ನಟ ಯಶ್ ತಾಯಿ ಅವರ ಸಂಬಂಧಿ ದೀಪಿಕಾ ದಾಸ್ ಬಗ್ಗೆ ಹೇಳಿದ ಮಾತು ಬಾರಿ ಚರ್ಚೆಗೆ ಗ್ರಾಸವಾಗಿತ್ತು. ನಟಿ ದೀಪಿಕಾ ದಾಸ್ ಅವರ ಬಗ್ಗೆ ನೀಡಿದ್ದ ಹೇಳಿಕೆಗೆ ಇದೀಗ ದೀಪಿಕಾ ಪ್ರತಿಕಿಯಿಸಿದ್ದು, ಹೊಸ ಕಲಾವಿದರನ್ನು ಬೆಳೆಸೋ ಜನರು ಕಲಾವಿದರಿಗೆ ಬೆಲೆ ಕೊಡುವುದನ್ನು ಕಲಿತಿರಬೇಕು ಎಂದು ತಿರುಗೇಟು ನೀಡಿದ್ದಾರೆ.
ನಟ ಯಶ್ ತಾಯಿ ಪುಷ್ಪಾ ಹಾಗೂ ನಟಿ ದೀಪಿಕಾ ದಾಸ್ ತಾಯಿ ಸಹೋದರಿಯರು. ಹಾಗಾಗಿ ಸಂಬಂಧದಲ್ಲಿ ಯಶ್ ಹಾಗೂ ದೀಪಿಕಾ ಅಣ್ಣ-ತಂಗಿ. ಆದರೆ ದೀಪಿಕಾ ಎಂದೂ ನಾನು ಯಶ್ ತಂಗಿ ಎಂದು ಹೇಳಿಕೊಳ್ಳುವುದಿಲ್ಲ. ಎರಡೂ ಕುಟುಂಬಗಳ ನಡುವೆ ಭಿನ್ನಾಭಿಪ್ರಾಯಗಳಿವೆ ಎನ್ನುವ ಸುದ್ದಿ ಹರದಾಡ್ತಿದೆ. ಅಶ್ವವೇಗ ವಾಹಿನಿ ಸಂದರ್ಶನದಲ್ಲಿ ಇತ್ತೀಚೆಗೆ ನಿರ್ಮಾಪಕಿ ಪುಷ್ಪಾ ಭಾಗಿ ಆಗಿದ್ದರು ಹಾಗೆ ಸಂದರ್ಶನದಲ್ಲಿ ಹೇಳಿದ್ದರು.
ಪಿಎ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಪುಷ್ಪಾ ಹೊಸ ಪ್ರತಿಭೆಗಳಿಗೆ ಅವಕಾಶ
ಪಿಎ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಪುಷ್ಪಾ ಹೊಸ ಪ್ರತಿಭೆಗಳಿಗೆ ಅವಕಾಶ ಕೊಡಲು ಮುಂದಾಗಿದ್ದಾರೆ. ಹೊಸ ನಟ, ನಟಿಯರು, ತಂತ್ರಜ್ಞರಿಗೆ ವೇದಿಕೆ ಕಲ್ಪಿಸುವ ಕೆಲಸ ಮಾಡುತ್ತಿದ್ದಾರೆ. ಹಾಗಾಗಿ ನಿಮ್ಮ ಚಿತ್ರದಲ್ಲಿ ದೀಪಿಕಾ ದಾಸ್ ಅವರಿಗೆ ಅವಕಾಶ ಕೊಡ್ತೀರಾ? ಎನ್ನುವ ಪ್ರಶ್ನೆಗೆ ಪುಷ್ಪಾ ಗರಂ ಆಗಿ ನಿರೂಪಕಿ ಮೇಲೆ ಅಸಮಾಧಾನ ಹೊರ ಹಾಕಿದ್ದಾರೆ.
“ಇಂತಹ ಪ್ರಶ್ನೆಗಳನ್ನು ಯಾಕೆ ಕೇಳ್ತೀರಾ, ದೀಪಿಕಾ ದಾಸ್‌ಗೂ ನಮಗೂ ಆಗಲ್ಲ. ಅವಳು ಯಾವ ದೊಡ್ಡ ಹೀರೊಯಿನ್ನು, ಆಯ್ಕೆ ಮಾಡಿಕೊಳ್ಳಲು, ಯಾವ ಸಾಧನೆ ಮಾಡಿದ್ದಾಳೆ ಎಂದು ಕರೆದು ಅವಕಾಶ ಕೊಡುವುದು. ಸಂಬಂಧ ಆದರೂ ಅವರನ್ನು ದೂರದಲ್ಲೇ ಇಟ್ಟಿದ್ದೀವಿ. ಅವರ ಬಗ್ಗೆ ಯಾಕೆ ಕೇಳ್ತೀರಾ? ನನ್ನ ಮಗ ಬೈಯಲ್ವಾ? ಇನ್ನು ಬಹಳ ಹೀರೊಯಿನ್ ಇದ್ದಾರೆ, ಅವರ ಬಗ್ಗೆ ಕೇಳಿ” ಎಂದು ಪುಷ್ಪಾ ಕಿಡಿ ಕಾರಿದ್ದಾರೆ.
“ಸಾಕಷ್ಟು ಜನ ಹೀರೊಯಿನ್ ಇದ್ದಾರೆ, ಎಲ್ಲರನ್ನು ಬಿಟ್ಟು ದೀಪಿಕಾ ದಾಸ್ ಹೆಸರು ಯಾಕೆ ತಗೋತ್ತೀರಾ? ದೀಪಿಕಾ ದಾಸ್ ಏನು ರಮ್ಯಾನಾ? ರಕ್ಷಿತಾನಾ? ಒಂದು ವೇಳೆ ದೊಡ್ಡದಾಗಿ ಸಾಧನೆ ಮಾಡಿದ್ದರೆ ಅವರ ಬಗ್ಗೆ ಕೇಳಿ ಅದು ಬಿಟ್ಟು ದೀಪಿಕಾ ದಾಸ್ ಕಥೆ ಯಾಕೆ?” ಎಂದು ನಿರ್ಮಾಪಕಿ ಪ್ರಶ್ನಿಸಿದ್ದಾರೆ.
ಈ ವಿಷಯದ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ದೀಪಿಕಾ ದಾಸ್, “ಹೊಸ ಕಲಾವಿದರನ್ನು ಬೆಳೆಸೋ ಜನರು ಕಲಾವಿದರಿಗೆ ಬೆಲೆ ಕೊಡುವುದನ್ನು ಕಲಿತಿರಬೇಕು. ಇಲ್ಲಿವರೆಗೂ ಯಾರ ಹೆಸರನ್ನು ಹೇಳಿಕೊಂಡು ಬಂದಿಲ್ಲ ಮುಂದೇನೂ ಬರಲ್ಲ” ಎಂದು ಆಕ್ರೋಶ ಹೊರಹಾಕಿದ್ದಾರೆ.
“ಕೆಲವರಿಗೆ ಬೆಲೆಕೊಟ್ಟ ಮಾತ್ರಕ್ಕೆ ಯಾರಿಗೂ ಯಾರ ಮೇಲೂ ಭಯ ಇದೆ ಅಂತ ಅಲ್ಲ. ಅದು ಅಮ್ಮ ಆದರೂ ಸರಿ, ದೊಡ್ಡಮ್ಮ ಆದರೂ ಸರಿ ಅಥವಾ ಪುಷ್ಪಮ್ಮ ಆದರೂ ಸರಿ. ವಿಥ್ ಡ್ಯೂ ರೆಸ್ಪೆಕ್ಟ್ ಸ್ಟಾರ್ ಆಫ್ ಅವರ್ ಇಂಡಸ್ಟ್ರಿ.
ನಾನು ಯಾವ ದೊಡ್ಡ ನಟಿ ಅಲ್ಲದಿದ್ದರೂ, ಏನು ಸಾಧನೆ ಮಾಡದಿದ್ದರೂ ನನ್ನ ಬಗ್ಗೆ ಹೀನಾಯವಾಗಿ ಮಾತನಾಡುವ ಯೋಗ್ಯತೆ ಯಾರಿಗೂ ಇಲ್ಲ” ಎಂದು ಬರೆದುಕೊಳ್ಳುವ ಮೂಲಕ ನಟಿ ದೀಪಿಕಾ ದಾಸ್ ಅವರು ನಿರ್ಮಾಪಕಿ ಪುಷ್ಪ ಅವರಿಗೆ ಬಹಿರಂಗವಾಗಿಯೇ ತಿರುಗೇಟು ನೀಡಿದ್ದಾರೆ.






