ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾಧಿಕಾರಿ ಸಚಿವರಾದ ಸಂತೋಷ್ ಲಾಡ್ ಅವರು ಸೆಪ್ಟೆಂಬರ್ 1ರಂದು ಬೆಳಿಗ್ಗೆದಿಂದ ಸಂಜೆವರೆಗೂ ಕಲಘಟಗಿ ಮತಕ್ಷೇತ್ರದ ಹಳ್ಳಿಗಳಲ್ಲಿ, ಬೆಳೆ ಹಾನಿಯಾದ ರೈತರಿಗೆ ಭೇಟಿ ನೀಡಿ, ಕಲಘಟಗಿ ಪಟ್ಟಣದಲ್ಲಿ ಸಾರ್ವಜನಿಕ ಸಭೆ ನಡೆಸಿ, ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದರು.
ಗೋವಿನಜೋಳ ಮತ್ತು ಭತ್ತ ಬೆಳೆ ವೀಕ್ಷಣೆ
ಹುಲಕೊಪ್ಪ ಹಾಗೂ ಗಳಗಿ ಗ್ರಾಮಗಳ ಚನ್ನಬಸಪ್ಪ ಹಳ್ಯಾಳ ಅವರ ಜಮೀನಿಗೆ ಭೇಟಿ ನೀಡಿ, ಕಾಡುಹಂದಿ, ಕರಡಿ ಹಾಗೂ ಇತರ ಕಾಡು ಪ್ರಾಣಿಗಳಿಂದ ಗೋವಿನಜೋಳದ ಬೆಳೆ, ನಾಗರಾಜ ಹಳ್ಯಾಳ ಅವರ ತೋಟದ ಭತ್ತದ ಬೆಳೆ ಹಾಗೂ ಕಬ್ಬು ಬೆಳೆ ವೀಕ್ಷಣೆ ಮಾಡಿ, ಮಾಹಿತಿ ಪಡೆದರು.
ಹುಲಕೊಪ್ಪ ಹಾಗೂ ಗಳಗಿ ಗ್ರಾಮಗಳ ಚನ್ನಬಸಪ್ಪ ಹಳ್ಯಾಳ ಅವರ ಜಮೀನಿಗೆ ಭೇಟಿ ನೀಡಿ, ಕಾಡುಹಂದಿ, ಕರಡಿ ಮತ್ತು ಇತರ ಕಾಡು ಪ್ರಾಣಿಗಳಿಂದ ಹಾನಿಯಾದ ಗೋವಿನಜೋಳದ ಬೆಳೆ ವೀಕ್ಷಣೆ ಮಾಡಿದರು. ಇದರ ಜೊತೆಗೆ ನಾಗರಾಜ ಹಳ್ಯಾಳ ಅವರ ತೋಟದಲ್ಲಿ ಬೆಳೆಯುತ್ತಿರುವ ಭತ್ತ ಮತ್ತು ಕಬ್ಬು ಬೆಳೆಗಳ ಸ್ಥಿತಿಯನ್ನು ಪರಿಶೀಲಿಸಿ, ತಾಜಾ ಮಾಹಿತಿ ಪಡೆದರು. ರೈತರಿಂದ ನೇರವಾಗಿ ಮಾಹಿತಿ ಪಡೆದ ನಂತರ, ಅವರು ಬೆಳೆಗಳ ಸುರಕ್ಷತೆ ಮತ್ತು ಕಾಡುಪ್ರಾಣಿ ದಾಳಿಗೆ ತಡೆಯುವ ಕ್ರಮಗಳ ಕುರಿತು ಚರ್ಚೆ ನಡೆಸಿದರು. ಈ ಮೂಲಕ, ಸ್ಥಳೀಯ ರೈತರು ಎದುರಿಸುತ್ತಿರುವ ಸಮಸ್ಯೆಗಳನ್ನು ಅರಿತು ಸೂಕ್ತ ಮಾರ್ಗಸೂಚಿಗಳನ್ನು ಒದಗಿಸಲು ಅಧಿಕಾರಿಗಳು ಗಮನ ಹರಿಸಿದರು.
“ಕಲಘಟಗಿ ಹಾಗೂ ಧಾರವಾಡ ತಾಲೂಕಿನ ಕೆಲವು ಪ್ರದೇಶಗಳು ಮಲೆನಾಡಿನ ಸೆರಗಿನಲ್ಲಿ ಇದ್ದು, ಗುಡ್ಡ, ಕಾಡು ಹೆಚ್ಚಾಗಿವೆ. ಮತ್ತು ಕಾಡುಪ್ರಾಣಿಗಳು ಸಾಕಷ್ಟು ಇವೆ. ರೈತರು ಪ್ರತಿವರ್ಷ ಬೆಳೆದ ಬೆಳೆಯನ್ನು ಸುಸೂತ್ರವಾಗಿ ರಾಶಿ ಮಾಡಿಕೊಂಡು ಬರಲು ತೊಂದರೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಈ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಾಣಲು ಕ್ರಮವಹಿಸಬೇಕಿದೆ” ನಂತರ ಅವರು ಸ್ಥಳದಲ್ಲಿ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದರು.
ಮುಂದಿನ ವಾರದಲ್ಲಿ ಪ್ರಾಣಿಗಳಿಂದ ಹಾನಿಯಾದ ಬೆಳೆ ಪ್ರದೇಶವನ್ನು ಕಲಘಟಗಿ ಮತ್ತು ಧಾರವಾಡ ತಾಲ್ಲೂಕಿನ ಕಂದಾಯ, ಕೃಷಿ ಮತ್ತು ಅರಣ್ಯ ಇಲಾಖೆಯ ಅಧಿಕಾರಿಗಳು ಜಂಟಿಯಾಗಿ ಪರಿಶೀಲಿಸಿ ವರದಿ ಸಲ್ಲಿಸಲು ನಿರ್ದೇಶಿಸಲಾಗಿದೆ. ಸರ್ಕಾರದ ನಿಯಮಾನುಸಾರ, ಪರಿಹಾರವನ್ನು ತಕ್ಷಣ ಬಿಡುಗಡೆ ಮಾಡಬೇಕೆಂದು ಸೂಚಿಸಲಾಗಿದೆ.
ರೈತರ ಬೇಡಿಕೆಗಳಾದ ಕಾಡುಪ್ರಾಣಿಗಳಿಂದ ರಕ್ಷಣಾ ಕ್ರಮ, ಹೆಚ್ಚಿನ ಪರಿಹಾರ ಬಿಡುಗಡೆ, ಹಾಗೂ ಕಾಡುಪ್ರಾಣಿಗಳನ್ನು ತಡೆಯಲು ಬಂದೂಕು ಬಳಕೆಯ ಅನುಮತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ಸೂಕ್ತ ಪರಿಹಾರ ನೀಡಬೇಕು. ಕಾಡಿನ ಅಂಚಿನಲ್ಲಿರುವ ರೈತ ಜಮೀನುಗಳ ಪಕ್ಕದ ರಸ್ತೆಗಳಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ನಿರಂತರವಾಗಿ ಪೆಟ್ರೋಲಿಂಗ್ ಮಾಡಬೇಕು. ಹೆಚ್ಚಿನ ಶಬ್ದ ಮತ್ತು ಬೆಳಕಿನ ಬಳಕೆಯಿಂದ ಕಾಡುಪ್ರಾಣಿಗಳು ಭಯಪಡುವುದರಿಂದ ರೈತರ ತೋಟಗಳಿಗೆ ಬರಬಹುದಾದ ಹಾನಿ ಕಡಿಮೆಯಾಗುತ್ತದೆ. ರೈತರೊಂದಿಗೆ ಸಮಾಲೋಚನೆ ಮಾಡಿ, ಅವರ ಜೊತೆಗೆ ಇರಲು ಅರಣ್ಯ ಇಲಾಖೆ ಹೆಚ್ಚಿನ ಗಮನ ಹರಿಸಬೇಕು ಎಂದು ಸಚಿವ ಸಂತೋಷ್ ಲಾಡ್ ಸೂಚಿಸಿದರು.
ಗುಡ್ಡ ಹಾಗೂ ಕಾಡಿನ ಪಕ್ಕದಲ್ಲಿರುವ ರೈತರಿಗೆ ಕಾಡುಪ್ರಾಣಿಗಳಿಂದ ಜೀವ ಭಯವಿದೆ. ಮತ್ತು ಬಿತ್ತಿದ ಬೆಳೆಗಳು ಸರಿಯಾಗಿ ಬರುತ್ತಿಲ್ಲ. ಕೊಯ್ಲಿಗೆ ಬಂದಿರುವ ಬೆಳೆಗಳನ್ನು ಆನೆ, ಮಂಗಗಳು, ಕಾಡುಹಂದಿ, ಕರಡಿ, ಚಿಗರೆಯಂತಹ ಕಾಡು ಪ್ರಾಣಿಗಳು ಹಾಳು ಮಾಡುತ್ತಿವೆ. ಸರ್ಕಾರವು ಅರಣ್ಯ ಇಲಾಖೆಯ ಮೂಲಕ ನೀಡುವ ಬೆಳೆ ಪರಿಹಾರವು ಕಡಿಮೆಯಾಗಿದೆ. ಇದನ್ನು ಹೆಚ್ಚಳ ಮಾಡಬೇಕು. ಮತ್ತು ಕಾಡುಪ್ರಾಣಿಗಳು ರೈತರ ಜಮೀನುಗಳಿಗೆ ಬರದಂತೆ ತಡೆಯಲು ಕಾಡಿನ ಕೊನೆಯಲ್ಲಿ ದೊಡ್ಡದಾದ ಕಂದಕಗಳನ್ನು ತೊಡಬೇಕು. ಹಾಗೂ ತಂತಿ ಬೇಲಿ ಅಳವಡಿಸಬೇಕೆಂದು ರೈತರು ಮಾತನಾಡಿ ಸಚಿವರಿಗೆ ಮನವಿ ಸಲ್ಲಿಸಿದರು.
ಹುಲ್ಲಂಬಿ ಗ್ರಾಮದ ಕಬ್ಬಿನ ಬೆಳೆ ವೀಕ್ಷಣೆ
ನಂತರ ಸಚಿವರು ಹುಲ್ಲಂಬಿ ಗ್ರಾಮ ವ್ಯಾಪ್ತಿಯ ಕಬ್ಬಿನ ತೋಟಗಳಿಗೆ ಭೇಟಿ ನೀಡಿ, ಬೆಳೆಹಾನಿ ಪರಿಶೀಲಿಸಿ, ಮನವಿ ಸ್ವೀಕರಿಸಿದರು. ಬೆಳೆಹಾನಿಗೆ ಸೂಕ್ತ ಪರಿಹಾರದ ಭರವಸೆ ನೀಡಿದರು. ಹುಲ್ಲಂಬಿ ರೈತರಾದ ತವನಪ್ಪ ರಾಯಪ್ಪ ಅಳಗವಾಡಿ ಅವರ 16 ಎಕರೆ 16 ಗುಂಟೆ ಜಮೀನು ಹಾಗೂ ಶಂಕ್ರವ್ವ ಅವರ 5 ಎಕರೆ 26 ಗುಂಟೆ ಜಮೀನುದಲ್ಲಿ ಬೆಳೆದ ಮೆಕ್ಕೆಜೋಳ ಮತ್ತು ಕಬ್ಬು ಬೆಳೆ ಹಾನಿಯಾದ ಬಗ್ಗೆ ಸಚಿವರು ಪರಿಶೀಲಿಸಿದರು.
ಜಿಲ್ಲಾಧಿಕಾರಿ ದಿವ್ಯ ಪ್ರಭು, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್. ಪಾಟೀಲ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಪ್ರೋಬೆಷನರಿ ರಿತೀಕಾ ವರ್ಮಾ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅಜೀಜ್ ದೇಸಾಯಿ, ಕಲಘಟಗಿ ತಹಶೀಲ್ದಾರ ಬಸವರಾಜ ಹಾಗೂ ಇತರರು ಉಪಸ್ಥಿತ ಇದ್ದರು.






