ಭೂಸ್ವಾಧೀನ ವಿರುದ್ಧ ರಾಮನಗರ ಡಿಸಿ ಕಚೇರಿ ಮುಂದೆ ಹೋರಾಟ ನಡೆಸುತ್ತಿದ್ದ ರೈತರಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್ ಅವರು, “ನಾನು ಹೊರಗಿನಿಂದ ಬಂದವನು ಅಲ್ಲ, ಇದೇ ನಿಮ್ಮ ಜಿಲ್ಲೆಯವನು. ಬಿಡದಿ ಕೈಗಾರಿಕಾ ವಲಯ ನಿರ್ಮಾಣವಾದಾಗ ಯಾವ ಸರ್ಕಾರ ಅಧಿಕಾರದಲ್ಲಿತ್ತೋ ಅದನ್ನು ನೀವು ಎಲ್ಲರೂ ಚೆನ್ನಾಗಿ ತಿಳಿದಿದ್ದೀರಿ. ಆ ಸಂದರ್ಭದಲ್ಲಿ 16 ಸಾವಿರ ಎಕರೆ ಭೂಮಿ ಕಳೆದುಹೋಯಿತು. ಟೊಯೋಟಾ ಸೇರಿದಂತೆ ಹಲವಾರು ಕಂಪನಿಗಳು ಇಲ್ಲಿ ಬಂದವು. ಆಗ ಕೈಗಾರಿಕಾ ಪ್ರದೇಶಕ್ಕೆ ನನ್ನ 12 ಎಕರೆ ಜಮೀನೂ ಸೇರಿ ಹೋಯಿತು. ಪರಿಹಾರವಾಗಿ 8 ಲಕ್ಷಕ್ಕೂ ಹೆಚ್ಚು ನೀಡಲಿಲ್ಲ” ಎಂದರು.
“ನಿಮಗೆ ಉತ್ತಮ ಪರಿಹಾರ ನೀಡಲು ಸುಮಾರು 10 ಸಾವಿರ ಕೋಟಿ ರೂ. ಸಾಲ ಮಾಡುವ ಬಗ್ಗೆ ಚರ್ಚೆ ನಡೆಸಲಾಗಿದೆ. ನಿಮ್ಮ ಒಂದು ಎಕರೆ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳುವ ಅವಶ್ಯಕತೆ ನಮಗಿಲ್ಲ. ಸ್ವಾಧೀನವಾಗಿರುವ ಭೂಮಿಯನ್ನು ಕಾನೂನು ಚೌಕಟ್ಟು ಮೀರಿ ಕೈ ಬಿಡುವ ಹಂತದಲ್ಲಿ ನಾನಿಲ್ಲ ಎಂದರು. ಕುಮಾರಸ್ವಾಮಿ ಅವರ ಧರ್ಮಪತ್ನಿಯವರು ಹಾಗೂ ಮಗ ಸೇರಿದಂತೆ ಶೇ.70 ರಷ್ಟು ಮಂದಿ ಪರಿಹಾರ ನೀಡಿ ಎಂದು ಭೂಸ್ವಾಧೀನಕ್ಕೆ ಒಪ್ಪಿಗೆ ಸೂಚಿಸಿದ್ದಾರೆ. ಶೇ.30 ರಷ್ಟು ಮಂದಿ ಮಾತ್ರ ಒಪ್ಪಿಗೆ ನೀಡಿಲ್ಲ. ಆದರೆ ನಾನು ನಿಮ್ಮ ಪರವಾಗಿ ಏನು ತೀರ್ಮಾನ ತೆಗೆದುಕೊಳ್ಳಬೇಕು. ಯಾವ ರೀತಿ ಸಹಾಯ ಮಾಡಬೇಕು ಎಂದು ಚರ್ಚೆ ನಡೆಸುತ್ತೇನೆ” ಎಂದು ತಿಳಿಸಿದರು.
“ನಾನು ಕೇವಲ ಬಿಡದಿ ಪ್ರದೇಶಕ್ಕೆ ಮಾತ್ರ ವಿಶೇಷವಾಗಿ ತೀರ್ಮಾನ ತೆಗೆದುಕೊಳ್ಳಲು ಕಾನೂನಿನಲ್ಲಿ ಸಾಧ್ಯವಿಲ್ಲ. ತೀರ್ಮಾನ ತೆಗೆದುಕೊಂಡರೆ ಇಡೀ ರಾಜ್ಯದ ಎಲ್ಲಾ ಭೂ ಸ್ವಾಧೀನಗಳ ಮೇಲೆ ಪರಿಣಾಮ ಬೀರಲಿದೆ. ಈ ಪ್ರದೇಶವನ್ನು ಕೈ ಬಿಡಬೇಕು ಎನ್ನುವ ಒತ್ತಡ ಕೂಡ ಇತ್ತು. ಆದರೆ ಕಾನೂನಿನ ಚೌಕಟ್ಟಿನಲ್ಲಿ ಡಿನೋಟಿಫಿಕೇಷನ್ ಮಾಡಲು ಆಗುವುದಿಲ್ಲ ಎನ್ನುವ ಅಭಿಪ್ರಾಯಗಳು ಬಂದಿವೆ” ಎಂದರು.
ಬಿಡದಿ ರೈತರಿಗೆ ನೆರವಾಗಬೇಕು ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ಹಾಗೂ ಶಾಸಕ ಬಾಲಕೃಷ್ಣ ಅನೇಕ ಸಭೆಗಳನ್ನು ನಡೆಸಿದ್ದಾರೆ ಎಂದು ಡಿ.ಕೆ. ಶಿವಕುಮಾರ್ ಹೇಳಿದರು. ಇದೇ ವೇಳೆ, “ಬಾಲಕೃಷ್ಣ ರೈತರ ಪರವಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದಾಗ, “ಬಾಲಕೃಷ್ಣ ಎಷ್ಟೊಂದು ಬಾರಿ ನನ್ನನ್ನು ಸಂಪರ್ಕಿಸಿ ನಿಮ್ಮ ಪರವಾಗಿ ಧ್ವನಿ ಎತ್ತಿದ್ದಾರೆಂಬುದು ನನಗೆ ಗೊತ್ತಿದೆ. ನಿಮ್ಮ ಭೂಮಿಯನ್ನು ಸ್ವಾಧೀನ ಮಾಡಲು ಸಹಿ ಮಾಡಿದವರು ನಿಜವಾಗಿಯೂ ನಿಮ್ಮ ಪರವಾಗಿದ್ದಾರಾ? ಬಿಜೆಪಿ ಸರ್ಕಾರ ಪರಿಹಾರವನ್ನು ರೂ.1 ಕೋಟಿಗೆ ನಿಗದಿ ಮಾಡಿದಾಗ, ಅದು ರೈತರ ಪರವಾಗಿತ್ತೆ? ರೈತರ ಹಿತಕ್ಕಾಗಿ ನಿರಂತರವಾಗಿ ಹೋರಾಡುತ್ತಿರುವವರು ಬಾಲಕೃಷ್ಣ. ನಿಮ್ಮ ಪರವಾಗಿ ಇವರಷ್ಟು ಹೋರಾಟ ನಡೆಸಿದವರಿಲ್ಲ” ಎಂದರು.
ಡಿಎಲ್ ಎಫ್ ಕಂಪೆನಿಯವರು ಈ ಪ್ರದೇಶವನ್ನು ತೆಗೆದುಕೊಂಡರು. ಆ ನಂತರ ಇಲ್ಲಿನ ವೃಷಭಾವತಿ ನೀರು ಸೇರಿದಂತೆ ಇತರೇ ಸಂಗತಿಗಳನ್ನು ಗಮನಿಸಿ ನಮ್ಮಿಂದ ಟೌನ್ ಶಿಪ್ ಮಾಡಲು ಸಾಧ್ಯವಿಲ್ಲ ಎಂದು ಯೋಜನೆ ಕೈ ಬಿಟ್ಟರು. 9600 ಎಕರೆ ಪ್ರದೇಶದಲ್ಲಿ ಸುಮಾರು 912 ಎಕರೆ ಪ್ರದೇಶವನ್ನು ಕೈಗಾರಿಕೆಗೆ ಎಂದು ನೀಡಲಾಯಿತು. ಎಕರೆಗೆ ರೂ.1 ಕೋಟಿ ಹಾಗೂ ಅದಕ್ಕಿಂತ ಹೆಚ್ಚು ಪರಿಹಾರ ಹಣವನ್ನು ನಿಗದಿ ಪಡಿಸಲಾಯಿತು. ಆಗ ಯಾರೂ ಸಹ ವಿರೋಧ ಮಾಡಲಿಲ್ಲ. ಈಗ ಏಕೆ ವಿರೋಧ ಮಾಡುತ್ತಿದ್ದೀರಿ ಎಂದು ಪ್ರಶ್ನಿಸಿದರು.
“ಯಡಿಯೂರಪ್ಪನಂತೆ ಜೈಲು ಬಾಗಿಲು ತಟ್ಟಲು ನಾನು ಸಿದ್ಧನಲ್ಲ” ಎಂದ ಡಿ.ಕೆ. ಶಿವಕುಮಾರ್!
By krutika naik
On: September 6, 2025 8:34 AM
---Advertisement---






