---Advertisement---

ಬೆಂಗಳೂರು: ₹4 ಲಕ್ಷ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಇನ್ಸ್‌ಪೆಕ್ಟರ್ ಗೋವಿಂದರಾಜು

On: January 30, 2026 6:54 AM
Follow Us:
---Advertisement---

ಬೆಂಗಳೂರು ನಗರದಲ್ಲಿ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟಾಚಾರದ ವಿರುದ್ಧ ನಡೆಸಿದ ಕಾರ್ಯಾಚರಣೆಯಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಒಬ್ಬರು ₹4 ಲಕ್ಷ ಲಂಚ ಸ್ವೀಕರಿಸುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಕೆ.ಪಿ. ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಗೋವಿಂದರಾಜು ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಯಾಗಿದ್ದಾರೆ.

ಇದನ್ನು ಓದಿ: ಒಂದೇ ಕುಟುಂಬಕ್ಕೆ ಸೇರಿದ 11 ಮಂದಿಗೆ ಮರಣದಂಡನೆ..ಈ ಪ್ರಕರಣದ ಕಥೆ ಕೇಳಿದ್ರೆ ಶಾಕ್ ಆಗ್ತೀರಾ!!

ಇದನ್ನು ಓದಿ:ರಾಯಚೂರು ಡಿಸಿ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಐಡಿ ತೆಗೆದು ಮೋಸ ; ಯುವಕನ ಬಂಧನ

ಚೀಟಿ ವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ವ್ಯಕ್ತಿಯನ್ನು ಪ್ರಕರಣದಲ್ಲಿ ಸೇರಿಸುವುದಾಗಿ ಬೆದರಿಸಿ ಇನ್ಸ್‌ಪೆಕ್ಟರ್ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಹಿನ್ನೆಲೆಯಲ್ಲಿ ₹4 ಲಕ್ಷ ಲಂಚಕ್ಕೆ ಡಿಮ್ಯಾಂಡ್ ಮಾಡಲಾಗಿತ್ತು.

ಲೋಕಾಯುಕ್ತ ಎಸ್‌ಪಿ ಶಿವಪ್ರಕಾಶ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು, ಮೈಸೂರು ರಸ್ತೆಯ ಸಿರಸಿ ಸರ್ಕಲ್ ಸಮೀಪದ ಸಿಎಆರ್ ಗ್ರೌಂಡ್ ಬಳಿ ಲಂಚ ಸ್ವೀಕರಿಸುವ ವೇಳೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಇನ್ಸ್‌ಪೆಕ್ಟರ್ ಗೋವಿಂದರಾಜು ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

Join WhatsApp

Join Now

RELATED POSTS