---Advertisement---

ಭಾರತದ ಮೇಲೆ ಸುಂಕ ಹೆಚ್ಚಿಸಿದ್ದಕ್ಕೆ ರಷ್ಯಾ ಮಾತುಕತೆಗೆ ಮುಂದಾಗಿದೆ: ಡೊನಾಲ್ಡ್ ಟ್ರಂಪ್‌ Russia ready for talks after tariff hike on India

On: August 17, 2025 6:16 PM
Follow Us:
Russia ready for talks after tariff hike on India
---Advertisement---

‘ರಷ್ಯಾದಿಂದ ಎರಡನೇ ಅತಿ ಹೆಚ್ಚು ಕಚ್ಚಾತೈಲ ಖರೀದಿಸುತ್ತಿದ್ದ ಭಾರತದ ಮೇಲೆ ಹೆಚ್ಚುವರಿ ಸುಂಕ ವಿಧಿಸಿದ್ದರಿಂದಲೇ, ರಷ್ಯಾವು-ಅಮೆರಿಕದ ಜೊತೆಗೆ ಮಾತುಕತೆಗೆ ಮುಂದಾಯಿತು’ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ತಿಳಿಸಿದ್ದಾರೆ.

ರಷ್ಯಾ-ಉಕ್ರೇನ್‌ ನಡುವಿನ ಯುದ್ಧ ಕೊನೆಗಾಣಿಸಿ, ಕದನ ವಿರಾಮ ಘೋಷಿಸಲು ಅಂತಿಮ ಒಪ್ಪಂದಕ್ಕೆ ಬರುವ ನಿಟ್ಟಿನಲ್ಲಿ ಅಲಾಸ್ಕದಲ್ಲಿ ಶುಕ್ರವಾರ ರಷ್ಯಾ ಅಧ್ಯಕ್ಷ ವ್ಲಾದಿಮಿರ್‌ ಪುಟಿನ್ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ನಡುವಿನ ಉನ್ನತ ಮಟ್ಟದ ಸಭೆಗೂ ಮುನ್ನವೇ ಈ ಹೇಳಿಕೆ ನೀಡಿದ್ದಾರೆ.

‘ನೀವು ರಷ್ಯಾದಿಂದ ಕಚ್ಚಾತೈಲ ಖರೀದಿಸುತ್ತಿದ್ದು, ನಿಮಗೆ ಹೆಚ್ಚುವರಿ ತೆರಿಗೆ ವಿಧಿಸಲಾಗುವುದು ಎಂದು ಭಾರತಕ್ಕೆ ಮೊದಲೇ ಎಚ್ಚರಿಕೆ ನೀಡಲಾಗಿತ್ತು. ಅದೇ ರಷ್ಯಾ ಮಾತುಕತೆ ನಡೆಸಲು ಕಾರಣವಾಗಿದೆ’ ಎಂದು ಸಂದರ್ಶನದಲ್ಲಿ ಟ್ರಂಪ್ ತಿಳಿಸಿದ್ದಾರೆ.

ಈ ಬೆಳವಣಿಗೆ ಬೆನ್ನಲ್ಲೇ, ‘ರಷ್ಯಾ ಜೊತೆಗಿನ ಮಾತುಕತೆಯ ಬಗ್ಗೆ ಕಾತರನಾಗಿದ್ದೇನೆ. ಎರಡನೇ ಅತಿ ದೊಡ್ಡ ಗ್ರಾಹಕರನ್ನು ಕಳೆದುಕೊಂಡ ನಂತರ ಬಹುಶಃ ಮೊದಲ ಅತಿ ದೊಡ್ಡ ಗ್ರಾಹಕರನ್ನೂ ಕಳೆದುಕೊಳ್ಳುವ ಸಾಧ್ಯತೆ ಇರುತ್ತದೆ. ಹೀಗಾಗಿಯೇ ರಷ್ಯಾ ಭೇಟಿಗೆ ಮುಂದಾಗಿದೆ’ ಎಂದು ಟ್ರಂಪ್ ಹೇಳಿದ್ದಾರೆ.

‘ಟ್ರಂಪ್‌ ಸುಂಕ ಬೆದರಿಕೆ ಹೊರತಾಗಿಯೂ ರಷ್ಯಾದಿಂದ ತೈಲ ಖರೀದಿ ನಿಲ್ಲಿಸಿಲ್ಲ ಎಂದು ಭಾರತವು ಗುರುವಾರ ಪುನರುಚ್ಚರಿಸಿದೆ. ಕೇವಲ ಆರ್ಥಿಕ ಪರಿಗಣನೆಯ ಮೇಲೆ ಖರೀದಿ ಪ್ರಕ್ರಿಯೆ ಮುಂದುವರಿಯಲಿದೆ’ ಎಂದು ಸ್ಪಷ್ಟಪಡಿಸಿದೆ.

‘ರಷ್ಯಾದಿಂದ ತೈಲ ಆಮದು ನಿಲ್ಲಿಸಿಲ್ಲ. ಭಾರತವೂ ಮುಂದೆಯೂ ಖರೀದಿಸಲಿದ್ದು, ಈ ನಿರ್ಧಾರದಲ್ಲಿ ಬದಲಾವಣೆಯಿಲ್ಲ’ ಎಂದು ಇಂಡಿಯನ್‌ ಆಯಿಲ್‌ ಕಾರ್ಪೊರೇಷನ್‌ನ ಮುಖ್ಯಸ್ಥ ಎ.ಎಸ್‌. ಸಾಹ್ನಿ ತಿಳಿಸಿದ್ದಾರೆ.

‘ಭಾರತ-ಪಾಕ್‌ ನಡುವೆ ಅಣ್ವಸ್ತ್ರ ಯುದ್ಧ ನಡೆಯುವ ಸಾಧ್ಯತೆ ಇದ್ದು ಅದನ್ನು ನಾನೇ ತಪ್ಪಿಸಿದೆ’ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪುನರುಚ್ಚರಿಸಿದ್ದಾರೆ. ಒವಲ್‌ ಕಚೇರಿಯಲ್ಲಿ ಮಾತನಾಡಿದ ಅವರು ನೀವು ಭಾರತ ಹಾಗೂ ಪಾಕಿಸ್ತಾನವನ್ನು ಒಮ್ಮೆ ಗಮನಿಸಿ. ವಿಮಾನಗಳನ್ನು ಗಾಳಿಯಲ್ಲಿ ಹೊಡೆದುರುಳಿಸಲಾಯಿತು. ಆರರಿಂದ ಏಳು ವಿಮಾನಗಳು ಕೆಳಕ್ಕುರುಳಿದವು. ಅವರು ಅಣ್ವಸ್ತ್ರ ಯುದ್ಧಕ್ಕೂ ಮುಂದಾಗಿದ್ದರು ನಾವು ಸಮಸ್ಯೆಯನ್ನು ಬಗೆಹರಿಸಿದೆವು ಎಂದು ಹೇಳಿದ್ದಾರೆ.

ಭಾರತದ ಮೇಲೆ ಹೆಚ್ಚಿನ ತೆರಿಗೆ ವಿಧಿಸುವುದರಿಂದ ರಷ್ಯಾ ಅಧ್ಯಕ್ಷರನ್ನು ತಡೆಯಲಾಗದು ಎಂದು ಅಮೆರಿಕದ ವಿದೇಶಾಂಗ ವ್ಯವಹಾರಗಳ ಸಮಿತಿಯ ಸದಸ್ಯರು ಅಭಿಪ್ರಾಯಪಟ್ಟಿದ್ದಾರೆ. ಆದಾಗ್ಯೂ, ತಮ್ಮ ನಿಲುವನ್ನು ಟ್ರಂಪ್ ಸಮರ್ಥಿಸಿಕೊಂಡಿದ್ದಾರೆ. ಹೀಗಾಗಿ ಇದೀಗ ಟ್ರಂಪ್ ಹಾಗೂ ಪುಟಿನ್ ಮಾತುಕತೆಯಲ್ಲಿ ಯಾವುದೇ ಒಪ್ಪಂದಗಳು ಏರ್ಪಡದೇ ಇರುವುದರಿಂದ ಭಾರತದ ಮೇಲೆ ಅಮೆರಿಕ ಮತ್ತಷ್ಟು ಸುಂಕದ ಬರೆ ಎಳೆಯುತ್ತದೆಯೇ ಎಂಬ ಪ್ರಶ್ನೆ ಹುಟ್ಟುಹಾಕಿದೆ.

krutika naik

Krutika Naik is an editor and writer at Karnataka Stories, where she covers culture, local news, and inspiring voices from across the state. With a passion for storytelling and a keen eye for detail, Krutika brings real stories to life—one article at a time.

Join WhatsApp

Join Now

RELATED POSTS

Leave a Comment