---Advertisement---

ಮುಳ್ಳನ್ನು ಮುಳ್ಳಿನಿಂದಲೇ ತೆಗೀರಿ, ಮತದಾರರ ಗುರುತಿನ ಚೀಟಿಗೆ ಆಧಾರ್ ಲಿಂಕ್ ಮಾಡಿ: ಎಚ್‌ಡಿಕೆ ಆಕ್ರೋಶ!link Aadhaar to voter ID: HDK’s outrage

By krutika naik

Updated on:

Follow Us
link Aadhaar to voter ID: HDK’s outrage
---Advertisement---

ಚುನಾವಣೆ ಆಯೋಗದ ಮೇಲೆ ಅನುಮಾನ ಪಟ್ಟಿರುವ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಒಂದನ್ನು  ಹಂಚಿಕೊಂಡಿರುವ ಅವರು, ಮತಗಳ್ಳತನವಾಗಿದೆ ಎಂದು ಸಾಂವಿಧಾನಿಕ ಸಂಸ್ಥೆಗಳ ಮೇಲೆ ಅನುಮಾನ ಪಟ್ಟಿರುವುದು ಕಿಡಿಗೇಡಿ ಪಿತೂರಿಯಾಗಿದೆ ಎಂದು ಹೇಳೀಕೆ ನೀಡಿದ್ದಾರೆ.

ಚುನಾವಣೆಯಲ್ಲಿ ಎಸಗಿದ ಪಾಪವನ್ನು ಸುಳ್ಳಿನಿಂದ ಮುಚ್ಚಿಕೊಳ್ಳಲು ಚುನಾವಣೆ ಆಯೋಗದ ಮೇಲೆ ಸುಳ್ಳಿನ ಸುರಿಮಳೆ ಜನತಂತ್ರಕ್ಕೆ ನೇಣು ಬಿಗಿಯುವ ದೂರ್ತ ಹುನ್ನಾರ. ಅಮೃತಕಾಲದ ಪ್ರಜಾಪ್ರಭುತ್ವಕ್ಕೆ ವಿಷವಿಕ್ಕುವ ಘೋರ ಷಡ್ಯಂತ್ರ್ಯ ಎಂದು ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಮತಗಳ್ಳತನ ಆರೋಪಕ್ಕೆ ಒಂದೇ ಮದ್ದು. ಮತದಾರರ ಗುರುತಿನ ಚೀಟಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡುವುದು.ಅಷ್ಟು ಮಾಡಿದರೆ ಮತಗಳ್ಳರ ಆಟಕ್ಕೆ ಅಂಕೆ ಬೀಳುವುದು ಗ್ಯಾರಂಟಿ. ಕೇಂದ್ರೀಯ ಚುನಾವಣೆ ಆಯೋಗಕ್ಕೆ ನನ್ನ ಮನವಿ ಅಥವಾ ಒತ್ತಾಯ ಇಷ್ಟೇ. ಮುಳ್ಳನ್ನು ಮುಳ್ಳಿನಿಂದಲೇ ತೆಗೆಯಿರಿ ಎಂದು ರಾಹುಲ್ ಗಾಂಧಿ ಆರೋಪಕ್ಕೆ ತಿರುಗೇಟು ನೀಡುವ ಮೂಲಕ ಕೇಂದ್ರಕ್ಕೆ ಸಲಹೆ ನೀಡಿದ್ದಾರೆ.

ಸಾಂವಿಧಾನಿಕ ಸಂಸ್ಥೆಗಳ ಮೇಲೆ ಅಸತ್ಯದ ಆರೋಪದ ಮೂಲಕ ಅನುಮಾನದ ಪ್ರಯೋಜನ ಪಡೆಯುವುದು ಕಿಡಿಗೇಡಿ ಪಿತೂರಿ. ಚುನಾವಣೆಯಲ್ಲಿ ಎಸಗಿದ ಪಾಪವನ್ನು ಸುಳ್ಳಿನಿಂದ ಮುಚ್ಚಿಕೊಳ್ಳುವ ಗೊಬೆಲ್ ರಾಜಕಾರಣವಾಗಿದೆ ಎಂದು ಅವರು ಆರೋಪ ಮಾಡಿದ್ದಾರೆ.

krutika naik

Krutika Naik is an editor and writer at Karnataka Stories, where she covers culture, local news, and inspiring voices from across the state. With a passion for storytelling and a keen eye for detail, Krutika brings real stories to life—one article at a time.

---Advertisement---

Leave a Comment