ಅರ್ಜಿ ಹಾಕದಿದ್ದರೂ ಪೌತಿ ಖಾತೆ ಅಭಿಯಾನವನ್ನು ಸರ್ಕಾರದಿಂದ ಆರಂಭಿಸಲಾಗುತ್ತಿದೆ. ಈ ಮೂಲಕ ವಾರಸುದಾರರ ಹೆಸರಿಗೆ ಜಮೀನು ವರ್ಗಾವಣೆ ಮಾಡುವುದಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಶೀಘ್ರವೇ ಎಲ್ಲಾ ತಾಲೂಕುಗಳಲ್ಲಿಯೂ ಅಭಿಯಾನ ಮಾದರಿಯಲ್ಲಿ ಪೌತಿ ಖಾತೆ ಮಾಡಿಕೊಡಬೇಕು ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಸೂಚನೆ ನೀಡಿದ್ದಾರೆ.
“ಈ ಮೊದಲು ಒಂದು ಪ್ರಕರಣದ ಇತ್ಯರ್ಥಕ್ಕೆ 212 ದಿನ ತೆಗೆದುಕೊಳ್ಳುತ್ತಿದ್ದರೆ, ಪ್ರಸ್ತುತ 82 ದಿನಕ್ಕೆ ಇಳಿಸಲಾಗಿತ್ತು. ಬರುಬರುತ್ತಾ ತಕರಾರು ಅರ್ಜಿಗಳ ವಿಲೇ ಕೆಲಸ ಮತ್ತೆ ವೇಗ ಕಳೆದುಕೊಳ್ಳುತ್ತಿರುವುದನ್ನು ಒಪ್ಪಲು ಸಾಧ್ಯವಿಲ್ಲ” ಎಂದು ಬೇಸರ ಹೊರಹಾಕಿದರು.
“ಮೃತರ ಹೆಸರಿನಲ್ಲಿರುವ ಜಮೀನುಗಳಿಗೆ ಪಿಎಂ ಕಿಸಾನ್, ಹನಿ ನೀರಾವರಿ ಹಾಗೂ ಯಂತ್ರೋಪಕರಣ ಖರೀದಿ ಸಬ್ಸಿಡಿ ನೀಡದಂತೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಇದರಿಂದ ರೈತರಿಗೆ ತೊಂದರೆಯಾಗಲಿದೆ, ಅನ್ಯಾಯವಾಗಲಿದೆ. ಹೀಗಾಗಿ ಜನರಿಂದ ಅರ್ಜಿ ಕರೆಯದೆ ನಾವೇ ರೈತರ ಮನೆ ಬಾಗಿಲಿಗೆ ತೆರಳಿ ಅಭಿಯಾನ ಮಾದರಿಯಲ್ಲಿ ಫೌತಿ ಖಾತೆ ಮಾಡಿಕೊಡುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಈ ಅಭಿಯಾನಕ್ಕೆ ಮತ್ತಷ್ಟು ವೇಗ ತುಂಬಬೇಕು” ಎಂದರು.







2 thoughts on “ಅರ್ಜಿ ಸಲ್ಲಿಸದಿದ್ರೂ ಮೃತರ ಹೆಸರಲ್ಲಿರುವ ಜಮೀನು ವಾರಸುದಾರರ ಹೆಸರಿಗೆ ವರ್ಗಾವಣೆ!! ರೈತರಿಗೆ ಬಂಪರ್ ಸುದ್ದಿ..”