---Advertisement---

ಹುಮನಾಬಾದ ಮೊಳಕೇರಾದಲ್ಲಿ ನಿಗೂಢ ಸ್ಪೋಟ : 8 ಜನರಿಗೆ ಗಂಭೀರ ಗಾಯ

On: January 31, 2026 9:16 AM
Follow Us:
---Advertisement---

ಹುಮನಾಬಾದ್ (ಬೀದರ್ ಜಿಲ್ಲೆ): ತಾಲ್ಲೂಕಿನ ಮೊಳಕೇರಾ ಗ್ರಾಮದ ಮಧ್ಯಭಾಗದ ಬಯಲಿನಲ್ಲಿ ಶನಿವಾರ ನಡೆದ ನಿಗೂಢ ಸ್ಫೋಟದಲ್ಲಿ ಎಂಟು ಜನರಿಗೆ ಗಂಭೀರ ಗಾಯಗಳು ಸಂಭವಿಸಿದೆ. ಗಾಯಗೊಂಡವರನ್ನು ಬೀದರ್‌ನ ಬ್ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಹಾಗೂ ಡಿವೈಎಸ್ಪಿ ಮಡೋಳಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಾರ್ವಜನಿಕರ ಸುರಕ್ಷತೆಗಾಗಿ ಸ್ಥಳದಲ್ಲಿ ಬ್ಯಾರಿಕೇಡ್ ಅಳವಡಿಸಿ, ಓಡಾಟವನ್ನು ನಿರ್ಬಂಧಿಸಲಾಗಿದೆ.

ಇದನ್ನು ಓದಿ: ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೊನೆಯ 20 ನಿಮಿಷಗಳ ವಿವರ ಬಹಿರಂಗ, ಏನಾಯಿತು ಗೊತ್ತಾ?

ಇದನ್ನು ಓದಿ:ಬೀದರ್‌ | 6 ಗಂಟೆಯೊಳಗೆ ಚಿನ್ನಾಭರಣ ಕಳವು ಪ್ರಕರಣ ಭೇದಿಸಿದ ಪೊಲೀಸರು

ಸ್ಫೋಟದ ನಿಖರ ಕಾರಣ ಇನ್ನೂ ತಿಳಿದುಬರುವಂತಿಲ್ಲ, ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆಯನ್ನು ಒದಗಿಸಲು ಮತ್ತು ಚಿಕಿತ್ಸಾ ವೆಚ್ಚವನ್ನು ಭರಿಸಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಸ್ಫೋಟಕ ತಜ್ಞರನ್ನು ಸ್ಥಳಕ್ಕೆ ಕಳುಹಿಸಿ ಮಾದರಿ ಸಂಗ್ರಹಿಸಿ ತನಿಖೆ ನಡೆಸಲು ಆದೇಶಿಸಿದ್ದಾರೆ.

Join WhatsApp

Join Now

RELATED POSTS