---Advertisement---

SIT ಯಿಂದ ದೂರುದಾರ ಅನಾಮಿಕ ಸಿ.ಎನ್. ಚಿನ್ನಯ್ಯ ಅಲಿಯಾಸ್ ಚೆನ್ನ ಅರೆಸ್ಟ್ !! Complainant Anamik C.N. Chinnayya alias Chenna arrested by SIT

On: August 23, 2025 12:13 PM
Follow Us:
Complainant Anamik C.N. Chinnayya alias Chenna arrested by SIT
---Advertisement---

ಧರ್ಮಸ್ಥಳ ಕೇಸ್ನಲ್ಲಿ ಎಸ್.ಐ.ಟಿ ಇಂದು ದೂರುದಾರ ಮಾಸ್ಕ್ ಮ್ಯಾನ್ ಬಂಧಿಸಿದೆ. ಮಾಸ್ಕ್ ಮ್ಯಾನ್ ಬಂಧಿಸಿರುವ ಎಸ್.ಐ.ಟಿ ಇಂದು ಕೋರ್ಟ್ಗೆ ಹಾಜರುಪಡಿಸಲಿದೆ. ಸುದೀರ್ಘ ವಿಚಾರಣೆ ಬಳಿಕ ಎಸ್.ಐ.ಟಿ ಇಂದು ಅನಾಮಿಕನನ್ನು ಬಂಧಿಸಿದೆ.

ಧರ್ಮಸ್ಥಳದಲ್ಲಿ ಶವಗಳನ್ನು ಹೂತಿದ್ದೇನೆ ಎಂದು ದೂರು ನೀಡಿದ ಎಸ್‌ಐಟಿ ತಂಡ ಮುಂದೆ 17 ಸ್ಥಳಗಳನ್ನು ತೋರಿಸಿ ಗುಂಡಿ ಅಗೆಸಿದ ಅನಾಮಿಕನ ದೂರು ಸುಳ್ಳೆಂದು ಅನುಮಾನ ಬಂದ ಕಾರಣ ಬಂಧನ ಮಾಡಿದ್ದಾರೆ.

ಧರ್ಮಸ್ಥಳದ ಕೇಸಿನಲ್ಲಿ ನಾನೊಬ್ಬ ಸಾಕ್ಷಿದಾರ ಎಂದು ಸಾಕ್ಷಿ ಸಂರಕ್ಷಣಾ ಕಾಯ್ದೆಯಡಿ ಪೊಲೀಸರಿಂದ ರಕ್ಷಣೆ ಪಡೆದುಕೊಂಡಿದ್ದ ಅನಾಮಿಕನನ್ನು ಪೊಲೀಸರು ಬಂಧನ ಮಾಡದೇ, ವಶಕ್ಕೂ ಪಡೆಯದೇ ಆತನನ್ನು ಸ್ವತಂತರವಾಗಿ ಬಿಟ್ಟಿದ್ದರು. ಆತನಿಗೆ ನೀಡಲಾಗಿದ್ದ ಸಾಕ್ಷಿ ಸಂರಕ್ಷಣಾ ಕಾಯ್ದೆಯನ್ನು ರದ್ದುಗೊಳಿಸಿದ ಬೆನ್ನಲ್ಲಿಯೇ ಮುಸುಕುದಾರಿ ಅನಾಮಿಕನನ್ನು ಬಂಧನ ಮಾಡಲಾಗಿತ್ತು. ಇದಾದ ನಂತರ ಆತನ ಹೆಸರು ಸಿ.ಎನ್. ಚಿನ್ನಯ್ಯ ಅಲಿಯಾಸ್ ಚೆನ್ನ ಎಂದೂ ಆತನ ಮೂಲವನ್ನು ರಿವೀಲ್ ಮಾಡಿತ್ತು.

ಈ ಬಗ್ಗೆ ಗೃಹ ಸಚಿವ ಪರಮೇಶ್ವರ್ ವಿಧಾನಸಭೆಯಲ್ಲಿ ಮಾತನಾಡಿದ್ದರು. ಧರ್ಮಸ್ಥಳ ಪ್ರಕರಣ ಇಡೀ ದೇಶಾದ್ಯಂತ ಸುದ್ದಿಯಾಗಿದೆ. ಇಡೀ ದೇಶ ಇಂದು ಈ ಪ್ರಕರಣವನ್ನು ಗಮನಿಸುತ್ತಿದೆ. ಜುಲೈ 3, 2025ರಂದು ಅನಾಮಿಕ ವ್ಯಕ್ತಿ ಧರ್ಮಸ್ಥಳ ಠಾಣೆಯಲ್ಲಿ ದೂರು ನೀಡಿದ್ದ. ನೂನಾರು ಶವಗಳನ್ನು ಧರ್ಮಸ್ಥಳದ ವಿವಿಧೆಡೆ ತಾನು ಹೂತು ಹಾಕಿದ್ದಾಗಿ ಹೇಳಿದ್ದ. ತನಗೆ ಪಾಪ ಪ್ರಜ್ಞೆಯಿಂದ ಬಂದು ದೂರು ನೀಡುತ್ತಿರುವುದಾಗಿ ಹಾಗೂ ಅತ್ಯಾಚಾರ, ಕೊಲೆಗಳನ್ನು ಮಾಡಿದ ಶವಗಳನ್ನು ತನಗೆ ತಂದು ಕೊಟ್ಟು, ಜೀವಬೆದರಿಕೆ ಹಾಕಿ ತನ್ನಿಂದ ಹೂತು ಹಾಕಿಸಿದ್ದಾಗಿ ಹೇಳಿದ್ದ.

ನನಗೆ ನಿರಂತರ ಜೀವಬೆದರಿಕೆಯೊಡ್ಡಿ ಶವಗಳನ್ನು ಹೂತು ಹಾಕಿಸಿದ್ದಾರೆ ಎಂದು ದೂರು ನೀಡಿದ್ದ. ನನಗೆ ಹಾಗೂ ನನ್ನ ಕುಟುಂಬಕ್ಕೆ ರಕ್ಷಣೆ ನೀಡುವಂತೆಯೂ ಕೋರಿದ್ದ. ಬಳಿಕ ಈ ಪ್ರಕರಣದ ಬಗ್ಗೆ ನ್ಯಾಯಾಧೀಶರು ತನಿಖೆ ನಡೆಸುವಂತೆ ಸೂಚಿಸಿದ್ದರು. ನ್ಯಾಯಾಧೀಶರ ಸೂಚನೆಯಂತೆ ಪೊಲೀಸರು ತನಿಖೆಗೆ ಮುಂದಾಗಿದ್ದರು. ಈ ವೇಳೆ ಮಹಿಳಾ ಆಯೋಗ ಎಸ್ ಐಟಿ ರಚಿಸುವಂತೆ ಪತ್ರ ಬರೆದಿತ್ತು. ಅತ್ಯಾಚಾರ ಹಾಗೂ ಕೊಲೆ ಪ್ರಕರಣಗಳ ಬಗ್ಗೆ ತನಿಖೆಗೆ ಎಸ್ ಐಟಿ ರಚಿಸಿ ತನಿಖೆ ನಡೆಸುವಂತೆ ಉಲ್ಲೇಖಿಸಿತ್ತು. ಇದಾದ ಬಳಿಕ ನಾನು ಹಾಗೂ ಸಿಎಂ ಸಿದ್ದರಾಮಯ್ಯ ಎಸ್.ಐ.ಟಿ ರಚಿಸಿ ತನಿಖೆಗೆ ಆದೇಶ ನೀಡಿದೆವು ಎಂದು ತಿಳಿಸಿದ್ದಾರೆ. ಬಳಿಕ ಎಸ್.ಐ.ಟಿ ಆತನಿಂದ ಹೇಳಿಕೆ ಪಡೆದು ಆತ ಶವಗಳನ್ನು ಹೂತಿಟ್ಟ ಜಾಗದ ಬಗ್ಗೆ ನೀಡಿರುವ ಮಾಹಿತಿ ಮೇರೆಗೆ ಅಲ್ಲಿ ಶೋಧಕಾರ್ಯವನ್ನು ಕೈಗೊಂಡಿತು ಎಂದು ವಿವರಿಸಿದ್ದರು.

krutika naik

Krutika Naik is an editor and writer at Karnataka Stories, where she covers culture, local news, and inspiring voices from across the state. With a passion for storytelling and a keen eye for detail, Krutika brings real stories to life—one article at a time.

Join WhatsApp

Join Now

RELATED POSTS

Leave a Comment