ಅಗಸ್ಟ್ 16ರವರೆಗೆ ಅವರಿಗೆ ರಾಜ್ಯಾದ್ಯಂತ ಭಾರಿ ಮಳೆ ಆಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ ಮಾಡಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುತ್ತಿದ್ದು ಮಳೆಯಿಂದ ಹಲವು ಅವಾಂತರಗಳು ಸೃಷ್ಟಿಯಾಗಿವೆ. ಅಲ್ಲದೆ ಬೆಂಗಳೂರಲ್ಲಿ 20 ಕಡೆ ಮರಗಳು ಉರುಳಿ ಬಿದ್ದಿವೆ. ಇದೀಗ ಆಗಸ್ಟ್ 15 ರವರೆಗೆ ಹವಮಾನ ಇಲಾಖೆ ಯಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಆಗಸ್ಟ್ 16ರಂದು ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯದಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಭಾರತೀಯ ಹವಾಮಾನ ಇಲಾಖೆಯಿಂದ ರಾಜ್ಯದಲ್ಲಿ ಭಾರಿ ಮಳೆ ಆಗುವ ಮುನ್ಸೂಚನೆ ನೀಡಿದೆ.
ಸೋಮವಾರ ಬೆಂಗಳೂರು ನಗರದಲ್ಲಿ ಮಳೆಯಾಗಿದೆ.ಎಚ್ಎಎಲ್ನಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 26.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 29.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್ಪೋರ್ಟ್ನಲ್ಲಿ 27.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 29.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಬಿಹಾರ, ಜಮ್ಮು-ಕಾಶ್ಮೀರ, ಜಾರ್ಖಂಡ್ ವ್ಯಾಪ್ತಿಯ ಕೆಲವು ಕಡೆಗಳಲ್ಲಿ ಗುಡುಗು, ಮಿಂಚು ಹಾಗೂ ಗರಿಷ್ಠ 40 ಕಿಲೋ ಮೀಟರ್ ವೇಗದ ಬಿರುಗಾಳಿ ಸಹಿತ ಮಳೆ ಆಗಲಿದೆ. ಮೂರು ದಿನಗಳ ನಂತರದ ಮೂರರಿಂದ ನಾಲ್ಕು ದಿನ ಆಂಧ್ರಪ್ರದೇಶ, ಅರುಣಾಚಲ ಪ್ರದೇಶ, ತ್ರಿಪುರ, ಒಡಿಶಾ, ತೆಲಂಗಾಣ, ಅಸ್ಸಾಂ, ಮೇಘಾಲಯ, ಛತ್ತೀಸ್‌ಗಢ, ಮಧ್ಯಪ್ರದೇಶ, ಮಹಾರಾಷ್ಟ್ರ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಹಾಗೂ ಕರ್ನಾಟಕದ ಒಂದೆರಡು ಭಾಗಗಳಲ್ಲಿ ಸಾಧಾರಣದಿಂದ ಭಾರಿ ಮಳೆ ಆಗುವ ಸಂಭವವಿದೆ.