---Advertisement---

“ನಿಮ್ಮ‌ ಪ್ರೀತಿ ಅಭಿಮಾನಕ್ಕೆ ನಾನು ಜೀವನ ಪರ್ಯಂತ ಆಭಾರಿ”: ಜೈಲಿಂದ ಅಭಿಮಾನಿಗಳಿಗೆ ಸಂದೇಶ ಕಳಿಸಿದ ನಟ ದರ್ಶನ್. Actor Darshan sent a message to fans from jail

On: August 17, 2025 6:06 PM
Follow Us:
Actor Darshan sent a message to fans from jail
---Advertisement---

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಜಾಮೀನು ರದ್ದುಪಡಿಸಿದ ಹಿನ್ನೆಲೆಯಲ್ಲಿ ನಟ ದರ್ಶನ್ ಜೈಲು ಸೇರಿದ್ದಾರೆ. ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ರದ್ದುಗೊಂಡು ಮತ್ತೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್‌ ತಮ್ಮ ಪತ್ನಿ ವಿಜಯಲಕ್ಷ್ಮಿ ಮೂಲಕ ಅಭಿಮಾನಿಗಳಿಗೆ ಸಂದೇಶವೊಂದನ್ನು ಕಳುಹಿಸಿದ್ದಾರೆ.

ತಮ್ಮ ಅಭಿಮಾನಿಗಳಿಗೆ ಜೈಲಿನಿಂದ ದರ್ಶನ್ ಸಂದೇಶ ಕಳುಹಿಸಿದ್ದು, ಅವರ ಸಂದೇಶವನ್ನು ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಮಾಡಿದ್ದಾರೆ.ಈ ಸಂದೇಶವನ್ನು ವಿಜಯಲಕ್ಷ್ಮಿ ತಮ್ಮ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್‌ ಮಾಡಿದ್ದಾರೆ.

“ಕನ್ನಡ ಕಲಾಭಿಮಾನಿಗೆ ಹಾಗೂ ನನ್ನ ಸೆಲೆಬ್ರಿಟಿಗಳಿಗೆ ಈ ನಿಮ್ಮ‌ ಪ್ರೀತಿಯ ದಾಸನ ಶಿರ ಸಾಷ್ಟಾಂಗ ನಮಸ್ಕಾರಗಳು.

ನನ್ನ ಸುಖದಲ್ಲಿ ಭಾಗಿಯಾಗಿ, ಕಷ್ಟದಲ್ಲಿ ಬೆನ್ನೆಲುಬಾಗಿ ನಿಂತ ನಿಮ್ಮ‌ ಪ್ರೀತಿ ಅಭಿಮಾನಕ್ಕೆ ನಾನು ಜೀವನ ಪರ್ಯಂತ ಆಭಾರಿ. ನಾನು ಎಲ್ಲೆ ಇದ್ದರು ಹೇಗೆ ಇದ್ದರು ನಿಮ್ಮಗಳ ಶ್ರೇಯೋಭಿಲಾಷೆಯನ್ನೆ ಬಯಸುತ್ತೇನೆ.

ಪ್ರಸಕ್ತ ವಿದ್ಯಮಾನ ಏನೇ ಇದ್ದರು, ನನ್ನ ನಂಬಿ‌ ಕನಸು ಕಂಡಿರುವ ನಿರ್ದೇಶಕರ ಹಾಗು ನನ್ನ ಮೇಲೆ ಕೊಟ್ಯಂತರ ಹಣ ಹೂಡಿರುವ ನಿರ್ಮಾಪಕರ ಬೆಂಬಲವಾಗಿ ನಿಲ್ಲಬೇಕಾದ್ದು ನನ್ನ ಆದ್ಯ ಕರ್ತವ್ಯ , ಹಾಗಾಗಿ ನನ್ನ “ದಿ ಡೆವಿಲ್” ಚಿತ್ರದ ಎಲ್ಲಾ ಕೆಲಸ ಕಾರ್ಯಗಳು ಯಾವುದೆ ಅಡೆತಡೆಇಲ್ಲದೆ ಸಾಗಲಿ ಎಂಬುಂದು ನನ್ನ ಆಶಯ, ಹಾಗಾಗಿ ಅದಕ್ಕೆ ನನ್ನ ಸಂಪೂರ್ಣಸಹಕಾರವಿದೆ ಎಂದು ಈ ಮೂಲಕ ತಿಳಿಸುತ್ತೇದ್ದೇನೆ. ಹಾಗು ಇದಕ್ಕೆ ನನ್ನ ಸೆಲೆಬ್ರಿಟಿಗಳ ಸಹಮತವಿದೆಯೆಂದು ಧೃಡವಾಗಿನಂಬಿದ್ದೇನೆ.

“ಸಿನಿಮಾ ಒಂದು ಮನರಂಜನೆಯ ಮಾಧ್ಯಮ ಅದನ್ನ ಕೇವಲ ಮನರಂಜನೆಯ ದೃಷ್ಟಿಯಿಂದ ಮಾತ್ರ ನೋಡಬೇಕು.” ಎಂದು ತಿಳಿಸಿದ್ದಾರೆ.

krutika naik

Krutika Naik is an editor and writer at Karnataka Stories, where she covers culture, local news, and inspiring voices from across the state. With a passion for storytelling and a keen eye for detail, Krutika brings real stories to life—one article at a time.

Join WhatsApp

Join Now

RELATED POSTS

Leave a Comment