ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ಕೊವೇರಹಟ್ಟಿ ಮೂಲದ 19 ವರ್ಷದ ವಿದ್ಯಾರ್ಥಿನಿ ವರ್ಷಿತಾ ಎಂಬ ವಿದ್ಯಾರ್ಥಿನಿಯನ್ನು ಕೊಂದು ಬೆಂಕಿ ಹಚ್ಚಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಈ ಭೀಕರ ಕೃತ್ಯ ಬೆಳಕಿಗೆ ಬಂದಿದ್ದು, ಸಮಾಜದಲ್ಲಿ ಭಯ ಹುಟ್ಟಿಸಿದೆ. ಪದವಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಿ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ. ವರ್ಷಿತಾ ಮೃತದೇಹವು ನಿನ್ನೆ ರಾಷ್ಟ್ರೀಯ ಹೆದ್ದಾರಿ ಬಳಿ ಪತ್ತೆಯಾಗಿದೆ.
ವರ್ಷಿತಾ ಚಿತ್ರದುರ್ಗದಲ್ಲಿ ವಾಸ್ತವ್ಯವಿದ್ದು, ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದಳು.
ಅರೆಬರೆ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿರುವ ಮೃತದೇಹವನ್ನು ನೋಡಿದ ನಂತರ, ಕೊಲೆ ಮಾಡಿ ಪೆಟ್ರೋಲ್ ಎರಚಿ ಸುಟ್ಟಿರುವ ಶಂಕೆ ವ್ಯಕ್ತವಾಗಿದೆ. ಇದರಿಂದ ಸ್ಥಳೀಯರಲ್ಲಿ ಭಾರೀ ಆತಂಕ ಉಂಟಾಗಿದೆ.
ಮೃತದೇಹವನ್ನು ಪೋಸ್ಟ್‌ಮಾರ್ಟಂಗಾಗಿ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಭೇಟಿ ನೀಡಿ ತನಿಖೆ ನಡೆಸಿದ್ದಾರೆ.
ಈ ಘಟನೆ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ದುಷ್ಕೃತ್ಯ ಎಸಗಿದವರ ಪತ್ತೆಗೆ ಶೋಧ ಕಾರ್ಯ ಆರಂಭಿಸಿದ್ದಾರೆ.
ಚಿತ್ರದುರ್ಗ ನಗರದ ಬಾಲಕಿಯರ ವಸತಿ ಶಾಲೆಯ ವಿದ್ಯಾರ್ಥಿನಿಯಾಗಿದ್ದ ವರ್ಷಿತಾ ಕೊಲೆಯಾಗಿದ್ದು, ನಿನ್ನೆ ವರ್ಷಿತಾ ಶವ ಚಿತ್ರದುರ್ಗದ ರಾಷ್ಟ್ರೀಯ ಹೆದ್ದಾರಿಯಲ್ಲಿ
ಶವ ಪತ್ತೆಯಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.







1 thought on “ಚಿತ್ರದುರ್ಗ: ಮತ್ತೊಂದು ಭೀಕರ ಕೃತ್ಯ ಬೆಳಕಿಗೆ!!ವಿದ್ಯಾರ್ಥಿನಿಗೇ ಬೆಂಕಿಯಿಟ್ಟು ಹತ್ಯೆ, ಅತ್ಯಾಚಾರ ಮತ್ತು ಕೊಲೆ ಶಂಕೆ!? Student set on fire and killed, suspected rape and murder”