---Advertisement---

ಕಲಬುರಗಿಯಲ್ಲಿ ಕತ್ತೆ–ಕುದುರೆಯೊಂದಿಗೆ ಬಿಜೆಪಿ ಪ್ರತಿಭಟನೆ: ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

On: January 11, 2026 10:39 AM
Follow Us:
---Advertisement---

ಕಲಬುರಗಿ: ರಾಜ್ಯ ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ಕಾರ್ಯಗಳಲ್ಲಿ ವಿಫಲವಾಗಿದೆ ಎಂದು ಆರೋಪಿಸಿ, ಕಲಬುರಗಿ ಬಿಜೆಪಿ ಓಬಿಸಿ ಮೋರ್ಚಾ ನಗರಾಧ್ಯಕ್ಷ ದೇವಿಂದ್ರ ಅವರ ನೇತೃತ್ವದಲ್ಲಿ ಡಿಸಿ ಕಚೇರಿ ಎದುರು ವಿಭಿನ್ನ ರೀತಿಯ ಪ್ರತಿಭಟನೆ ನಡೆಸಲಾಯಿತು.

ಇದನ್ನು ಓದಿ: ಗದಗ: ಲಕ್ಕುಂಡಿ ಗ್ರಾಮದಲ್ಲಿ ಮನೆ ಕಟ್ಟಲು ಅಗೆತ ನಡೆಸುವಾಗ 470 ಗ್ರಾಂ ಬಂಗಾರದ ಆಭರಣಗಳು ನಿಧಿ ಪತ್ತೆ..!

ಐದು ಗ್ಯಾರಂಟಿಗಳನ್ನು ನೀಡಿ ಜನರನ್ನು ಮರುಳುಗೊಳಿಸಲಾಗಿದೆ ಎಂದು ಆರೋಪಿಸಿದ ಬಿಜೆಪಿ ಕಾರ್ಯಕರ್ತರು, ಪಂಚಗ್ಯಾರಂಟಿಗಳನ್ನು ಕತ್ತೆಗಳೊಂದಿಗೆ ಹೋಲಿಸಿ ಐದು ಕತ್ತೆಗಳನ್ನು ಕರೆತಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಧರಣಿ ನಡೆಸಿದರು.

ಪ್ರತಿಭಟನೆಯ ವೇಳೆ ಕುದುರೆಯ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭಾವಚಿತ್ರದ ಮುಖವಾಡ ಧರಿಸಿ, ಐದು ಕತ್ತೆಗಳೊಂದಿಗೆ ಡಿಸಿ ಕಚೇರಿ ಎದುರು ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರದ ನೀತಿಗಳು ಜನವಿರೋಧಿಯಾಗಿದ್ದು, ಅಭಿವೃದ್ಧಿ ಕೆಲಸಗಳು ಸಂಪೂರ್ಣವಾಗಿ ಸ್ಥಗಿತಗೊಂಡಿವೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

Join WhatsApp

Join Now

RELATED POSTS