ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯವೊಂದು ನಡೆದಿದ್ದು, ಸೀರೆ ಕಳವು ಮಾಡಿದ್ದಾರೆ ಎಂದು ಆರೋಪಿಸಿ ನಡುರಸ್ತೆಯಲ್ಲೇ ಮಹಿಳೆಗೆ ಬಟ್ಟೆ ಅಂಗಡಿ ಮಾಲೀಕರೊಬ್ಬರು ಬೂಟುಕಾಲಿನಿಂದ ಒದ್ದಿದ್ದಾರೆ.
ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅವೆನ್ಯೂ ರಸ್ತೆಯ ಮಾಯಾ ಸಿಲ್ಕ್ ಸ್ಯಾರೀಸ್ ಅಂಗಡಿ ಮಾಲೀಕ ಬಾಬುಲಾಲ್ ಎಂಬುವರು ಮಹಿಳೆ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಸಾರ್ವಜನಿಕರು ದೂರಿದ್ದಾರೆ.
ಮಾಲೀಕ ಮಾತ್ರವಲ್ಲದೇ ಅಂಗಡಿ ಸಿಬ್ಬಂದಿ ಸಹ ಮಹಿಳೆಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ನೋವಿನಿಂದ ಮಹಿಳೆ ಕಿರುಚಾಡಿ ಅಂಗಲಾಚಿದರೂ ಸಹ ಬಿಟ್ಟಿಲ್ಲ. ಮಹಿಳೆ ಮೇಲೆ ಹಲ್ಲೆ ಮಾಡಿದ ದೃಶ್ಯ ಸ್ಥಳೀಯರ ಮೊಬೈಲ್ ನಲ್ಲಿ ಸೆರೆಯಾಗಿದೆ.
ಹಲ್ಲೆಯ ವಿಡಿಯೋ ವೈರಲ್ ಆಗಿದ್ದು, ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ. ಮಹಿಳೆಯನ್ನು ರಸ್ತೆಯಲ್ಲಿ ಎಳೆದಾಡಿ ಖಾಸಗಿ ಅಂಗಕ್ಕೆ ಮಾಲೀಕ ಒದ್ದಿದ್ದಾನೆ. ನೋವಿನಿಂದ ಗೋಳಾಡುತ್ತಿದ್ದರೂ ಬಿಡದೆ ಹಲ್ಲೆ ಮಾಡಿದ್ದಾನೆ.
ಮಹಿಳೆ ಮೇಲೆ ಹಲ್ಲೆ ನಡೆಸುವ ದೃಶ್ಯ ಸ್ಥಳೀಯರ ಮೊಬೈಲ್ ನಲ್ಲಿ ಸೆರೆಯಾಗಿದೆ. ಮಹಿಳೆ ರಕ್ಷಣೆಗೆ ನಿಲ್ಲಬೇಕಿದ್ದ ಪೊಲೀಸರು ಕ್ರಮ ಕೈಗೊಂಡಿಲ್ಲ. ಪೂರ್ವಾಪರ ವಿಚಾರಿಸದೇ ಮಹಿಳೆಯ ವಿರುದ್ಧ ಪೊಲೀಸರು ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ.






