ಬೀದರ್: ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಜಮಲಪೂರ್ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿದ ಬಳಿಕ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ. ಶಾಲೆಯಲ್ಲಿ ಎಂದಿನಂತೆ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ವಿತರಿಸಲಾಗಿದ್ದು, ಊಟ ಸೇವಿಸಿದ ಕೆಲವೇ ಕ್ಷಣಗಳಲ್ಲಿ ಹಲವು ಮಕ್ಕಳಿಗೆ ವಾಂತಿ ಹಾಗೂ ಬೇಧಿ ಕಾಣಿಸಿಕೊಂಡಿದೆ.
ಮಕ್ಕಳ ಸ್ಥಿತಿ ಗಂಭೀರವಾಗುತ್ತಿದ್ದಂತೆ ಶಿಕ್ಷಕರು ಹಾಗೂ ಪೋಷಕರು ತಕ್ಷಣವೇ ಅವರನ್ನು ಔರಾದ್ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದರು. ಆಹಾರದಲ್ಲಿ ಹುಳುಗಳು ಪತ್ತೆಯಾಗಿರುವುದರಿಂದ ಪೋಷಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಡುಗೆ ಪದಾರ್ಥಗಳನ್ನು ಸಮರ್ಪಕವಾಗಿ ಸ್ವಚ್ಛಗೊಳಿಸದ ಅಡುಗೆ ಸಿಬ್ಬಂದಿಯ ನಿರ್ಲಕ್ಷ್ಯವೇ ಈ ಘಟನೆಗೆ ಕಾರಣವೆಂದು ಆರೋಪಿಸಲಾಗಿದೆ.
ಇದನ್ನು ಓದಿ: ನೀರು ಕುಡಿಯೋಕೆ ಯಾವ ಬಾಟಲ್ ಸೂಕ್ತ?.. ಇಲ್ಲಿದೆ ಸಮಗ್ರ ಮಾಹಿತಿ, ಇದ್ರಲ್ಲಿ ಒಂದು ಮಾತ್ರ ತುಂಬಾ ಡೇಂಜರ್!!
ಇದನ್ನು ಓದಿ: ಹೆಂಡತಿಯ ಅನುಮತಿ ಇಲ್ಲದೆ ಮದ್ಯಪಾನ ಮಾಡಿದರೆ ಜೈಲಾ? ವೈರಲ್ ಸುದ್ದಿಯ ಸತ್ಯವೇನು?
ಘಟನೆ ವಿಷಯ ತಿಳಿಯುತ್ತಿದ್ದಂತೆ ತಹಶೀಲ್ದಾರ್ ಹಾಗೂ ಬಿಇಒ ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ಸ್ಥಿತಿಯನ್ನು ಪರಿಶೀಲಿಸಿದರು. ಸದ್ಯ ಎಲ್ಲಾ ಮಕ್ಕಳು ಚೇತರಿಸಿಕೊಳ್ಳುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಈ ರೀತಿಯ ಘಟನೆಗಳು ಮರುಕಳಿಸಬಾರದು ಎಂದು ಪೋಷಕರು ಹಾಗೂ ಗ್ರಾಮಸ್ಥರು ಒತ್ತಾಯಿಸಿದ್ದು, ನಿರ್ಲಕ್ಷ್ಯ ತೋರಿದ ಶಿಕ್ಷಕರು ಹಾಗೂ ಅಡುಗೆ ಸಿಬ್ಬಂದಿ ವಿರುದ್ಧ ಶಿಕ್ಷಣ ಇಲಾಖೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.
ಇನ್ನು ಓದಿ: ಬೀದರ್: ಕಬ್ಬಿನ ದರ ಟನ್ಗೆ ₹3150 ನಿಗದಿ





