---Advertisement---

RRB Recruitment 2026: ರೈಲ್ವೆ ಇಲಾಖೆಯಲ್ಲಿ 21 ಸಾವಿರಕ್ಕೂ ಅಧಿಕ ಉದ್ಯೋಗಾವಕಾಶ

On: February 3, 2026 12:28 PM
Follow Us:
---Advertisement---

ನವದೆಹಲಿ: ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವ ಅಭ್ಯರ್ಥಿಗಳಿಗೆ ಭಾರತೀಯ ರೈಲ್ವೆ ಭರ್ಜರಿ ಅವಕಾಶ ನೀಡಿದೆ. ರೈಲ್ವೆ ನೇಮಕಾತಿ ಮಂಡಳಿ (RRB) ದೇಶದಾದ್ಯಂತ ಒಟ್ಟು 21,997 ಗ್ರೂಪ್–ಡಿ ಹುದ್ದೆಗಳ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ. 10ನೇ ತರಗತಿ ಉತ್ತೀರ್ಣರಾದ ಅಭ್ಯರ್ಥಿಗಳು ಈ ಕೇಂದ್ರ ಸರ್ಕಾರಿ ಉದ್ಯೋಗಕ್ಕೆ ಅರ್ಜಿ ಸಲ್ಲಿಸಬಹುದು.

ಇದನ್ನು ಓದಿ: ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ನಿಯಮಗಳು ಜಾರಿಗೆ

ಇದನ್ನು ಓದಿ:ಸರಕಾರಿ ನೌಕರರು ತಮ್ಮ ಹಿರಿಯ ಪೋಷಕರನ್ನು ನಿರ್ಲಕ್ಷಿಸಿದರೆ ಸಂಬಳಕ್ಕೆ ಬೀಳಲಿದೆ ಕತ್ತರಿ?

ಅರ್ಜಿ ಪ್ರಕ್ರಿಯೆ rrbapply.gov.in ವೆಬ್‌ಸೈಟ್ ಮೂಲಕ ನಡೆಯಲಿದ್ದು, ಜನವರಿ 31ರಿಂದ ಮಾರ್ಚ್ 2ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಅಭ್ಯರ್ಥಿಗಳು ಒಂದು ರೈಲ್ವೆ ವಲಯಕ್ಕೆ ಮಾತ್ರ ಅರ್ಜಿ ಸಲ್ಲಿಸಬೇಕು. ಒಂದಕ್ಕಿಂತ ಹೆಚ್ಚು ವಲಯಗಳನ್ನು ಆಯ್ಕೆ ಮಾಡಿದರೆ ಅರ್ಜಿ ತಿರಸ್ಕೃತವಾಗುತ್ತದೆ.

ಅಭ್ಯರ್ಥಿಗಳ ವಯೋಮಿತಿ 18ರಿಂದ 33 ವರ್ಷಗಳೊಳಗೆ ಇರಬೇಕು. ಮೀಸಲು ವರ್ಗದ ಅಭ್ಯರ್ಥಿಗಳಿಗೆ ಸರ್ಕಾರದ ನಿಯಮಾನುಸಾರ ವಯೋಸಡಿಲಿಕೆ ಲಭ್ಯವಿರುತ್ತದೆ.

ಆಯ್ಕೆ ಪ್ರಕ್ರಿಯೆಯಲ್ಲಿ ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT), ನಂತರ ದೈಹಿಕ ದಕ್ಷತಾ ಪರೀಕ್ಷೆ, ದಾಖಲೆ ಪರಿಶೀಲನೆ ಹಾಗೂ ವೈದ್ಯಕೀಯ ಪರೀಕ್ಷೆ ಒಳಗೊಂಡಿರುತ್ತದೆ. ಪರೀಕ್ಷೆಯಲ್ಲಿ ಸಾಮಾನ್ಯ ವಿಜ್ಞಾನ, ಗಣಿತ, ತಾರ್ಕಿಕ ಸಾಮರ್ಥ್ಯ ಮತ್ತು ಪ್ರಚಲಿತ ವಿದ್ಯಮಾನಗಳಿಗೆ ಸಂಬಂಧಿಸಿದ ಪ್ರಶ್ನೆಗಳು ಇರಲಿವೆ.

ಆಯ್ಕೆಯಾದ ಅಭ್ಯರ್ಥಿಗಳಿಗೆ ಲೆವೆಲ್–1 ಅಡಿಯಲ್ಲಿ ತಿಂಗಳಿಗೆ 18,000 ರೂ. ಮೂಲ ವೇತನದೊಂದಿಗೆ ಇತರೆ ಕೇಂದ್ರ ಸರ್ಕಾರದ ಭತ್ಯೆಗಳು ದೊರೆಯಲಿವೆ.

ಇದನ್ನು ಓದಿ:SSLC ಪಾಸಾದ ಮಹಿಳೆಯರಿಗೆ ಸಿಹಿಸುದ್ದಿ ಅಂಗನವಾಡಿ ಕಾರ್ಯಕರ್ತೆ & ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಅರ್ಜಿ ಶುಲ್ಕ ಸಾಮಾನ್ಯ ಮತ್ತು ಓಬಿಸಿ ಅಭ್ಯರ್ಥಿಗಳಿಗೆ 500 ರೂ. ಆಗಿದ್ದು, ಪರೀಕ್ಷೆ ಬರೆದ ನಂತರ ಭಾಗಶಃ ಮರುಪಾವತಿ ಮಾಡಲಾಗುತ್ತದೆ. ಎಸ್‌ಸಿ, ಎಸ್‌ಟಿ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ 250 ರೂ. ಶುಲ್ಕವನ್ನು ಸಂಪೂರ್ಣವಾಗಿ ಹಿಂತಿರುಗಿಸಲಾಗುತ್ತದೆ.

ಕಡಿಮೆ ವಿದ್ಯಾರ್ಹತೆಯೊಂದಿಗೆ ಸ್ಥಿರ ಮತ್ತು ಭದ್ರ ಕೇಂದ್ರ ಸರ್ಕಾರಿ ಉದ್ಯೋಗ ಪಡೆಯಲು ಇದು ಅಪರೂಪದ ಅವಕಾಶವಾಗಿದ್ದು, ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ.

Join WhatsApp

Join Now

RELATED POSTS