ಬೆಂಗಳೂರಿನಿಂದ ಗುರುರಾಯರ ದರ್ಶನಕ್ಕೆಂದು ಮಂತ್ರಾಲಯಕ್ಕೆ ತೆರಳುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಇಬ್ಬರು ಮಕ್ಕಳು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ. ಈ ದಾರುಣ ಘಟನೆ ಕರ್ನೂಲ್ ಜಿಲ್ಲೆಯ ಎಮ್ಮಿಗನೂರು ಗ್ರಾಮದ ಕೋಟೆಕಲ್ ಬಳಿ ಜರುಗಿದೆ.
ಮೃತರೆಲ್ಲಾ ಬೆಂಗಳೂರು ಮೂಲದವರು ಎಂಬ ಮಾಹಿತಿ ಲಭ್ಯವಾಗಿದೆ. ರಾಷ್ಟ್ರೀಯ ಹೆದ್ದಾರಿ 167ರಲ್ಲಿ ಕರ್ನೂಲ್ ಜಿಲ್ಲೆಯ ಎಮ್ಮಿಗನೂರು ಗ್ರಾಮದ ಕೋಟೆಕಲ್ ಬಳಿ ಭೀಕರ ಅಪಘಾತ ಸಂಭವಿಸಿದೆ. ವಿಶಾಖಪಟ್ಟಣಂನಿಂದ ಆದೋನಿ ಕಡೆಗೆ ಹೊರಟಿದ್ದ ಫಾರ್ಚುನರ್ ಕಾರು ಹಾಗೂ ಬೆಂಗಳೂರಿನಿಂದ ಮಂತ್ರಾಲಯ ಕಡೆಗೆ ಹೊರಟಿದ್ದ ಸ್ವಿಫ್ಟ್ ಕಾರು ಡಿಕ್ಕಿ ಹೊಡೆದಿವೆ.
ಭೀಕರ ಅಪಘಾತದಿಂದ ಫಾರ್ಚುನರ್ ಮತ್ತು ಸ್ವಿಫ್ಟ್ ಕಾರ್ ಸಂಪೂರ್ಣ ಜಖಂಗೊಂಡಿದೆ. ಡಿಕ್ಕಿ ಹೊಡೆದ ರಭಸಕ್ಕೆ ಎರಡು ಕಾರುಗಳ ಮುಂಭಾಗ ನುಜ್ಜುಗುಜ್ಜಾಗಿವೆ. ಮೃತಪಟ್ಟವರೆಲ್ಲಾ ಬೆಂಗಳೂರು ಮೂಲದವರು ಎಂಬ ಮಾಹಿತಿ ಲಭ್ಯವಾಗಿದೆ.
ಮೃತಪಟ್ಟ ಐವರು ಕೂಡನ ಒಂದೇ ಕುಟುಂಬಕ್ಕೆ ಸೇರಿದವರು ಎನ್ನಲಾಗುತ್ತಿದೆ. ಎಮ್ಮಿಗನೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.






