ಕಾನಾಹೊಸಹಳ್ಳಿ ಸಮೀಪ, ಬಿಷ್ಣಹಳ್ಳಿ ಕ್ರಾಸ್ ಬಳಿ ರಾಹೆ 50ರಲ್ಲಿ ಮಂಗಳವಾರ ಮುಂಜಾನೆ ಸ್ಲೀಪರ್ ಬಸ್ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಮನೋಜ್ (28) ಮತ್ತು ಸುರೇಶ್ (45) ಎಂದು ಗುರುತಿಸಲಾಗಿದೆ.
ಖಾಸಗಿ ಬಸ್ ಮುದಗಲ್ ನಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದಾಗ, ಕಾನಾಹೊಸಹಳ್ಳಿ ಸಮೀಪದ ಬಿಷ್ಣಹಳ್ಳಿ ಕ್ರಾಸ್ ಬಳಿಯ ರಾಹೆ 50ರಲ್ಲಿ ಲಾರಿಯೊಂದರೊಂದಿಗೆ ಅಪಘಾತ ಸಂಭವಿಸಿದೆ.
ಬಸ್ ಚಾಲಕ ವೇಗವಾಗಿ ಸಾಗಿಸುತ್ತಿದ್ದಾಗ, ಲಾರಿಯನ್ನು ಓವರ್ ಟೇಕ್ ಮಾಡುವ ಪ್ರಯತ್ನದಲ್ಲಿ ಬಸ್ ಎಡಭಾಗದಿಂದ ಲಾರಿಯ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದ್ದು, ಪರಿಣಾಮ ಬಸ್ ಮುಂಭಾಗ ನಜ್ಜುಗುಜ್ಜಾಗಿದೆ. ಇದರ ಪರಿಣಾಮವಾಗಿ ಮುಂದಿನ ಸೀಟಿನಲ್ಲಿ ಕುಳಿತಿದ್ದ ಇಬ್ಬರು ಸ್ಥಳದಲ್ಲಿಯೇ ಮೃತರಾದರು.
ಅಪಘಾತದ ಸುದ್ದಿ ತಕ್ಷಣವೇ ಪಿಎಸ್‌ಐ ಹಾಗೂ ಸಿದ್ರಾಮ್ ಬಿದ್ರಾಣಿ ಸ್ಥಳಕ್ಕೆ ತಲುಪಿದ್ದು, ಗಾಯಗೊಂಡವರನ್ನು ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಈ ಪ್ರಕರಣ ಸಂಬಂಧ ಕಾನಾಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಾಥಮಿಕ ದೂರು ದಾಖಲಾಗಿದ್ದು, ಪ್ರಕರಣದ ತನಿಖೆ ಪ್ರಾರಂಭಿಸಲಾಗಿದೆ.






