---Advertisement---

ಗೃಹಲಕ್ಷ್ಮಿ ಯೋಜನೆ ಹಣ ಎಲ್ಲಿ ಹೋಯ್ತು ಎಂದು ಪ್ರಶ್ನಿಸಿದ ಬಿಜೆಪಿ ಶಾಸಕ

On: December 29, 2025 10:41 AM
Follow Us:
---Advertisement---

ಗೃಹಲಕ್ಷ್ಮಿ ಯೋಜನೆಯ ಎರಡು ತಿಂಗಳ ಹಣ ಇನ್ನೂ ಬಿಡುಗಡೆಯಾಗದೆ ಇರುವ ವಿಚಾರ ಮತ್ತೆ ರಾಜ್ಯ ರಾಜಕಾರಣದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಚಳಿಗಾಲದ ಅಧಿವೇಶನದಲ್ಲಿ ಈ ವಿಷಯ ಪ್ರಸ್ತಾಪಿಸಿದ್ದ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಇದೀಗ ಮತ್ತೊಮ್ಮೆ ಸರ್ಕಾರದ ವಿರುದ್ಧ ಧ್ವನಿ ಎತ್ತಿದ್ದಾರೆ.
ಹುಬ್ಬಳ್ಳಿ, ಡಿಸೆಂಬರ್ 29:
ಗೃಹಲಕ್ಷ್ಮಿ ಯೋಜನೆ (Gruhalakshmi Scheme) ಹಣ ಬಿಡುಗಡೆ ಕುರಿತು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ (BJP) ಶಾಸಕ ಮಹೇಶ್ ಟೆಂಗಿನಕಾಯಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಫೆಬ್ರವರಿ ಹಾಗೂ ಮಾರ್ಚ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಇನ್ನೂ ಫಲಾನುಭವಿಗಳ ಖಾತೆಗೆ ಜಮೆಯಾಗಿಲ್ಲ ಎಂದು ಆರೋಪಿಸಿದರು.
ಈ ಎರಡು ತಿಂಗಳ ಹಣ ಸೇರಿ ಸುಮಾರು 5 ಸಾವಿರ ಕೋಟಿ ರೂ. ಮೊತ್ತ ಎಲ್ಲಿಗೆ ಹೋಯ್ತು ಎಂಬ ಪ್ರಶ್ನೆಯನ್ನು ಅವರು ಎತ್ತಿದ್ದಾರೆ. ಅಧಿವೇಶನದಲ್ಲಿ ವಿಷಯ ಪ್ರಸ್ತಾಪವಾದ ಬಳಿಕ ಅಧಿಕಾರಿಗಳಿಗೆ ಮಾಹಿತಿ ನೀಡದಂತೆ ತಾಕೀತು ಮಾಡಲಾಗಿದೆ ಎಂದು ಕೂಡ ಮಹೇಶ್ ಟೆಂಗಿನಕಾಯಿ ಆರೋಪಿಸಿದರು.
ಹತ್ತನೇ ತಾರೀಖಿನಿಂದಲೇ ಅಧಿಕಾರಿಗಳಿಗೆ ಯಾವುದೇ ಮಾಹಿತಿ ನೀಡದಂತೆ ಸೂಚನೆ ನೀಡಲಾಗಿದೆ ಎನ್ನಲಾಗುತ್ತಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನಿರ್ದೇಶಕರಿಗೆ ಫೆಬ್ರವರಿ–ಮಾರ್ಚ್ ತಿಂಗಳ ಹಣದ ಕುರಿತು ಮಾಹಿತಿ ಕೇಳಿದರೂ ಸ್ಪಷ್ಟ ಉತ್ತರ ಸಿಕ್ಕಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

Join WhatsApp

Join Now

RELATED POSTS

Leave a Comment