---Advertisement---

ಬಿಡದಿ: ಅನಿತಾ ಕುಮಾರಸ್ವಾಮಿ ಹೆಸರಿನಲ್ಲಿ ದಾಖಲಾಗಿರುವ ಜಮೀನು ವಿವರ ಬಿಡುಗಡೆ!

On: September 15, 2025 6:53 AM
Follow Us:
ಬಿಡದಿ: ಅನಿತಾ ಕುಮಾರಸ್ವಾಮಿ ಹೆಸರಿನಲ್ಲಿ ದಾಖಲಾಗಿರುವ ಜಮೀನು ವಿವರ ಬಿಡುಗಡೆ!
---Advertisement---

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಪತ್ನಿ ಅನಿತಾ ಕುಮಾರಸ್ವಾಮಿ ಹಾಗೂ ಪುತ್ರ ನಿಖಿಲ್ ಕುಮಾರಸ್ವಾಮಿ ಬಿಡದಿ ಸಮಗ್ರ ಉಪನಗರ ಯೋಜನಾ ವ್ಯಾಪ್ತಿಯ ಹೊಸೂರಿನಲ್ಲಿ ಹೊಂದಿರುವ ಭೂಮಿ ದಾಖಲೆಗಳನ್ನು, ಜಿಬಿಡಿಎ ಅಧ್ಯಕ್ಷ ಗಾಣಕಲ್ ನಟರಾಜ್ ಸೋಮವಾರ ಪತ್ರಕರ್ತರ ಮುಂದೆ ಬಿಡುಗಡೆ ಮಾಡಿದರು.

“ನನ್ನ ತಾಯಿ ಭೂ ಪರಿಹಾರಕ್ಕೆ ಅರ್ಜಿ ಸಲ್ಲಿಸಿರುವುದನ್ನು ಡಿ.ಕೆ.ಶಿವಕುಮಾರ್ ಸಾಬೀತು ಪಡಿಸಿದರೆ ತಾಯಿ ಹೆಸರಿನಲ್ಲಿರುವ ಎಲ್ಲ ಜಮೀನನ್ನು ಬಡವರಿಗೆ ದಾನ ಮಾಡುತ್ತೇನೆ” ಎಂದು ನಿಖಿಲ್ ಕುಮಾರಸ್ವಾಮಿ ಭಾನುವಾರ ಬೆಂಗಳೂರಿನಲ್ಲಿ ನಡೆದ ಜೆಡಿಎಸ್‌ ಸಮಾವೇಶದಲ್ಲಿ ಸವಾಲು ಹಾಕಿದ್ದರು.

ಕುಮಾರಸ್ವಾಮಿ ಅವರ ಧರ್ಮಪತ್ನಿಯವರು ಹಾಗೂ ಮಗ ಸೇರಿದಂತೆ ಶೇಕಡಾ 70 ರಷ್ಟು ಮಂದಿ ಪರಿಹಾರ ನೀಡಿ ಎಂದು ಭೂಸ್ವಾಧೀನಕ್ಕೆ ಒಪ್ಪಿಗೆ ಸೂಚಿಸಿದ್ದಾರೆ. ಶೇ.30 ರಷ್ಟು ಮಂದಿ ಮಾತ್ರ ಒಪ್ಪಿಗೆ ನೀಡಿಲ್ಲ. ಆದರೆ ನಾನು ನಿಮ್ಮ ಪರವಾಗಿ ಏನು ತೀರ್ಮಾನ ತೆಗೆದುಕೊಳ್ಳಬೇಕು‌. ಯಾವ ರೀತಿ ಸಹಾಯ ಮಾಡಬೇಕು ಎಂದು ಚರ್ಚೆ ನಡೆಸುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದರು.

ಇಬ್ಬರ ಜಮೀನು ದಾಖಲೆಗಳನ್ನು ಪ್ರದರ್ಶಿಸಿದ ನಟರಾಜ್‌, ಬಳಿಕ ಮಾತನಾಡಿ, ಯೋಜನೆಯ ಪ್ರಾಥಮಿಕ ಅಧಿಸೂಚನೆ ವಿಶೇಷ ರಾಜ್ಯ ಪತ್ರ ಮಾರ್ಚ್ 14 ರಂದು ಪ್ರಕಟವಾಗಿತ್ತು. 26 ರಂದು ಕನ್ನಡ ಹಾಗೂ ಇಂಗ್ಲೀಷ್ ದಿನಪತ್ರಿಕೆಯಲ್ಲಿ ಜಾಹೀರಾತು ಕೂಡ ನೀಡಲಾಗಿತ್ತು. ಇದಾದ ಮೂರು ದಿನಕ್ಕೆ ಅಂದರೆ ಮಾರ್ಚ್ 29 ರಂದು ಇಬ್ಬರೂ ಕೂಡ ಪ್ರಾಧಿಕಾರಕ್ಕೆ ಪತ್ರವನ್ನು ಬರೆದಿದ್ದಾರೆ ಎಂದು ಹೇಳಿದರು.

“ಹೊಸೂರಿನ ಸರ್ವೆ ನಂ. 26ರಲ್ಲಿ ನಾಲ್ಕು ಎಕರೆ ಜಮೀನು ನನಗೆ ಲಕ್ಷ್ಮೀದೇವಮ್ಮ ಅವರಿಂದ ಹಿಂಪಡೆಯಲಾಗದ ಜನರಲ್ ಪವರ್ ಆಫ್ ಅಟಾರ್ನಿ ಮತ್ತು ಕ್ರಯದ ಕರಾರುಪತ್ರ ಮಾಡಿಕೊಂಡಿರುವುದಾಗಿ ನಿಖಿಲ್ ಪತ್ರದಲ್ಲಿ ತಿಳಿಸಿದ್ದಾರೆ. ಹೊಸೂರು ಮತ್ತು ಬನ್ನಿಗಿರಿ ಗ್ರಾಮದ ಒಂಬತ್ತು ಸರ್ವೆ ನಂಬರ್‌ಗಳಲ್ಲಿ ಒಟ್ಟು 29 ಎಕರೆ 10 ಗುಂಟೆ ಜಮೀನು ನನ್ನ ಹೆಸರಿನಲ್ಲಿ ಖಾತೆ ಮತ್ತು ಪಹಣಿಗಳು ದಾಖಲಾಗಿವೆ ಎಂದು ಅನಿತಾ ಹೇಳಿದ್ದಾರೆ. ಕಾರಣಾಂತರಗಳಿಂದ ವಿನಯ್ ಗೌಡ ಎಂ.ಜಿ ಎಂಬವರಿಗೆ ನಾನು ಸ್ಪೆಷಲ್‌ ಪವರ್ ಆಫ್ ಅಟಾರ್ನಿ ನೀಡಿದ್ದು, ಇದೀಗ ಜಮೀನನ್ನು ಸ್ವಾಧೀನಾನುಭವಕ್ಕೆ ಪಡೆದಿರುವುದಾಗಿ ಉಲ್ಲೇಖಿಸಿದ್ದಾರೆ” ಎಂದು ಪತ್ರ ಪ್ರದರ್ಶಿಸಿದರು.

krutika naik

Krutika Naik is an editor and writer at Karnataka Stories, where she covers culture, local news, and inspiring voices from across the state. With a passion for storytelling and a keen eye for detail, Krutika brings real stories to life—one article at a time.

Join WhatsApp

Join Now

RELATED POSTS

1 thought on “ಬಿಡದಿ: ಅನಿತಾ ಕುಮಾರಸ್ವಾಮಿ ಹೆಸರಿನಲ್ಲಿ ದಾಖಲಾಗಿರುವ ಜಮೀನು ವಿವರ ಬಿಡುಗಡೆ!”

Leave a Comment