ಬೆಂಗಳೂರಿನ ಮನೆಯೊಂದರಲ್ಲಿ ಅನುಮಾನಸ್ಪದ ಸ್ಪೋಟ ಸಂಭವಿಸಿದ್ದು, ಹತ್ತಕ್ಕೂ ಹೆಚ್ಚು ಮನೆಗಳು ಧ್ವಂಸವಾಗಿದ್ದು,ಹಲವರ ಸ್ಥಿತಿ ಗಂಭೀರವಾಗಿದೆ. ಮನೆಯೊಂದರಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು ಓರ್ವ ಬಾಲಕ ಸಾವನ್ನಪ್ಪಿದ್ದು, 6 ಜನರಿಗೆ ಗಾಯಗಳಾಗಿರುವಂತಹ ಘಟನೆ ನಗರದ ಚಿನ್ನಯ್ಯನಪಾಳ್ಯದ ಶ್ರೀರಾಮ ಕಾಲೋನಿಯಲ್ಲಿ ನಡೆದಿದೆ. ಗಂಭೀರ ಗಾಯಗೊಂಡಿದ್ದ ಮುಬಾರಕ್(8) ಮೃತ ಬಾಲಕ.
ಗಾಯಾಳು ಕಸ್ತೂರಿಯ ಮನೆಯಲ್ಲಿ ಸ್ಫೋಟ ಸಂಭವಿಸಿದೆ. ಕಸ್ತೂರಿಗೆ 8 ವರ್ಷದ ಕಯಾಲ್ ಎಂಬಾ ಹೆಣ್ಣು ಮಗುವಿದೆ. ವಿಕ್ಟೋರಿಯಾ ಬರ್ನಿಂಗ್ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತ ಮುಬಾರಕ್ ಬಾಲಕನ ಪಕ್ಕದ ಮನೆಯಲ್ಲಿ ಕಸ್ತೂರಿ ವಾಸವಿದ್ದರು.
ಸ್ಫೋಟದ ತೀವ್ರತೆಗೆ ಮೊದಲನೇ ಮಹಡಿಯ ಮನೆ ಗೋಡೆ ಛಾವಣಿ ಕುಸಿದು ಬಿದ್ದಿದೆ. 8ಕ್ಕೂ ಹೆಚ್ಚು ಮನೆಗಳಿಗೆ ಹಾನಿ ಉಂಟಾಗಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿರುವ ಆಡುಗೋಡಿ ಠಾಣೆ ಪೊಲೀಸರು ಮೇಲ್ನೋಟಕ್ಕೆ ಸಿಲಿಂಡರ್ ಸ್ಟೋಟ ಸಂಭವಿಸಿರಬಹುದು ಎನ್ನತ್ತಿದ್ದಾರೆ. ಸ್ಥಳಕ್ಕೆ ಹೆಚ್ಚುವರಿ ಕಮಿಷನರ್ ರಮೇಶ್ ಬಾನೋತ್ ಭೇಟಿ, ಪರಿಶೀಲನೆ ನಡೆಸಿದರು.







1 thought on “ಬೆಂಗಳೂರು: ಮನೆಯೊಂದರಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟ; ಬಾಲಕ ಸಾವು, ಹಲವರಿಗೆ ಗಾಯ Bengaluru Suspicious object explodes in a house.”