ತುಮಕೂರು ಜಿಲ್ಲೆಯ ಕೋರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿ ನಾಲ್ವರು ಅಯ್ಯಪ್ಪಸ್ವಾಮಿ ಭಕ್ತರು ಮೃತಪಟ್ಟಿದ್ದಾರೆ. ಮೃತರನ್ನು ವೆಂಕಟೇಶ್ (30), ಮಾರುತ್ತಪ್ಪ (44), ಸಾಕ್ಷಿ (7) ಎಂದು ಗುರುತಿಸಲಾಗಿದ್ದು, ಇನ್ನೊಬ್ಬರ ಗುರುತು ಇನ್ನೂ ಪತ್ತೆಯಾಗಿಲ್ಲ. ಮೃತರೆಲ್ಲರೂ ಕೊಪ್ಪಳ ಜಿಲ್ಲೆಯ ಕುಕನೂರು ಮೂಲದವರಾಗಿದ್ದಾರೆ ಎನ್ನಲಾಗಿದೆ.
ಇದನ್ನು ಓದಿ: KSRTC ಬಸ್ನಲ್ಲಿ ಬೆಕ್ಕಿನ ಮರಿಗೂ ಟಿಕೆಟ್; ನಿರ್ವಾಹಕ
ಅಯ್ಯಪ್ಪಸ್ವಾಮಿ ದರ್ಶನ ಮುಗಿಸಿ ವಾಪಸ್ ತೆರಳುವ ವೇಳೆ ಈ ದುರ್ಘಟನೆ ನಡೆದಿದೆ. ಕ್ರೂಸರ್ ವಾಹನದಲ್ಲಿ ಒಟ್ಟು 11 ಮಂದಿ ಭಕ್ತರು ಪ್ರಯಾಣಿಸುತ್ತಿದ್ದು, ಅಪಘಾತದಲ್ಲಿ 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ವಾಹನದ ಮುಂಭಾಗದಲ್ಲಿದ್ದ ನಾಲ್ವರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.
ಮುಂಜಾನೆ ಸುಮಾರು 5 ಗಂಟೆ ಸುಮಾರಿಗೆ ಬೆಳ್ಳಾವಿ ಕ್ರಾಸ್ ಸಮೀಪದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಿಂತಿದ್ದ ಲಾರಿಗೆ ಕ್ರೂಸರ್ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಮಾಹಿತಿ ತಿಳಿದ ಕೂಡಲೇ ಎಸ್ಪಿ ಅಶೋಕ್ ವೆಂಕಟ್ ಹಾಗೂ ಕೋರಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.






