ಮುಂಬೈ: ಮಹಾರಾಷ್ಟ್ರ ಪುರಸಭೆ ಚುನಾವಣೆಯ ಫಲಿತಾಂಶಗಳು ಪ್ರಕಟವಾಗುತ್ತಿದ್ದು, ಜಲ್ನಾ ಮಹಾನಗರ ಪಾಲಿಕೆಯ ವಾರ್ಡ್ 13ರಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಶ್ರೀಕಾಂತ್ ಪಂಗಾರ್ಕರ್ ಗೆಲುವು ಸಾಧಿಸಿದ್ದಾರೆ. ಪಂಗಾರ್ಕರ್ ಖ್ಯಾತ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಯಾಗಿದ್ದಾರೆ ಎಂಬುದು ಗಮನಾರ್ಹವಾಗಿದೆ.
ಇದನ್ನು ಓದಿ: 1962 ಭಾರತ ಚೀನಾ ಯುದ್ಧದಲ್ಲಿ 600 ಕಿಗ್ರಾಂ ಚಿನ್ನ ದಾನ ಮಾಡಿದ ದರ್ಬಂಗ ಮಹಾರಾಣಿ ನಿಧನ
ವಾರ್ಡ್ 13ರಲ್ಲಿ ಬಿಜೆಪಿ ಸೇರಿದಂತೆ ವಿವಿಧ ಪಕ್ಷಗಳ ಅಭ್ಯರ್ಥಿಗಳು ಕಣದಲ್ಲಿದ್ದರೂ, ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಈ ಕ್ಷೇತ್ರದಲ್ಲಿ ತನ್ನ ಅಭ್ಯರ್ಥಿಯನ್ನು ನಿಲ್ಲಿಸಿರಲಿಲ್ಲ. ಪಂಗಾರ್ಕರ್ ಕಳೆದ ವರ್ಷ ವಿಧಾನಸಭೆ ಚುನಾವಣೆಗೂ ಮುನ್ನ ಶಿವಸೇನೆ ಸೇರಿದ್ದರಾದರೂ, ಅವರ ಬಗ್ಗೆ ಆಕ್ಷೇಪಣೆಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಶಿಂಧೆ ಅವರ ಉಮೇದುವಾರಿಕೆಯನ್ನು ಹಿಂತೆಗೆದುಕೊಂಡಿದ್ದರು.
ಶಿವಸೇನೆಯ ಪರವಾಗಿ 2001ರಿಂದ 2006ರವರೆಗೆ ಜಲ್ನಾ ಪುರಸಭೆ ಸದಸ್ಯರಾಗಿದ್ದ ಪಂಗಾರ್ಕರ್, ನಂತರ ಟಿಕೆಟ್ ನಿರಾಕರಣೆಯ ಬಳಿಕ 2011ರಲ್ಲಿ ಹಿಂದೂ ಜನಜಾಗೃತಿ ಸಮಿತಿಗೆ ಸೇರಿದ್ದರು.
ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ಸೆಪ್ಟೆಂಬರ್ 2017ರಲ್ಲಿ ಬೆಂಗಳೂರಿನಲ್ಲಿನ ಅವರ ನಿವಾಸದ ಬಳಿ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಬಂಧಿತರಾಗಿದ್ದ ಪಂಗಾರ್ಕರ್ ಅವರಿಗೆ 2024ರಲ್ಲಿ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿತ್ತು. ಇದಕ್ಕೂ ಮೊದಲು, 2018ರಲ್ಲಿ ಸ್ಫೋಟಕಗಳು ಮತ್ತು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡ ಪ್ರಕರಣದಲ್ಲಿ ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಅವರು ಅವರನ್ನು ಬಂಧಿಸಿತ್ತು.







2 thoughts on “ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ಶ್ರೀಕಾಂತ್ ಪಂಗಾರ್ಕರ್ಗೆ ಭರ್ಜರಿ ಗೆಲುವು”
Comments are closed.