---Advertisement---

ಕಲಬುರಗಿ: 10 ಸಾವಿರ ಲಂಚ ಪಡೆಯುತ್ತಿದ್ದ ವೇಳೆ ಎಫ್‌ಡಿಎ ಲೋಕಾಯುಕ್ತ ಬಲೆಗೆ

On: January 17, 2026 11:29 AM
Follow Us:
---Advertisement---

ಕಲಬುರಗಿ ಜಿಲ್ಲೆಯ ಕಮಲಾಪುರ ತಹಶೀಲ್ದಾರ್ ಕಚೇರಿಯಲ್ಲಿ ₹10 ಸಾವಿರ ಲಂಚ ಪಡೆಯುತ್ತಿದ್ದ ಪ್ರಥಮ ದರ್ಜೆ ಸಹಾಯಕ (ಎಫ್‌ಡಿಎ)ನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ಇದನ್ನು ಓದಿ: ಕಲಬುರಗಿ: ಕೌಟುಂಬಿಕ ಕಲಹ ಶಂಕೆ – ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು 42 ವರ್ಷದ ವ್ಯಕ್ತಿ ಆತ್ಮಹತ್ಯೆ

ಕಚನಳ್ಳಿ ತಾಂಡಾದ ಕಿಶನ್ ರಾಠೋಡ ಅವರು ತಹಶೀಲ್ದಾರ್ ಕಚೇರಿಯಲ್ಲಿ ನಡೆದ ಸಿವಿಲ್ ವ್ಯಾಜ್ಯದ ಆದೇಶ ಪ್ರತಿಯನ್ನು ಪಡೆಯಲು ಅರ್ಜಿ ಸಲ್ಲಿಸಿದ್ದರು. ಆದೇಶ ಪ್ರತಿಯನ್ನು ನೀಡಲು ಎಫ್‌ಡಿಎ ಶಶಿಕಾಂತ ಜಂಜೀರ್ ಅವರು ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ. ಇದರಿಂದ ಬೇಸತ್ತ ಕಿಶನ್ ರಾಠೋಡ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ದಾಖಲಿಸಿದ್ದರು.

ದೂರು ಆಧರಿಸಿ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು, ಲಂಚದ ಹಣ ಸ್ವೀಕರಿಸುತ್ತಿದ್ದ ಕ್ಷಣದಲ್ಲೇ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

ಲೋಕಾಯುಕ್ತ ಎಸ್ಪಿ ಸಿದ್ದರಾಜು ಸಿ. ಅವರ ಮಾರ್ಗದರ್ಶನದಲ್ಲಿ ಇನ್‌ಸ್ಪೆಕ್ಟರ್ ಅರುಣಕುಮಾರ್ ಮರಗುಂಡಿ ಹಾಗೂ ಸಿಬ್ಬಂದಿ ಈ ದಾಳಿಯನ್ನು ಯಶಸ್ವಿಯಾಗಿ ನಡೆಸಿದರು.

Join WhatsApp

Join Now

RELATED POSTS