗಳಿಂದ ಇಂತಹ ಅಕ್ರಮ ನಡೆದಿರುವುದು ಬಹಿರಂಗವಾಗುತ್ತಿದ್ದಂತೆ ಸ್ಥಳೀಯ ಆಡಳಿತ ಎಚ್ಚರಗೊಂಡು, ಭ್ರಷ್ಟಾಚಾರದ ವಿರುದ್ಧ ಶಿಸ್ತು ಕ್ರಮ ಜಾರಿಗೊಳಿಸಿರುವುದು ಗಮನಾರ್ಹವಾಗಿದೆ.
ಆಗಸ್ಟ್ 31ರಂದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಗಳಗಿಹುಲಕೊಪ್ಪ ಗ್ರಾಮದಲ್ಲಿ ಕರೆಂಟ್ ಬಿಲ್ ಸಂಬಂಧಿತ ಹಗರಣ ಬಯಲಾಗಿತ್ತು. ಗ್ರಾಮ ಪಂಚಾಯಿತಿಯ ಪಿಡಿಓ ಅಬ್ದುಲ್ ರಜಾಕ್ ಹೆಚ್. ಮನಿಯಾರ್ ಅವರು ಸರ್ಕಾರಕ್ಕೆ ಸೇರಿದ ಹಣವನ್ನು ಅಕ್ರಮವಾಗಿ ಖಾಸಗಿ ವ್ಯಕ್ತಿಗಳ ಖಾತೆಗಳಿಗೆ ವರ್ಗಾಯಿಸಿರುವುದು ದಾಖಲೆಗಳ ಮೂಲಕ ಬಹಿರಂಗವಾಗಿದೆ.
ಈ ಬೆಳವಣಿಗೆಯಿಂದಾಗಿ ಗ್ರಾಮದ ಜನರಲ್ಲಿ ಅಸಮಾಧಾನ ವ್ಯಕ್ತವಾಗಿದ್ದು, ಆಡಳಿತ ವ್ಯವಸ್ಥೆಯ ಮೇಲಿನ ನಂಬಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಹೀಗಾಗಿ ಜಿಲ್ಲೆಯ ಜಿ.ಪಂ ಸಿಇಓ ಭುವನೇಶ್ವರ ಅವರು ಈ ಸಂಬಂಧ ದಾಖಲೆಗಳನ್ನು ಪರಿಶೀಲಿಸಿ ವಿಚಾರಣೆ ನಡೆಸಿದಾಗ ಈ ಗ್ರಾಮ ಪಂಚಾಯಿತಿ ಪಿಡಿಓ ಅಬ್ದುಲ್ ರಜಾಕ್ ಹೆಚ್ ಮನಿಯಾರ್ ಕಲ್ಲಾಟ ಬಯಲಾಗಿದ್ದು ಕೂಡಲೇ ಆತನ್ನು ಅಮಾನತು ಮಾಡಿ ಜಿ.ಪಂ ಸಿಇಓ ಭುವನೇಶ್ವರ ಆದೇಶ ಹೊರಡಿಸಿದ್ದಾರೆ.






