---Advertisement---

ಭಾರತದ ಅತ್ಯಂತ ಶ್ರೀಮಂತ ಸಿಎಂ ಯಾರು?? ದೇಶಾದ್ಯಂತ ಸಿಎಂಗಳ ಆಸ್ತಿ ವರದಿ ಬಿಡುಗಡೆ! Who is the richest CM in India

On: August 25, 2025 8:13 AM
Follow Us:
Who is the richest CM in India
---Advertisement---

ಭಾರತದಲ್ಲಿನ ಮುಖ್ಯಮಂತ್ರಿಗಳ ಆಸ್ತಿಗಳ ಕುರಿತು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ADR) ಇತ್ತೀಚೆಗೆ ಬಿಡುಗಡೆ ಮಾಡಿದ ವರದಿಯ ಪ್ರಕಾರ, ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು 931 ಕೋಟಿ ರೂ. ಮೌಲ್ಯದ ಆಸ್ತಿಯೊಂದಿಗೆ ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಿದ್ದಾರೆ.

ದೇಶದ ಅತ್ಯಂತ ಶ್ರೀಮಂತ ಸಿಎಂ ಗಳ ಪಟ್ಟಿ ಆಗಸ್ಟ್ 22 ರಂದು ಬಿಡುಗಡೆಯಾಗಿದ್ದು. ವ್ಯಾಪಕ ವ್ಯತ್ಯಾಸಗಳೊಂದಿಗೆ ಮಣಿಪುರವನ್ನು ಹೊರತುಪಡಿಸಿ ಭಾರತದ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಸೇರಿದಂತೆ 30 ಮುಖ್ಯಮಂತ್ರಿಗಳ ಸರಾಸರಿ ಆಸ್ತಿ 54.42 ಕೋಟಿ ರೂಪಾಯಿಗಳಷ್ಟಿದೆ.

ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ದೇಶದಲ್ಲೇ ಅತ್ಯಂತ ಶ್ರೀಮಂತ ಮುಖ್ಯಮಂತ್ರಿಯಾಗಿದ್ದರೆ, ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಅವರು ಅತ್ಯಂತ ಬಡ ಸಿಎಂ. ಇನ್ನು ದೇಶದ ಶ್ರೀಮಂತ ಮುಖ್ಯಮಂತ್ರಿಗಳ ಪಟ್ಟಿಯಲ್ಲಿ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೂರನೇ ಸ್ಥಾನದಲ್ಲಿದ್ದಾರೆ.

30 ಸಿಎಂಗಳ ಒಟ್ಟು ಆಸ್ತಿ 1,632 ಕೋಟಿ ರೂಪಾಯಿಗಳಷ್ಟಿದ್ದು, 30 ಸಿಎಂಗಳಲ್ಲಿ ಇಬ್ಬರು ಕೋಟ್ಯಾಧಿಪತಿಗಳು, ಆಂಧ್ರಪ್ರದೇಶದ ನಾರಾ ಚಂದ್ರಬಾಬು ನಾಯ್ಡು, ಒಟ್ಟು ಆಸ್ತಿ 931 ಕೋಟಿ ರೂಪಾಯಿ ಮೌಲ್ಯದ ಆಸ್ತಿಗಳನ್ನು ಹೊಂದಿದ್ದರೆ, ಅರುಣಾಚಲ ಪ್ರದೇಶದ ಪೆಮಾ ಖಂಡು, 332 ಕೋಟಿ ರೂ.ಗಳಿಗೂ ಹೆಚ್ಚು ಆಸ್ತಿ ಹೊಂದಿದ್ದಾರೆ.

ಮೂರನೇ ಸ್ಥಾನದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಒಟ್ಟು ಆಸ್ತಿ ಮೌಲ್ಯ 51 ಕೋಟಿ ರೂಪಾಯಿಗಳನ್ನು ಹೊಂದಿದ್ದಾರೆ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ 15.38 ಲಕ್ಷ ರೂ. ಗೂ ಹೆಚ್ಚು, ಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ 55.24 ಲಕ್ಷ ರೂ. ಗೂ ಹೆಚ್ಚು ಮತ್ತು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ 1.18 ಕೋಟಿ ರೂಪಾಯಿಗಳನ್ನು ಹೊಂದಿದ್ದು ಅತಿ ಕಡಿಮೆ ಆಸ್ತಿ ಹೊಂದಿರುವ ಮುಖ್ಯಮಂತ್ರಿಗಳಾಗಿದ್ದಾರೆ.

ರಾಜಸ್ಥಾನದ ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾ (1.46 ಕೋಟಿ ರೂ.), ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ (1.54 ಕೋಟಿ ರೂ.), ಬಿಹಾರದ ನಿತೀಶ್ ಕುಮಾರ್ (1.64 ಕೋಟಿ ರೂ.), ಪಂಜಾಬ್‌ನ ಭಗವಂತ್ ಮಾನ್ (1.97 ಕೋಟಿ ರೂ.), ಒಡಿಶಾದ ಮೋಹನ್ ಚರಣ್ ಮಾಝಿ (1.97 ಕೋಟಿ ರೂ.) ಮತ್ತು ಛತ್ತೀಸ್‌ಗಢದ ವಿಷ್ಣು ದೇವ್ ಸಾಯಿ (3.80 ಕೋಟಿ ರೂ.) ಕಡಿಮೆ ಆಸ್ತಿ ಹೊಂದಿರುವ ಇತರ ಸಿಎಂ ಗಳಾಗಿದ್ದಾರೆ.

ನಂ.1 ಸ್ಥಾನದಲ್ಲಿ ಚಂದ್ರಬಾಬು ನಾಯ್ಡು richest CM in India

ತೆಲುಗು ದೇಶಂ ಪಕ್ಷದ ಮುಖ್ಯಸ್ಥರೂ ಆಗಿರುವ ಚಂದ್ರಬಾಬು ನಾಯ್ಡು ಅವರು ಒಟ್ಟಾರೆ 931 ಕೋಟಿ ರು. ಆಸ್ತಿ ಹೊಂದಿದ್ದು, ಇದರಲ್ಲಿ 810 ಕೋಟಿ ರು. ಚರ ಮತ್ತು 121 ಕೋಟಿ ರು. ಸ್ಥಿರ ಆಸ್ತಿ ಆಗಿದೆ.

ಬಡ ಸಿಎಂ ಮಮತಾ (Poor CM):

ತೃಣಮೂಲ ಕಾಂಗ್ರೆಸ್‌ ಅಧ್ಯಕ್ಷೆಯೂ ಆಗಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ದೇಶದ ಅತ್ಯಂತ ಬಡ ಸಿಎಂ. ಅವರ ಅವರ ಒಟ್ಟು ಘೋಷಿತ ಆಸ್ತಿ 15.38 ಲಕ್ಷ. ವಿಶೇಷವೆಂದರೆ ಅವರು ಯಾವುದೇ ಸ್ಥಿರ ಆಸ್ತಿ ಹೊಂದಿಲ್ಲ.

ಹೆಚ್ಚಿನ ಸಾಲ ಹೊಂದಿದ ಸಿಎಂ (CM with highest debt):

11 ಮುಖ್ಯಮಂತ್ರಿಗಳು 1 ಕೋಟಿಗೂ ಹೆಚ್ಚು ಸಾಲ ಘೋಷಿಸಿದ್ದಾರೆ. ಅರುಣಾಚಲ ಪ್ರದೇಶ ಮುಖ್ಯಮಂತ್ರಿ ಪೆಮಾ ಖಂಡು ಹೆಸರಿನಲ್ಲಿ 180 ಕೋಟಿ ರು. ಸಾಲ ಇದೆ. ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 23 ಕೋಟಿ ಸಾಲ ಮಾಡಿದ್ದರೆ, ಆಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು 10 ಕೋಟಿಗೂ ಹೆಚ್ಚು ಸಾಲ ಘೋಷಿಸಿದ್ದಾರೆ.

krutika naik

Krutika Naik is an editor and writer at Karnataka Stories, where she covers culture, local news, and inspiring voices from across the state. With a passion for storytelling and a keen eye for detail, Krutika brings real stories to life—one article at a time.

Join WhatsApp

Join Now

RELATED POSTS

Leave a Comment