ಚಿಕ್ಕಪ್ಪ–ದೊಡ್ಡಪ್ಪ ಮಕ್ಕಳಾದ ಇಬ್ಬರು, ಸಂಬಂಧದಲ್ಲಿ ಅಣ್ಣ–ತಂಗಿಯಾಗಿದ್ದರೂ ಪವಿತ್ರ ಸಹೋದರ ಸಂಬಂಧವನ್ನು ಮರೆತು ಪರಸ್ಪರ ಪ್ರೀತಿಯಲ್ಲಿ ಬಿದ್ದು ಅಕ್ರಮ ಸಂಬಂಧ ಹೊಂದಿದ್ದರು.
30 ವರ್ಷದ ಯುವಕ ಹಾಗೂ 21 ವರ್ಷದ ಯುವತಿ ಕೆಲ ವರ್ಷಗಳಿಂದ ಲಿವಿಂಗ್ ರಿಲೇಶನ್‌ಶಿಪ್‌ನಲ್ಲಿ ವಾಸವಿದ್ದರು. ಆದರೆ ಇದೀಗ ಆ ಯುವತಿ ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಈ ಪ್ರಕರಣ ಹಲವಾರು ಪ್ರಶ್ನೆಗಳನ್ನು ಹುಟ್ಟುಹಾಕಿದೆ.
ಇದನ್ನು ಓದಿ: ಪತ್ನಿಯ ನಡತೆಯ ಮೇಲೆ ಸಂಶಯ: ಮಗಳಿಗೆ ನೇಣು ಹಾಕಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ತಾಯಿ…
21 ವರ್ಷದ ರಾಮಲಕ್ಷ್ಮಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರ ಗ್ರಾಮದಲ್ಲಿ ನಡೆದಿದೆ. ಮನೆಯೊಳಗೆ ಆತ್ಮಹತ್ಯೆ ಮಾಡಿಕೊಂಡಂತೆ ಕಂಡುಬಂದರೂ, ಸಾವಿನ ಸುತ್ತ ಅನುಮಾನಗಳು ಗಟ್ಟಿಯಾಗುತ್ತಿವೆ. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಮೃತ ರಾಮಲಕ್ಷ್ಮಿ ಹಾಗೂ ಕೃಷ್ಣ ಇಬ್ಬರೂ ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲೂಕಿನ ರಾಮಕೃಷ್ಣಪುರ ಗ್ರಾಮದ ನಿವಾಸಿಗಳು. ಸಂಬಂಧದಲ್ಲಿ ಅಣ್ಣ–ತಂಗಿಯಾಗಿರುವ ಇವರಿಬ್ಬರು ಸಮಾಜದ ನೈತಿಕ ಮೌಲ್ಯಗಳಿಗೆ ವಿರುದ್ಧವಾಗಿ ಪ್ರೀತಿ ಬೆಳೆಸಿಕೊಂಡಿದ್ದರು. ಬಳಿಕ ಇಬ್ಬರೂ ಪೆರೇಸಂದ್ರ ಗ್ರಾಮದಲ್ಲಿ ಪ್ರತ್ಯೇಕ ಮನೆ ಮಾಡಿಕೊಂಡು ಲಿವಿಂಗ್ ರಿಲೇಶನ್‌ಶಿಪ್‌ನಲ್ಲಿ ಜೀವನ ನಡೆಸುತ್ತಿದ್ದರು ಎಂದು ತಿಳಿದುಬಂದಿದೆ.
ಕಳೆದ ಮೂರು ವರ್ಷಗಳಿಂದ ರಾಮಲಕ್ಷ್ಮಿ ಮತ್ತು ಕೃಷ್ಣ ಅನೈತಿಕ ಸಂಬಂಧ ಹೊಂದಿದ್ದು, ಈ ವಿಷಯ ತಿಳಿದ ಕುಟುಂಬದವರು ಹಾಗೂ ಬಂಧುಗಳು ಹಲವು ಬಾರಿ ಬುದ್ದಿವಾದ ಹೇಳಿದ್ದರು. ಸಮಾಜದ ಒತ್ತಡದಿಂದಾಗಿ ಎರಡು ಕುಟುಂಬಗಳು ಪ್ರತ್ಯೇಕವಾಗಿ ವಾಸಿಸಲು ಮುಂದಾಗಿದ್ದವು. ಇದರ ನಡುವೆಯೇ ಕೃಷ್ಣನಿಗೆ ಮತ್ತೊಬ್ಬ ಯುವತಿಯೊಂದಿಗೆ ಮದುವೆ ಮಾಡಲಾಗಿತ್ತು.
ಮದುವೆಯಾದ ಬಳಿಕವೂ ಕೃಷ್ಣ ತನ್ನ ತಂಗಿ ರಾಮಲಕ್ಷ್ಮಿಯನ್ನು ಬಿಟ್ಟಿರಲಿಲ್ಲ. ಆಕೆಯನ್ನು ಪ್ರತ್ಯೇಕವಾಗಿ ಮನೆ ಮಾಡಿಸಿ ಕಳ್ಳ ಸಂಸಾರ ನಡೆಸುತ್ತಿದ್ದನೆಂಬ ಆರೋಪಗಳು ಕೇಳಿಬರುತ್ತಿವೆ. ಈ ಹಿನ್ನೆಲೆಯಲ್ಲಿ ರಾಮಲಕ್ಷ್ಮಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂಬ ಶಂಕೆ ವ್ಯಕ್ತವಾಗಿದೆ. ಮೃತಳ ಸಾವಿಗೆ ಅಣ್ಣ ವರಸೆಯ ಕೃಷ್ಣನೇ ನೇರ ಕಾರಣ ಎಂದು ರಾಮಲಕ್ಷ್ಮಿಯ ಅಕ್ಕ ಆಕ್ರೋಶ ವ್ಯಕ್ತಪಡಿಸಿದ್ದಾಳೆ.
ಇತ್ತ ಘಟನೆ ಬಳಿಕ ಕೃಷ್ಣ ಭಯದಿಂದ ನಾಪತ್ತೆಯಾಗಿರುವುದಾಗಿ ತಿಳಿದುಬಂದಿದ್ದು, ಪ್ರಕರಣ ಇನ್ನಷ್ಟು ಗಂಭೀರ ಸ್ವರೂಪ ಪಡೆದುಕೊಂಡಿದೆ. ಒಟ್ಟಾರೆ, ಅಣ್ಣ–ತಂಗಿಯ ಪವಿತ್ರ ಸಂಬಂಧಕ್ಕೆ ಧಕ್ಕೆ ತಂದ ಈ ಅಕ್ರಮ ಸಂಬಂಧ ದುರಂತದಲ್ಲಿ ಅಂತ್ಯ ಕಂಡಿದ್ದು, ಯುವತಿಯ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಈ ಕುರಿತು ಪೆರೇಸಂದ್ರ ಪೊಲೀಸರು ಎಲ್ಲಾ ಆಯಾಮಗಳಿಂದ ತನಿಖೆ ಮುಂದುವರೆಸುತ್ತಿದ್ದಾರೆ.







2 thoughts on “ಚಿಕ್ಕಬಳ್ಳಾಪುರ: ಅಣ್ಣ–ತಂಗಿಯ ಪವಿತ್ರ ಸಂಬಂಧಕ್ಕೆ ಧಕ್ಕೆ: ಲಿವಿಂಗ್ ರಿಲೇಶನ್‌ಶಿಪ್‌ನಲ್ಲಿದ್ದ 21 ವರ್ಷದ ಯುವತಿ ನೇಣಿಗೆ ಶರಣು”