---Advertisement---

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಅಶ್ಲೀಲ ಕಾಮೆಂಟ್ ಪ್ರಕರಣ: ಇಬ್ಬರ ಬಂಧನ

On: January 2, 2026 7:13 AM
Follow Us:
---Advertisement---

ಬೆಂಗಳೂರು, ಜ.02: ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಾಮೆಂಟ್‌ಗಳನ್ನು ಮಾಡಿ ನಿಂದಿಸಿದ್ದ ಪ್ರಕರಣದಲ್ಲಿ ಬೆಂಗಳೂರು ಮೂಲದ ವ್ಯಕ್ತಿ ಸೇರಿ ಇಬ್ಬರು ಆರೋಪಿಗಳನ್ನು ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಚಂದ್ರು ಹಾಗೂ ನಿಖಿಲ್ ಎಂದು ಗುರುತಿಸಲಾಗಿದ್ದು, ಇವರಲ್ಲಿ ಓರ್ವ ಇಂಜಿನಿಯರ್ ಆಗಿದ್ದರೆ, ಮತ್ತೊಬ್ಬ ಆಟೋ ಚಾಲಕನಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನು ಓದಿ: ನನಗೆ ವಿಷ ಕೊಡಿ ಪರಪ್ಪನ ಅಗ್ರಹಾರ ಜೈಲಿನ ಕಠಿಣ ಜೀವನದಿಂದ ದರ್ಶನ್ ಭಾವನಾತ್ಮಕ ಮನವಿ

2025ರ ಡಿಸೆಂಬರ್‌ನಲ್ಲಿ ವಿಜಯಲಕ್ಷ್ಮಿ ಅವರು ದಾವಣಗೆರೆಯಲ್ಲಿ ನೀಡಿದ್ದ ಹೇಳಿಕೆಯ ಬಳಿಕ, ಸಾಮಾಜಿಕ ಜಾಲತಾಣಗಳಲ್ಲಿ ಅವರ ವಿರುದ್ಧ ಅಶ್ಲೀಲ ಹಾಗೂ ಅವಹೇಳನಕಾರಿ ಕಾಮೆಂಟ್‌ಗಳು ಹರಿದಾಡಿದ್ದವು. ಇದರಿಂದ ಆಕ್ರೋಶಗೊಂಡ ವಿಜಯಲಕ್ಷ್ಮಿ ಅವರು 15 ಇನ್‌ಸ್ಟಾಗ್ರಾಂ ಐಡಿಗಳು ಮತ್ತು 150ಕ್ಕೂ ಹೆಚ್ಚು ಅಶ್ಲೀಲ ಹಾಗೂ ಕೆಟ್ಟ ಕಾಮೆಂಟ್‌ಗಳ ವಿರುದ್ಧ ಫೋಟೋ ಸಮೇತ ಸೈಬರ್ ಪೊಲೀಸರಿಗೆ ದೂರು ಸಲ್ಲಿಸಿದ್ದರು.

ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದ ಸೈಬರ್ ಪೊಲೀಸರು, ಈವರೆಗೆ 15 ಇನ್‌ಸ್ಟಾಗ್ರಾಂ ಐಡಿಗಳ ಪೈಕಿ ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಉಳಿದ ಆರೋಪಿಗಳ ಪತ್ತೆಗಾಗಿ ತನಿಖೆ ಮುಂದುವರಿದಿದೆ.

ಇತ್ತೀಚೆಗೆ ವಿಜಯಲಕ್ಷ್ಮಿ ಅವರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಅವರನ್ನು ಭೇಟಿ ಮಾಡಿ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದರು. ಬಳಿಕ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಅವರು, “ನಮ್ಮ ದೇಶದಲ್ಲಿ ಕಾನೂನು ಮತ್ತು ವ್ಯವಸ್ಥೆ ಎಲ್ಲರಿಗೂ ಒಂದೇ ಎಂಬ ನಂಬಿಕೆ ನನಗಿತ್ತು. ಆದರೆ ಈ ಅನುಭವ ಆ ನಂಬಿಕೆಯನ್ನು ಪ್ರಶ್ನಿಸುವಂತೆ ಮಾಡಿದೆ” ಎಂದು ಬೇಸರ ವ್ಯಕ್ತಪಡಿಸಿದ್ದರು.

ತಮ್ಮ ದೂರು ನಿರ್ಲಕ್ಷ್ಯಕ್ಕೊಳಗಾಗಿದೆ ಎಂದು ಆರೋಪಿಸಿದ್ದ ವಿಜಯಲಕ್ಷ್ಮಿ, ಮತ್ತೊಬ್ಬ ಮಹಿಳೆ ನೀಡಿದ ದೂರಿನ ಮೇಲೆ ಒಂದೇ ದಿನದಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ಪರೋಕ್ಷವಾಗಿ ಉಲ್ಲೇಖಿಸಿದ್ದರು. ಈ ಅಸಮಾಧಾನದ ಬೆನ್ನಲ್ಲೇ ಪ್ರಕರಣವನ್ನು ಪರಿಶೀಲಿಸುವುದಾಗಿ ಪೊಲೀಸ್ ಆಯುಕ್ತರು ಭರವಸೆ ನೀಡಿದ್ದರು.

Join WhatsApp

Join Now

RELATED POSTS

1 thought on “ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಅಶ್ಲೀಲ ಕಾಮೆಂಟ್ ಪ್ರಕರಣ: ಇಬ್ಬರ ಬಂಧನ”

Comments are closed.