ಮಹಾರಾಷ್ಟ್ರದಲ್ಲಿ ಖಾಸಗಿ ವಿಮಾನ ಪತನಗೊಂಡು, DCM ‘ಅಜಿತ್ ಪವಾರ್’ ಸೇರಿ 6 ಮಂದಿ ದುರ್ಮರಣಕ್ಕೀಡಾಗಿದ್ದಾರೆ ಎಂದು ತಿಳಿದು ಬಂದಿದೆ.
ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರು ಪ್ರಯಾಣಿಸುತ್ತಿದ್ದ ವಿಮಾನ ಅಪಘಾತಕ್ಕೀಡಾಗಿರುವ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.ಈ ಘಟನೆಯು ಅವರ ಸ್ವಕ್ಷೇತ್ರವಾದ ಬಾರಾಮತಿಯಲ್ಲಿ ನಡೆದಿದೆ. ದುರಂತದಲ್ಲಿ ಡಿಸಿಎಂ ಅಜಿತ್ ಪವಾರ್ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನು ಓದಿ: ಮಧ್ಯಪ್ರದೇಶದ ಸರ್ಕಾರಿ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆಯ ಅವಮಾನ: ಮಕ್ಕಳಿಗೆ ಪುಸ್ತಕದ ಹಾಳೆಗಳ ಮೇಲೆ ಭೋಜನ ನೀಡಲಾಗಿದೆ
ಬಾರಾಮತಿ ಕ್ಷೇತ್ರದಲ್ಲಿ ಹೆಲಿಕಾಪ್ಟರ್ ಲ್ಯಾಂಡಿಂಗ್ ಆಗುವ ಸಮಯದಲ್ಲಿ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.ಅಪಘಾತದ ತೀವ್ರತೆಗೆ ಸ್ಥಳದಲ್ಲಿ ಭಾರಿ ಪ್ರಮಾಣದ ಬೆಂಕಿ ಮತ್ತು ದಟ್ಟವಾದ ಹೊಗೆ ಆವರಿಸಿಕೊಂಡಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ವಿಮಾನದಲ್ಲಿದ್ದ ಕೆಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ವರದಿಯಾಗಿದೆ.






