ಬೀದರ್ : ಮಾಜಿ ಸಚಿವ ಹಾಗೂ ಔರಾದ್ ಕ್ಷೇತ್ರದ ಶಾಸಕ ಪ್ರಭು ಚವ್ಹಾಣ ಅವರ ವಾಟ್ಸ್‌ಆ್ಯಪ್ ಸಂಖ್ಯೆಗೆ ಅಪರಿಚಿತ ವ್ಯಕ್ತಿಯೊಬ್ಬರು ಅಶ್ಲೀಲ ಫೋಟೋ ಹಾಗೂ ವಿಡಿಯೋ ಕಳುಹಿಸಿ, ₹30 ಸಾವಿರ ಹಣದ ಬೇಡಿಕೆ ಇಟ್ಟಿರುವ ಘಟನೆ ಬೆಳಕಿಗೆ ಬಂದಿದೆ.
ಸೆಪ್ಟೆಂಬರ್ 7ರಂದು ಸಂಜೆ ಬೇರೆ ಬೇರೆ ಮೂರು ವಾಟ್ಸ್‌ಆ್ಯಪ್ ಸಂಖ್ಯೆಯಿಂದ ಶಾಸಕ ಪ್ರಭು ಚವ್ಹಾಣ ಹಾಗೂ ಪ್ರಿಯಾಂಕಾ ಗಾಂಧಿ ಅವರ ಭಾವಚಿತ್ರಗಳು, ಜೊತೆಗೆ ತಾಂತ್ರಿಕವಾಗಿ ಎಡಿಟ್ ಮಾಡಿದ ಶಾಸಕರ ಚಿತ್ರವಿರುವ ಪಾಡ್‌ಕಾಸ್ಟ್ ವಿಡಿಯೋಗಳನ್ನು ಕಳುಹಿಸಲಾಗಿತ್ತು ಎಂದು ದೂರಿನಲ್ಲಿ ಹೇಳಲಾಗಿದೆ.
ಈ ಸಂಬಂಧ ಹೊಕ್ರಣಾ ಠಾಣೆ ಪೊಲೀಸರು ಭಾರತೀಯ ದಂಡ ಸಂಹಿತೆಯ 308 ಬಿಎನ್‌ಎಸ್ ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆಯ 66(D) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.






