ರಾಯಚೂರು ಜಿಲ್ಲೆಯಲ್ಲಿ ಅನುಮಾನಾಸ್ಪದ ಸಾವಿನ ಘಟನೆ ವರದಿಯಾಗಿದೆ. ಲಿಂಗಸೂಗೂರು ತಾಲೂಕಿನ ಹಟ್ಟಿ ಪಟ್ಟಣದ ಬಳಿ ರಿಮ್ಸ್ ಆಸ್ಪತ್ರೆಯಲ್ಲಿ ನರ್ಸಿಂಗ್ ಅಧಿಕಾರಿ ಆಗಿ ಕಾರ್ಯನಿರ್ವಹಿಸುತ್ತಿದ್ದ 32 ವರ್ಷದ ಜ್ಯೋತಿ ಅವರು ರೋಡ್ ರೋಲರ್‌ಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಮೃತದೇಹವಾಗಿ ಪತ್ತೆಯಾಗಿದ್ದಾರೆ.
ಹಟ್ಟಿ–ಪಾಮನಕಲ್ಲೂರು ಗ್ರಾಮದ ನಡುವಿನ ರಸ್ತೆ ಕಾಮಗಾರಿ ಸ್ಥಳದಲ್ಲಿ ಡಿಸೆಂಬರ್ 22ರಂದು ಈ ಘಟನೆ ಬೆಳಕಿಗೆ ಬಂದಿದೆ.
ಪ್ರಾಥಮಿಕ ಮಾಹಿತಿಯಂತೆ, ಜ್ಯೋತಿ ಅವರು ಜ್ಞಾನಮೂರ್ತಿ ಎಂಬ ಯುವಕನನ್ನು ಪ್ರೀತಿಸುತ್ತಿದ್ದರೆಂದು ತಿಳಿದುಬಂದಿದೆ. ಇತ್ತೀಚಿನ ದಿನಗಳಲ್ಲಿ ಜ್ಞಾನಮೂರ್ತಿ ಜ್ಯೋತಿಯನ್ನು ದೂರವಿಟ್ಟಿದ್ದರಿಂದ ಮನನೊಂದು ಅವರು ಆತ್ಮಹತ್ಯೆಗೆ ಶರಣಾಗಿರಬಹುದೆಂಬ ಅನುಮಾನ ವ್ಯಕ್ತವಾಗಿದೆ. ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.






