---Advertisement---

ದೊನ್ನೆ ಬಿರಿಯಾನಿ ಸವಿದ ಡಾಲಿ ಧನಂಜಯ್: ಜಾತಿ ವಿಚಾರ ಮುಂದಿಟ್ಟ ನೆಟ್ಟಿಗರು, ಪರ–ವಿರೋಧದ ವಾದ…

On: January 25, 2026 5:42 PM
Follow Us:
---Advertisement---

ನಟ ಡಾಲಿ ಧನಂಜಯ್ ಅವರು ಬಿರಿಯಾನಿ ಸೇವಿಸುತ್ತಿರುವ ವಿಡಿಯೋ ವೈರಲ್ ಆಗಿದ್ದು, ಲಿಂಗಾಯತರಾಗಿ ಅವರು ಮಾಂಸಾಹಾರ ಸೇವಿಸಬಹುದೇ ಎಂಬ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ.

ಇತ್ತೀಚೆಗೆ ಬಿರಿಯಾನಿ ಹೋಟೆಲ್‌ವೊಂದರ ಉದ್ಘಾಟನೆಗೆ ಹೋಗಿದ್ದ ನಟ ಡಾಲಿ ಧನಂಜಯ ಕಾರ್ಯಕ್ರಮ ಮುಗಿದ ಬಳಿಕ ಹೋಟೆಲ್‌ನಲ್ಲಿಯೇ ಬಾಳೆಎಲೆಯಲ್ಲಿ ಭರ್ಜರಿ ಬಿರಿಯಾನಿ ಊಟ ಮಾಡಿದ್ದಾರೆ.ಈ ಕುರಿತ ಫೋಟೋಗಳು ಮತ್ತು ವಿಡಿಯೋ ವ್ಯಾಪಕ ವೈರಲ್ ಆಗುತ್ತಿದೆ. ಅಂತೆಯೇ ಲಿಂಗಾಯತರಾಗಿರುವ ಡಾಲಿ ಧನಂಜಯ ಮಾಂಸಾಹಾರ ಸೇವನೆ ಮಾಡಬಹುದಾ..? ಎಂಬ ಪ್ರಶ್ನೆ ಕೂಡ ಹುಟ್ಟಿಕೊಂಡಿದೆ.

ಇದನ್ನು ಓದಿ: ಅಮ್ಮನ ದುಡಿಮೆ, ಮಗನ ಯಶಸ್ಸು: ಕಲರ್ಸ್ ಕನ್ನಡ ಅವಾರ್ಡ್ಸ್‌ನಲ್ಲಿ ರಾಜ್ ಬಿ ಶೆಟ್ಟಿ ಭಾವುಕ

@sanatan_kannada ಪೋಸ್ಟ್‌ ಮಾಡಿರುವ ವಿಡಿಯೋಗೆ ಸಾಕಷ್ಟು ಕಾಮೆಂಟ್‌ಗಳು ಬಂದಿದ್ದು, ಲಿಂಗಾಯತರ ಮಾಂಸಾಹಾರ ಸೇವನೆ ಮಾಡೋದಿಲ್ಲ ಅಂತಾ ಹೇಳಿದವರು ಯಾರು? ಲಿಂಗಾಯುತ ಧರ್ಮದ ಆರಂಭದಲ್ಲೇ ವೇದಗಳನ್ನು ವಿರೋಧಿಸಿದ್ದವು. ಅವರು ಆಗಲೇ ಮಾಂಸಾಹಾರ ಸೇವನೆ ಮಾಡುತ್ತಿದ್ದರು. ಲಿಂಗಾಯತ ಧರ್ಮ ಯಾರಿಗೂ ಯಾವುದನ್ನೂ ಹೇರೋದಿಲ್ಲ ಎಂದು ವ್ಯಕ್ತಿಯೊಬ್ಬರು ಕಾಮೆಂಟ್‌ ಮಾಡಿದ್ದಾರೆ.

ದಯವಿಲ್ಲದ ಧರ್ಮವದೇವುದಯ್ಯಾ? ದಯವೇ ಬೇಕು ಸಕಲಪ್ರಾಣಿಗಳೆಲ್ಲರಲ್ಲಿಯೂ; ದಯವೇ ಧರ್ಮದ ಮೂಲವಯ್ಯಾ: ಕೂಡಲಸಂಗಯ್ಯನಂತಲ್ಲದೊಲ್ಲನಯ್ಯಾ. ಬಸವಾದಿ ಶರಣರ ವಚನಗಳೆಲ್ಲವೂ ರಾಜಕೀಯ ಲಾಭಕ್ಕೂ ಹಾಗೂ ಹೊಟ್ಟೆಪಾಡಿಗಷ್ಟೇ ಬಳಸಲಾಗುತ್ತಿರುವುದು ಅತ್ಯಂತ ಅಪಾಯಕಾರಿ ಬೆಳವಣಿಗೆ, ಇದು ಸರಿಯಲ್ಲ ಎಂದು ಡಾಲಿ ಬಿರಿಯಾನಿ ತಿನ್ನೋ ವಿಡಿಯೋವನ್ನು ಕಿರಣ್‌ ಆರಾಧ್ಯ ಎನ್ನುವವರು ಟೀಕಿಸಿದ್ದಾರೆ.

ಇನ್ನು ತಮ್ಮ ಊಟದ ಕುರಿತು ನಟ ಡಾಲಿ ಧನಂಜಯ್ ಮೊದಲೇ ಸ್ಪಷ್ಟನೆ ನೀಡಿದ್ದರು. ಈ ಹಿಂದೆ ಹೊಯ್ಲಳ ಚಿತ್ರದ ಸಂದರ್ಭದಲ್ಲಿ ಯೂಟ್ಯೂಬ್ ಚಾನೆಲ್ ಸಂದರ್ಶನವೊಂದರಲ್ಲಿ ಮಾತನಾಡಿದ್ದ ಡಾಲಿ ‘ತಾವು ನಾನ್ ವೆಜ್ ಪ್ರಿಯರಾಗಿದ್ದು, ಹೊಯ್ಸಳ ಚಿತ್ರಕ್ಕೆ ಸಿದ್ಧತೆ ನಡೆಸುತ್ತಿರುವುದರಿಂದ ಡಯಟ್ ನಲ್ಲಿದ್ದೇನೆ’ ಎಂದು ಹೇಳಿದ್ದರು.

krutika naik

Krutika Naik is an editor and writer at Karnataka Stories, where she covers culture, local news, and inspiring voices from across the state. With a passion for storytelling and a keen eye for detail, Krutika brings real stories to life—one article at a time.

Join WhatsApp

Join Now

RELATED POSTS

Leave a Comment