---Advertisement---

ದಸರಾ ಉದ್ಘಾಟಕರಾಗಿ ಬಾನು ಮುಷ್ತಾಕ್ ಅವರ ಆಯ್ಕೆ ನಿರ್ಧಾರವನ್ನು ಸ್ವಾಗತ ಮಾಡುತ್ತೇನೆ ಯದುವೀರ್! ಬಿಜೆಪಿಗೆ ಮುಖಭಂಗ

On: August 28, 2025 9:54 AM
Follow Us:
ದಸರಾ ಉದ್ಘಾಟಕರಾಗಿ ಬಾನು ಮುಷ್ತಾಕ್ ಅವರ ಆಯ್ಕೆ ನಿರ್ಧಾರವನ್ನು ಸ್ವಾಗತ ಮಾಡುತ್ತೇನೆ
---Advertisement---

ಪ್ರತಿಷ್ಠಿತ ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ಅವರನ್ನು ರಾಜ್ಯ ಸರ್ಕಾರ ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ ಆಯ್ಕೆ ಮಾಡಿದೆ. ಈ ನಡುವೆ ಬಿಜೆಪಿಯ ಮತ್ತು ಹಿಂದೂಪರ ಸಂಘಟನೆಯವರು ಈ ಬಗ್ಗೆ ಆಕ್ಷೇಪ ಹುಟ್ಟಿಕೊಂಡಿತು. ಇದು ಆಡಳಿತರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ ನಡುವೆ ತೀವ್ರ ವಾಕ್ಸಮರಕ್ಕೆ ಕಾರಣವಾಗಿದೆ.

ಈ ಮಧ್ಯೆ ಮೈಸೂರು ಬಿಜೆಪಿ ಸಂಸದ ಹಾಗೂ ರಾಜವಂಶಸ್ಥರೂ ಆಗಿರುವ ಯದುವೀರ್ ಒಡೆಯರ್ ಅವರು, ದಸರಾ ಉದ್ಘಾಟಕರಾಗಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವ ಸರ್ಕಾರದ ನಿರ್ಧಾರವನ್ನು ಸ್ವಾಗತ ಮಾಡುತ್ತೇನೆ ಎಂದು ಹೇಳಿದ್ದಾರೆ.

“ಶ್ರೀಮತಿ ಭಾನು ಮುಷ್ತಾಕ್ ಅವರು ಕನ್ನಡ ಸಾಹಿತ್ಯ ಲೋಕದ ವಿಶಿಷ್ಟ ಬರಹಗಾರ್ತಿ ಮತ್ತು ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿಯನ್ನು ಗೆದ್ದ ಮೊದಲ ಕನ್ನಡ ಲೇಖಕಿಯಾಗಿ, ಕನ್ನಡ ಸಾಹಿತ್ಯ ಲೋಕಕ್ಕೆ ಅಪಾರ ಹೆಮ್ಮೆಯನ್ನು ತಂದಿದ್ದಾರೆ ನಿಜ ಆದರೆ ಈ ಹಿಂದೆ ಕನ್ನಡ ತಾಯಿ ಭುವನೇಶ್ವರಿಯ ಬಗ್ಗೆ ಅವರು ಕೆಲವು ಹೇಳಿಕೆಗಳನ್ನು ನೀಡಿರುವುದು ನಮ್ಮ ಗಮನಕ್ಕೆ ಬಂದಿದೆ. ದಸರಾ ಕೇವಲ ಸಾಂಸ್ಕೃತಿಕ ಕಾರ್ಯಕ್ರಮವಲ್ಲ, ಬದಲಾಗಿ ಶಾಸ್ತ್ರ ಮತ್ತು ಪುರಾಣಗಳಲ್ಲಿ ಉಲ್ಲೇಖಗೊಂಡಿರುವ ಮತ್ತು ವಿಜಯನಗರ ಸಾಮ್ರಾಜ್ಯ ಮತ್ತು ಮೈಸೂರು ಸಂಸ್ಥಾನದ ಕಾಲದಿಂದಲೂ ವೈಭವದಿಂದ ಆಚರಿಸಲ್ಪಡುವ ಹಿಂದೂ ಧಾರ್ಮಿಕ ಉತ್ಸವವಾಗಿದೆ.”

“ಬಾನು ಮುಷ್ತಾಕ್ ಅವರು ಖ್ಯಾತ ಬರಹಗಾರ್ತಿ, ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಹಿತ್ಯ ಪ್ರಶಸ್ತಿ ಸ್ವೀಕರಿಸಿದ್ದಾರೆ. ಜೊತೆಗೆ ಸಾಮಾಜಿಕ ಹೋರಾಟದಲ್ಲಿ ಗುರುತಿಸಿಕೊಂಡಿದ್ದಾರೆ. ಮುಸ್ಲಿಂ ಮಹಿಳೆಯರಿಗೆ ಸಮಾನವಾದ ಹಕ್ಕು ಕೋಡಬೇಕು. ಮಸೀದಿಗಳಿಗೆ ಅವಕಾಶ ಕೋಡಬೇಕು ಎಂದು ಬಾನು ಮುಷ್ತಾಕ್ ಅವರು ಈ ಹಿಂದೆ ಸಾಮಾಜಿಕ ಬಹಿಷ್ಕಾರವನ್ನು ಕೂಡ ಎದುರಿಸಿದ್ದರು. ಕನ್ನಡ ಭಾಷೆ ಮತ್ತು ಸಾಹಿತ್ಯಕ್ಕೆ ಬಾನು ಮುಷ್ತಾಕ್ ನೀಡಿದ ಕೊಡುಗೆ ಅಪಾರವಾಗಿದ್ದು, ನಾವು ಅದನ್ನು ಗೌರವಿಸುತ್ತವೆ. ಹಾಗಾಗಿ ರಾಜ್ಯ ಸರ್ಕಾರದ ಆಯ್ಕೆ ನಿರ್ಧಾರವನ್ನು ಸ್ವಾಗತ ಮಾಡುತ್ತೇನೆ. ಆದರೆ ಈ ವರ್ಷದ ದಸರಾ ಆಚರಣೆಯ ಮುಖ್ಯ ಅತಿಥಿಯಾಗಿ ಉದ್ಘಾಟಿಸುವ ಮೊದಲು ಅವರು ತಾಯಿ ಭುವನೇಶ್ವರಿ ಮತ್ತು ತಾಯಿ ಚಾಮುಂಡೇಶ್ವರಿಯ ಬಗ್ಗೆ ಅವರ ಗೌರವವನ್ನು ಶ್ರೀಮತಿ ಭಾನು ಮುಷ್ತಾಕ್ ಸ್ಪಷ್ಟಪಡಿಸುವುದು ಈ ಸಮಯದಲ್ಲಿ ಅತ್ಯಂತ ಅಗತ್ಯ” ಎಂದು ನಂತರ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಬಿಜೆಪಿ ನಾಯಕರು ಬಾನು ಮುಷ್ತಾಕ್ ಅವರ ಆಯ್ಕೆಯನ್ನು ತೀವ್ರವಾಗಿ ವಿರೋಧಿಸಿಕೊಂಡು ಬರುತ್ತಿದ್ದಾರೆ. ಈ ಎಲ್ಲಾ ಬೆಳವಣಿಗೆ ನಡುವೆ ಯದುವೀರ್ ಒಡೆಯರ್ ಅವರ ಈ ಹೇಳಿಕೆ ಬಿಜೆಪಿಗೆ ತೀವ್ರ ಮುಖಭಂಗವನ್ನುಂಟು ಮಾಡಿದೆ.

ಬಿಜೆಪಿಯ ನಾಯಕರಾದ ಮಾಜಿ ಸಂಸದ ಪ್ರತಾಪ್ ಸಿಂಹ ಮತ್ತು ವಿಜಯಪುರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಹಲವು ಬಿಜೆಪಿ ನಾಯಕರು, ಬಾನು ಮುಷ್ತಾಕ್ ದಸರಾ ಉದ್ಘಾಟಿಸುವುದಕ್ಕೆ ಅಪಸ್ವರವನ್ನು ಎತ್ತಿದ್ದರು. ಇದೀಗ, ಮೈಸೂರಿನ ಸಂಸದ ಮತ್ತು ರಾಜಮನೆತನದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪ್ರತಿಕ್ರಿಯೆಯನ್ನು ನೀಡಿದ್ದಾರೆ. ಸಾಹಿತಿ ಬಾನು ಮುಷ್ತಾಕ್ ದಸರಾ ಉದ್ಘಾಟಿಸುವುದಕ್ಕೆ ನಮ್ಮ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಆದರೆ, ನಾಡದೇವತೆ ಚಾಮುಂಡೇಶ್ವರಿಗಾಗಲಿ ಅಥವಾ ನಾಡಹಬ್ಬ ದಸರಾಗೆ ಯಾವುದೇ ಅಪಚಾರ ಆಗದಂತೆ ನೋಡಿಕೊಳ್ಳುವುದು ಸರ್ಕಾರದ ಕರ್ತವ್ಯ ಎಂದು ಯದುವೀರ್ ಒಡೆಯರ್ ಹೇಳಿದ್ದಾರೆ.

krutika naik

Krutika Naik is an editor and writer at Karnataka Stories, where she covers culture, local news, and inspiring voices from across the state. With a passion for storytelling and a keen eye for detail, Krutika brings real stories to life—one article at a time.

Join WhatsApp

Join Now

RELATED POSTS

Leave a Comment