ಬೆಂಗಳೂರುದಲ್ಲಿ ಇನ್‌ಸ್ಟಾಗ್ರಾಂ ಸೇರಿದಂತೆ ಸಾಮಾಜಿಕ ಜಾಲತಾಣಗಳ ಮೂಲಕ ನಡೆಯುತ್ತಿರುವ ಆನ್‌ಲೈನ್ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿವೆ. ಪ್ರೀತಿಸಿದ ಯುವಕನನ್ನು ವಶೀಕರಣ ಮಾಡುವುದಾಗಿ ನಂಬಿಸಿ ಯುವತಿಯೊಬ್ಬರಿಂದ ಲಕ್ಷಾಂತರ ರೂಪಾಯಿ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ.
ಇದನ್ನು ಓದಿ: ಮೂರು ಕೋಟಿ ವಿಮಾ ಹಣಕ್ಕಾಗಿ ತಂದೆಯನ್ನೇ ಹಾವು ಕಚ್ಚಿಸಿ ಕೊಲೆ ಮಾಡಿದ ಮಕ್ಕಳು!!!!
ಇದನ್ನು ಓದಿ: ಪ್ರಿಯಕರನೊಂದಿಗೆ ಮದುವೆಯಾಗಲು ಮೂವರು ಮಕ್ಕಳ ಹತ್ಯೆ
ಜನವರಿ 04ರಂದು ನಡೆದ ಈ ಪ್ರಕರಣದಲ್ಲಿ, ಸಾಮಾಜಿಕ ಜಾಲತಾಣದಲ್ಲಿ “ಕಷ್ಟಗಳಿಗೆ ಪರಿಹಾರ” ಎಂಬ ಹೆಸರಿನಲ್ಲಿ ಜಾಹೀರಾತು ನೀಡಿದ್ದ ಕೃಷ್ಣಮೂರ್ತಿ ಗುರೂಜಿ ಎಂಬ ಖಾತೆಯನ್ನು ಯುವತಿ ಸಂಪರ್ಕಿಸಿದ್ದಾಳೆ. ಜಾಹೀರಾತಿನಲ್ಲಿ ನೀಡಿದ್ದ ಮೊಬೈಲ್ ಸಂಖ್ಯೆಗೆ ಕರೆ ಮಾಡಿದಾಗ, ಚಂದ್ರಶೇಖರ್ ಸುಗತ್ ಗುರೂಜಿ ಎಂದು ಪರಿಚಯಿಸಿಕೊಂಡ ವ್ಯಕ್ತಿ ಮಾತನಾಡಿದ್ದಾನೆ.
ಪ್ರೀತಿಸಿದ ಯುವಕನೊಂದಿಗೆ ಮದುವೆಯಾಗಲು ಸಹಾಯ ಮಾಡುತ್ತೇವೆ ಎಂದು ನಂಬಿಸಿ, ಯುವತಿಯ ಬಳಿ ಆತನ ವಿವರಗಳನ್ನು ಪಡೆದುಕೊಂಡ ಆರೋಪಿಯು, ವಿವಿಧ ಪೂಜೆ–ವಿಧಿಗಳ ಖರ್ಚು ಎಂದು ಹೇಳಿ ಹಂತ ಹಂತವಾಗಿ ಆನ್‌ಲೈನ್ ಮೂಲಕ ಸುಮಾರು 2.05 ಲಕ್ಷ ರೂಪಾಯಿ ಪಡೆದಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ನಂತರ ಮತ್ತಷ್ಟು 4 ಲಕ್ಷ ರೂಪಾಯಿ ಬೇಡಿಕೆಯಿಟ್ಟಾಗ ಅನುಮಾನಗೊಂಡ ಯುವತಿ ಹಣ ವಾಪಸ್ ಕೇಳಿದ್ದಾಳೆ. ಈ ವೇಳೆ “ಏನು ಮಾಡ್ತಿಯೋ ಮಾಡಿಕೋ” ಎಂದು ಬೆದರಿಕೆ ಹಾಕಲಾಗಿದೆ ಎಂದು ಯುವತಿ ಆರೋಪಿಸಿದ್ದಾಳೆ.
ಈ ಕುರಿತು ಆಡುಗೋಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.






