---Advertisement---

ಎಕ್ಸ್ ಪ್ರೆಸ್ ವೇನಲ್ಲಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ವಾಹನಗಳಿಗೆ ಹೊತ್ತಿಕೊಂಡ ಬೆಂಕಿ

On: December 29, 2025 11:11 AM
Follow Us:
---Advertisement---

ನ್ಯವದೆಹಲಿ: ಯಮುನಾ ಎಕ್ಸ್‌ಪ್ರೆಸ್ ವೇನಲ್ಲಿ ಎರಡು ಕಾರುಗಳ ನಡುವೆ ಭೀಕರ ಡಿಕ್ಕಿ ಸಂಭವಿಸಿ, ಅಪಘಾತದ ರಭಸಕ್ಕೆ ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿರುವ ಘಟನೆ ನಡೆದಿದೆ. ಜೆವರ್‌ನಿಂದ ನೊಯ್ಡಾ ಕಡೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಎರಡು ಕಾರುಗಳು ಪರಸ್ಪರ ಡಿಕ್ಕಿಯಾಗುತ್ತಿದ್ದಂತೆಯೇ, ಕ್ಷಣಾರ್ಧದಲ್ಲಿ ಎರಡೂ ವಾಹನಗಳು ಹೊತ್ತಿ ಉರಿದಿವೆ. ರಬುಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ನಡೆದಿದೆ ಎಂದು ತಿಳಿದುಬಂದಿದೆ. ಅಪಘಾತದ ದೃಶ್ಯ ಕಂಡು ರಸ್ತೆ ಮೇಲೆ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಅಪಘಾತ ಸಂಭವಿಸಿದ ತಕ್ಷಣವೇ ಕಾರಿನಲ್ಲಿದ್ದವರು ಸಮಯಕ್ಕೆ ಸರಿಯಾಗಿ ವಾಹನದಿಂದ ಹೊರಬಂದು ಜೀವ ಉಳಿಸಿಕೊಂಡಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮಾಹಿತಿ ಪಡೆದ ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ದೌಡಾಯಿಸಿ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಿದ್ದಾರೆ.
ಘಟನೆಯ ಬಳಿಕ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದ್ದು, ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಿ ಸಂಚಾರವನ್ನು ಪುನಃ ಸುಗಮಗೊಳಿಸಿದರು. ಅಪಘಾತದ ಕಾರಣಗಳ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Join WhatsApp

Join Now

RELATED POSTS

Leave a Comment