ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪ ಸಂಖ್ಯೆ 1 ಪವಿತ್ರಾ ಗೌಡರನ್ನು ಪೊಲೀಸರು ಮತ್ತೆ ವಶಕ್ಕೆ ಪಡೆದಿದ್ದಾರೆ. ವರದಿಗಳ ಪ್ರಕಾರ, ಮಹಿಳಾ ಪೊಲೀಸರು ಸ್ಥಳಕ್ಕೆ ಆಗಮಿಸಿ, ನೋಟಿಸ್ ನೀಡಿದ ಬಳಿಕ ಬಂಧನ ಪ್ರಕ್ರಿಯೆ ನಡೆಸಿದ್ದಾರೆ.
ಸುಪ್ರೀಂ ಕೋರ್ಟ್ ಜಾಮೀನು ರದ್ದುಗೊಳಿಸಿದ ಬೆನ್ನಿಗೇ ಈ ಬಂಧನ ನಡೆದಿದೆ. ಬಂಧನದ ಮೊದಲು ಪವಿತ್ರಾ ಗೌಡ ಆತ್ಮೀಯರ ಸಮ್ಮುಖದಲ್ಲಿ ಕಣ್ಣೀರಿಟ್ಟಿದ್ದಾಳೆಂದು ತಿಳಿದುಬಂದಿದೆ. ಪೊಲೀಸರು ಆಕೆಗೆ ಆದೇಶದ ಪ್ರತಿಯನ್ನು ನೀಡಿದ ನಂತರ ಮಹಿಳಾ ಪೊಲೀಸರು ಆಕೆಯನ್ನು ವಶಕ್ಕೆ ಪಡೆದಿದ್ದಾರೆ.
ಈ ಪ್ರಕರಣದಲ್ಲಿ ಈಗಾಗಲೇ ಭಾರೀ ಜನರ ಗಮನ ಸೆಳೆದಿರುವ ಕನ್ನಡ ನಟ ದರ್ಶನ್ ತೂಗುದೀಪ, ಪವಿತ್ರಾ ಗೌಡ ಹಾಗೂ ಲಕ್ಷ್ಮಣ್, ನಾಗರಾಜ್, ಪ್ರದೋಷ್, ಅನು ಕುಮಾರ್, ಜಗದೀಶ್ ಅವರ ಜಾಮೀನುಗಳನ್ನು ಸಹ ಸುಪ್ರೀಂ ಕೋರ್ಟ್ ಗುರುವಾರ ರದ್ದುಗೊಳಿಸಿದೆ.






