ಕಲಬುರಗಿ ನಗರದಲ್ಲಿ ಕೌಟುಂಬಿಕ ಕಲಹದ ಶಂಕೆಯ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರು ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತರನ್ನು ಖಂಡುರಾಜ್ ಧವಲಾಜಿ (42) ಎಂದು ಗುರುತಿಸಲಾಗಿದೆ. ಶಿವಶಕ್ತಿ ನಗರದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಪತ್ತೆಯಾಗಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಪ್ರಾಥಮಿಕ ತನಿಖೆಯ ಪ್ರಕಾರ, ಕೌಟುಂಬಿಕ ಸಮಸ್ಯೆಗಳ ಹಿನ್ನೆಲೆಯಲ್ಲಿ ಪತಿ–ಪತ್ನಿಯ ನಡುವೆ ನಡೆದ ಜಗಳವೇ ಆತ್ಮಹತ್ಯೆಗೆ ಕಾರಣವಾಗಿರಬಹುದು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಚೌಕ್ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.






