ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲಾ ಪಂಚಾಯತ್ ಕಚೇರಿಯ ಆವರಣದಲ್ಲಿ ಚಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅವನಿಗೆ ಸರ್ಕಾರಿ ಕೆಲಸದ ಆಸೆ ತೋರಿಸಿ ಹಣ ಪಡೆದು ವಂಚನೆ ಎಸಗಿರುವ ಆರೋಪ ಹಿನ್ನೆಲೆಯಲ್ಲಿ ಈ ಒಂದು ಘಟನೆ ನಡೆದಿದೆ ಎನ್ನಲಾಗಿದೆ. ಕಚೇರಿಯ ಆವರಣದಲ್ಲಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಈ ಚಾಲಕ ಬಿಜೆಪಿ ಸಂಸದ್ ಡಾ. ಕೆ. ಸುಧಾಕರ್ ಅವರ ಹೆಸರನ್ನು ಮತ್ತು ಇನ್ನೂ ಇಬ್ಬರು ಯುವಕರ ಹೆಸರನ್ನು ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸರ್ಕಾರಿ ಕೆಲಸ ಕೊಡಿಸೋದಾಗಿ ಹೇಳಿ ಹಣ ಪಡೆದು ವಂಚನೆ ಎಸಗಿರುವ ಆರೋಪ ಕೇಳಿ ಬಂದಿದೆ.
ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿ ಗುತ್ತಿಗೆ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದ ಬಾಬುಗೆ ಶಾಶ್ವತ ಸರ್ಕಾರಿ ಕೆಲಸ ಕೊಡಿಸೋದಾಗಿ ನಂಬಿಸಿದ್ದ ನಾಗೇಶ್ ಹಾಗೂ ಮಂಜುನಾಥ್ ಬಾಬುರವರಿಂದ ಹಣ ಪಡೆದಿದ್ದರು. ಆದರೆ ಹಣ ಪಡೆದು ಕೆಲಸ ಕೊಡಿಸದಿದ್ದಾಗ ಕಂಗಾಲಾದ ಬಾಬು ಘಟನೆ ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ಆವರಣದಲ್ಲೇ ನೇಣಿಗೆ ಶರಣಾಗಿದ್ದಾನೆ.
₹40 ಲಕ್ಷ ನೀಡಬೇಕು..!
ಸುಧಾಕರ್ ಸಚಿವರಾಗಿದ್ದ ವೇಳೆ ಅವರ ಬೆಂಬಲಿಗರಾದ ನಾಗೇಶ್ ಮತ್ತು ಮಂಜುನಾಥ್ ಕಾಯಂ ಸರ್ಕಾರಿ ಕೆಲಸ ಕೊಡಿಸುತ್ತೇವೆ ಎಂದಿದ್ದರು. ₹40 ಲಕ್ಷ ನೀಡಬೇಕು ಎಂದಿದ್ದರು. ನಾನು ನನ್ನ ಬಳಿ ಇದ್ದ ಹಣದ ಜೊತೆಗೆ ಸಾಲ ಮಾಡಿ ₹25 ಲಕ್ಷ ನೀಡಿದ್ದೆ. ಆದರೆ ಕೆಲಸ ಮಾತ್ರ ಕೊಡಿಸಲಿಲ್ಲ’ ಎಂದು ಡೆತ್ ನೋಟ್‌ನಲ್ಲಿ ಬರೆದಿದ್ದಾರೆ.
ಅವರು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದರಾದ ಡಾ.ಕೆ.ಸುಧಾಕರ್ ಹೆಸರನ್ನು ಮತ್ತು ಅವರ ಅನುಯಾಯಿಗಳಾದ ನಾಗೇಶ್, ಮಂಜುನಾಥ್ ಅವರ ಹೆಸರನ್ನು ಬರೆದುಕೊಂಡು ಚಾಲಕ ಎನ್. ಬಾಬು ನೇಣಿಗೆ ಶರಣಾಗಿದ್ದಾರೆ. ಈ ಘಟನೆಯ ಕುರಿತು ಚಿಕ್ಕಬಳ್ಳಾಪುರದ ಗ್ರಾಮಾಂತರ ಠಾಣೆಯ ಪೊಲೀಸರು ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನು ಓದಿ: ಪ್ರತಾಪ್ ಸಿಂಹನ ಫೋನ್ ಅನ್ನು ಎಸ್‌ಐಟಿಗೆ ನೀಡಿದರೆ ಅವರು ಪ್ರಜ್ವಲ್‌ನಂತೆಯೇ, ಜೈಲಿಗೆ ಹೋಗುತ್ತಾರೆ
1 thought on “ಸಂಸದರ ಹೆಸರು ಬರೆದಿಟ್ಟು ಚಾಲಕ ಆತ್ಮಹತ್ಯೆ! ಕೆ.ಸುಧಾಕರ್ ಮೇಲೆ ಆರೋಪ ? Driver dies by suicide naming MP; K. Sudhakar faces allegations.”