ಬೆಂಗಳೂರು, ಫೆಬ್ರವರಿ 03: ಕರ್ನಾಟಕದ 1ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದೆ. ವಿದ್ಯಾ ವಿಕಾಸ ಯೋಜನೆಯಡಿ ಶಾಲಾ ಮಕ್ಕಳಿಗೆ ಪಠ್ಯಪುಸ್ತಕಗಳ ಜೊತೆಗೆ ನೋಟ್ಬುಕ್ಗಳನ್ನೂ ಉಚಿತವಾಗಿ ವಿತರಿಸಲು ಸರ್ಕಾರ ಅನುಮೋದನೆ ನೀಡಿದೆ. ಇದರಿಂದ ಪೋಷಕರ ಮೇಲಿನ ಆರ್ಥಿಕ ಹೊರೆ ಕಡಿಮೆಯಾಗಲಿದೆ.
ಇದನ್ನು ಓದಿ: ಹೋಂವರ್ಕ್ ಕಾರಣಕ್ಕೆ 4ನೇ ತರಗತಿ ಬಾಲಕನ ಮೇಲೆ ಶಿಕ್ಷಕಿಯ ಹಿಂಸೆ: ಕತ್ತು ಹಿಸುಕುವ ಬೆದರಿಕೆ ಆರೋಪ!!!
ಇದನ್ನು ಓದಿ: ನಿವೃತ್ತಿ ಅಂಚಿನಲ್ಲಿ ಸ್ಫೋಟಕ ಸತ್ಯ: ಸರ್ಕಾರಿ ಶಾಲೆಯಲ್ಲಿ 30 ವರ್ಷ ಸೇವೆ ಸಲ್ಲಿಸಿದ್ದ ಪಾಕಿಸ್ತಾನ ಪ್ರಜೆ..!
2026–27ನೇ ಶೈಕ್ಷಣಿಕ ಸಾಲಿನ 1ರಿಂದ 10ನೇ ತರಗತಿ ವಿದ್ಯಾರ್ಥಿಗಳು ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ವಿತರಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅಧೀನ ಕಾರ್ಯದರ್ಶಿ ಶುಭಮಂಗಳಾ ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ. ಈ ಯೋಜನೆಯಿಂದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಓದುತ್ತಿರುವ ಸುಮಾರು 61 ಲಕ್ಷ ವಿದ್ಯಾರ್ಥಿಗಳಿಗೆ ಲಾಭವಾಗಲಿದೆ.
ಮೊದಲ ಬಾರಿಗೆ 1ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳ ಜೊತೆಗೆ ನೋಟ್ಬುಕ್ ಹಾಗೂ ದಿನಚರಿ ಪುಸ್ತಕಗಳನ್ನೂ ಉಚಿತವಾಗಿ ವಿತರಿಸಲು ಸರ್ಕಾರ ಮುಂದಾಗಿದೆ. ಇದಕ್ಕಾಗಿ ಶಿಕ್ಷಣ ಇಲಾಖೆ 30 ಕೋಟಿ 83 ಲಕ್ಷ 25 ಸಾವಿರ ರೂಪಾಯಿ ಮೊತ್ತದ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಿತ್ತು. ಇದೀಗ ಸರ್ಕಾರ ಒಟ್ಟು 290.46 ಕೋಟಿ ರೂ ಅನುದಾನಕ್ಕೆ ಗ್ರೀನ್ ಸಿಗ್ನಲ್ ನೀಡಿದೆ.
ಮುಂದಿನ ಶೈಕ್ಷಣಿಕ ವರ್ಷದ ಆರಂಭದಲ್ಲೇ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ವಿತರಣೆ ಮಾಡಬೇಕು ಎಂದು ಆದೇಶದಲ್ಲಿ ಸೂಚಿಸಲಾಗಿದೆ. ಪಠ್ಯಪುಸ್ತಕಗಳ ಕಾಗದ ಮತ್ತು ಮುದ್ರಣ ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಬಾರದು, ಹೆಚ್ಚುವರಿ ಬೇಡಿಕೆ ಸಲ್ಲಿಸಿ ದುರುಪಯೋಗ ಮಾಡುವಂತಿಲ್ಲ ಎಂದು ಸರ್ಕಾರ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ.
ಆದೇಶದಂತೆ,
ಸರ್ಕಾರಿ ಶಾಲೆಗಳ ಪೂರ್ವ ಪ್ರಾಥಮಿಕ ವಿದ್ಯಾರ್ಥಿಗಳಿಗೆ ದ್ವಿಭಾಷಾ ಬಾಲಚೇತನ ಚಟುವಟಿಕೆ ಪುಸ್ತಕಗಳು 4ರಿಂದ 9ನೇ ತರಗತಿ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಅಭ್ಯಾಸ ಪುಸ್ತಕಗಳು ಪೂರ್ವ ಪ್ರಾಥಮಿಕದಿಂದ 12ನೇ ತರಗತಿವರೆಗೆ ದಿನಚರಿ ಪುಸ್ತಕಗಳು 1ರಿಂದ 10ನೇ ತರಗತಿಯವರೆಗೆ ಮೌಲ್ಯ ಶಿಕ್ಷಣ ಪುಸ್ತಕಗಳು
ಇದನ್ನು ಓದಿ: ಮಧ್ಯಪ್ರದೇಶದ ಸರ್ಕಾರಿ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆಯ ಅವಮಾನ: ಮಕ್ಕಳಿಗೆ ಪುಸ್ತಕದ ಹಾಳೆಗಳ ಮೇಲೆ ಭೋಜನ ನೀಡಲಾಗಿದೆ
ವಿತರಿಸಲಾಗುತ್ತದೆ.
ಕೆಟಿಪಿಪಿ ಕಾಯ್ದೆ–1999ರ ನಿಯಮಗಳಂತೆ ಪಾರದರ್ಶಕ ಟೆಂಡರ್ ಪ್ರಕ್ರಿಯೆ ಮೂಲಕ ಕರ್ನಾಟಕ ಪುಸ್ತಕ ಸಂಘದಿಂದ ಮುದ್ರಿಸಿ ವಿತರಿಸುವಂತೆ ಶಿಕ್ಷಣ ಇಲಾಖೆ ಆಯುಕ್ತರಿಗೆ ಸೂಚನೆ ನೀಡಲಾಗಿದೆ. ಒಟ್ಟು 264.62 ಕೋಟಿ ರೂ ವೆಚ್ಚದಲ್ಲಿ ವಿದ್ಯಾ ವಿಕಾಸ ಯೋಜನೆಯಡಿ ಪುಸ್ತಕ ವಿತರಣೆಗೆ ಅನುಮೋದನೆ ನೀಡಲಾಗಿದೆ. ಸಮಗ್ರ ಶಿಕ್ಷಣ ಕರ್ನಾಟಕದಡಿ ಹೊಸ ಕಾರ್ಯಕ್ರಮಗಳಿಗೆ 25.841 ಕೋಟಿ ರೂ ಅನುದಾನ ಮೀಸಲಿಡಲಾಗಿದೆ.
ಶೈಕ್ಷಣಿಕ ವರ್ಷದ ಆರಂಭದಲ್ಲೇ ಎಸ್ಎಟಿಎಸ್ ಮೂಲಕ ಶಾಲೆಗಳಿಂದ ಬೇಡಿಕೆ ಮಾಹಿತಿ ಸಂಗ್ರಹಿಸಿ ಪಠ್ಯಪುಸ್ತಕಗಳನ್ನು ವಿದ್ಯಾರ್ಥಿಗಳಿಗೆ ವಿತರಿಸುವಂತೆ ಸರ್ಕಾರ ಆದೇಶಿಸಿದೆ.






