ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಅವರ ಕಾರು ಚಾಲಕನ ಮೇಲೆ ದುಷ್ಕರ್ಮಿಗಳು ಚಾಕುವಿನಿಂದ ದಾಳಿ ನಡೆಸಿರುವ ಘಟನೆ ಬೆಳಗಾವಿ ನಗರದಲ್ಲಿ ನಡೆದಿದೆ. ಕ್ಯಾಂಪ್ ಪೊಲೀಸ್ ಠಾಣಾ ವ್ಯಾಪ್ತಿಯ ಕ್ಲಬ್ ರಸ್ತೆಯಲ್ಲಿ ಈ ಭೀಕರ ಘಟನೆ ನಡೆದಿದ್ದು, ನಗರದಲ್ಲಿ ಆತಂಕ ಮೂಡಿಸಿದೆ.
ಇದನ್ನು ಓದಿ: SHOCKING!!! ಆಮ್ಲೆಟ್ ನೆರವಿನಿಂದ ಅಪರಿಚಿತ ಮಹಿಳೆಯ ಕೊಲೆ ಭೇದಿಸಿದ ಪೊಲೀಸರು…!!!
ಗಾಯಗೊಂಡ ವ್ಯಕ್ತಿಯನ್ನು ಬೆಳಗಾವಿ ತಾಲೂಕಿನ ಬೆಳಗುಂದಿ ಗ್ರಾಮದ ಬಸವಂತ ಕಡೋಲ್ಕರ್ (32) ಎಂದು ಗುರುತಿಸಲಾಗಿದೆ. ಅವರು ಹಲವು ವರ್ಷಗಳಿಂದ ಮೃಣಾಲ್ ಹೆಬ್ಬಾಳ್ಕರ್ ಅವರ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದಾರೆ.
ವರದಿ ಪ್ರಕಾರ, ಬಸವಂತ ಅವರು ಕಾರನ್ನು ನಿಲ್ಲಿಸಿ ರಸ್ತೆಯ ಬಳಿ ನಿಂತಿದ್ದ ವೇಳೆ, ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತರು ಏಕಾಏಕಿ ಚಾಕುವಿನಿಂದ ದಾಳಿ ನಡೆಸಿದ್ದಾರೆ. ಎದೆ, ಭುಜ ಹಾಗೂ ತೊಡೆ ಸೇರಿದಂತೆ ನಾಲ್ಕು ಕಡೆ ಚಾಕು ಇರಿದು ಗಂಭೀರವಾಗಿ ಗಾಯಗೊಳಿಸಿ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.
ಗಂಭೀರ ಗಾಯಗೊಂಡ ಬಸವಂತ ಅವರನ್ನು ತಕ್ಷಣವೇ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವೈದ್ಯರ ಮಾಹಿತಿ ಪ್ರಕಾರ ಅವರ ಆರೋಗ್ಯ ಸ್ಥಿತಿ ಪ್ರಸ್ತುತ ಸ್ಥಿರವಾಗಿದೆ.
ಘಟನೆಯ ಮಾಹಿತಿ ತಿಳಿದ ಕೂಡಲೇ ಡಿಸಿಪಿ ಹಾಗೂ ಎಸಿಪಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುವಿನ ಆರೋಗ್ಯ ವಿಚಾರಿಸಿದರು. ಇದೇ ವೇಳೆ ಮೃಣಾಲ್ ಹೆಬ್ಬಾಳ್ಕರ್ ಕೂಡ ಆಸ್ಪತ್ರೆಗೆ ಆಗಮಿಸಿ ವೈದ್ಯರಿಂದ ಮಾಹಿತಿ ಪಡೆದರು.
ಈ ಸಂಬಂಧ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದ್ದು, ದಾಳಿಯ ಹಿಂದಿನ ಉದ್ದೇಶ ಏನು ಎಂಬುದರ ಬಗ್ಗೆ ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿದಿದೆ.







1 thought on “ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರನ ಕಾರು ಚಾಲಕನ ಮೇಲೆ ಚಾಕು ಇರಿತ”
Comments are closed.