---Advertisement---

ಬೀದರ್‌ | 6 ಗಂಟೆಯೊಳಗೆ ಚಿನ್ನಾಭರಣ ಕಳವು ಪ್ರಕರಣ ಭೇದಿಸಿದ ಪೊಲೀಸರು

On: January 30, 2026 7:42 AM
Follow Us:
---Advertisement---

ಬೀದರ್‌: ಚಿನ್ನಾಭರಣ ಕಳವು ಪ್ರಕರಣವನ್ನು ಆರು ಗಂಟೆಯೊಳಗೆ ಭೇದಿಸಿ ಆರೋಪಿಯನ್ನು ಬಂಧಿಸುವಲ್ಲಿ ಭಾಲ್ಕಿ ತಾಲ್ಲೂಕಿನ ಖಟಕಚಿಂಚೋಳಿ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಕಳವುಗೊಳಗಾದ ಚಿನ್ನಾಭರಣಗಳನ್ನು ಮೂಲ ಮಾಲೀಕರಿಗೆ ಹಸ್ತಾಂತರಿಸಲಾಗಿದೆ.

ಇದನ್ನು ಓದಿ: ಬೆಂಗಳೂರು: ₹4 ಲಕ್ಷ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಇನ್ಸ್‌ಪೆಕ್ಟರ್ ಗೋವಿಂದರಾಜು

ಇದನ್ನು ಓದಿ: ಚಿನ್ನದ ಬೆಲೆ ನೇರ ಮೇಲೆ: ಹೂಡಿಕೆದಾರರಿಗೆ ಎಚ್ಚರಿಕೆ!

ಭಾಲ್ಕಿ ತಾಲ್ಲೂಕಿನ ಕುರುಬಖೇಳಗಿ ಗ್ರಾಮದ ಆನಂದ್‌ (50) ಬಂಧಿತ ಆರೋಪಿ. ಸಿಂದಗಿ ತಾಲ್ಲೂಕಿನ ಬಂಟನೂರಿನ ಈರಪ್ಪ ಬಡಿಗೇರ ಅವರಿಗೆ ಸೇರಿದ ₹3.15 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಇದರಲ್ಲಿ 6 ಗ್ರಾಂ ಹಾಗೂ 5 ಗ್ರಾಂ ತೂಕದ ಎರಡು ಚಿನ್ನದ ಉಂಗುರಗಳು ಮತ್ತು ಒಂದು ತೊಲ ತೂಕದ ಚಿನ್ನದ ಲಾಕೆಟ್‌ ಸೇರಿವೆ. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪ್ರದೀಪ್‌ ಗುಂಟಿ ಅವರು ಈರಪ್ಪ ಬಡಿಗೇರ ಅವರನ್ನು ತಮ್ಮ ಕಚೇರಿಗೆ ಕರೆದು ಚಿನ್ನಾಭರಣಗಳನ್ನು ಹಸ್ತಾಂತರಿಸಿದರು.

ಜನವರಿ 27ರಂದು ಈರಪ್ಪ ಬಡಿಗೇರ ಅವರು ಹುಮನಾಬಾದ್‌ನ ವೀರಭದ್ರೇಶ್ವರ ಜಾತ್ರಾ ಮಹೋತ್ಸವದ ದೇವಸ್ಥಾನಕ್ಕೆ ಭೇಟಿ ನೀಡಿ, ದರ್ಶನ ಮುಗಿಸಿಕೊಂಡು ಹುಮನಾಬಾದ್‌ನಿಂದ ಭಾಲ್ಕಿಗೆ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಖಟಕಚಿಂಚೋಳಿ ಠಾಣೆ ವ್ಯಾಪ್ತಿಯ ಕಪಲಾಪೂರ ಕ್ರಾಸ್ ಬಳಿ ಚಿನ್ನಾಭರಣ ಕಳವು ನಡೆದಿದೆ. ಈ ಕುರಿತು ಖಟಕಚಿಂಚೋಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣ ದಾಖಲಾದ ಕೆಲವೇ ಗಂಟೆಗಳೊಳಗೆ ಭಾಲ್ಕಿ ಡಿವೈಎಸ್ಪಿ ಶಿವಾನಂದ ಪವಾಡಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಖಟಕಚಿಂಚೋಳಿ ಠಾಣೆಯ ಪಿಎಸ್‌ಐ ಪ್ರಭಾಕರ ಪಾಟೀಲ್‌ ಹಾಗೂ ಅಪರಾಧ ವಿಭಾಗದ ಸಿಬ್ಬಂದಿ ಬುಡ್ಡಪ್ಪ ಮತ್ತು ಶ್ರೀಕಾಂತ ಅವರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದರು. ಈ ಸಾಧನೆಯನ್ನು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪ್ರದೀಪ್‌ ಗುಂಟಿ ಅವರು ಶ್ಲಾಘಿಸಿದ್ದಾರೆ.

Join WhatsApp

Join Now

RELATED POSTS